ಗದಗ | ಸೀತಾರಾಮ್ ಯೆಚೂರಿ ನಿಧನ; ಎಸ್‌ಎಫ್‌ಐನಿಂದ ಸಂತಾಪ

Date:

ದೇಶದ ನಾಡಿಮಿಡಿತ ಅರಿತ ಸಂಸದೀಯ ಪಟು, ಆರ್ಥಿಕ ಸಲಹೆಗಾರ ಸೀತಾರಾಮ್ ಯೆಚೂರಿ ಅವರು 1975ರಲ್ಲಿ ಜೆಎಸನ್‌ಯು ವಿವಿಯಲ್ಲಿ ಅಧ್ಯಯನ ಮಾಡುವ ಸಮಯದಲ್ಲಿ ಅಂದಿನ ಪ್ರಧಾನಮಂತ್ರಿಯಾಗಿದ್ದ ಇಂದಿರಾಗಾಂಧಿ ವಿರುದ್ಧ ಹೋರಾಟ ಮಾಡಿ ಜೈಲಿಗೆ ಸೇರಿದ್ದರು ಮತ್ತು ಉಪಕುಲಪತಿಯ ರಾಜೀನಾಮೆ ಪಡೆಯುವಲ್ಲಿ ಯಶಸ್ವಿಯಾಗಿದ್ದರು ಎಂದು ಎಸ್‌ಎಫ್‌ಐ ಗದಗ ಜಿಲ್ಲಾ ಮುಖಂಡ ಚಂದ್ರು ರಾಠೋಡ ಸ್ಮರಿಸಿದರು.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಭಾರತ ವಿದ್ಯಾರ್ಥಿ ಫೆಡರೇಶನ್(ಎಸ್‌ಎಫ್‌ಐ) ಕಚೇರಿಯಲ್ಲಿ ತಾಲೂಕು ಸಮಿತಿಯಿಂದ ನೇತಾರ ಸೀತಾರಾಮ್ ಯೆಚೂರಿ ಅವರಿಗೆ ಗೌರವ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಎಸ್‌ಎಫ್‌ಐ ಅಖಿಲ ಭಾರತ ಮಾಜಿ ಅಧ್ಯಕ್ಷ ಕಾಮ್ರೇಡ್ ಸೀತಾರಾಮ್ ಯೆಚೂರಿಯವರು ನಮನ್ನಗಲಿದ್ದಾರೆ. ವಿದ್ಯಾರ್ಥಿ ಯುವಜನರು, ರೈತರು, ಕಾರ್ಮಿಕರಪರ ಯಶಸ್ವಿ ಸಂಘರ್ಷಾತ್ಮಕ ಹೋರಾಟಗಳನ್ನು ಕಟ್ಟಿ ಪಾರ್ಲಿಮೆಂಟ್ ಸದಸ್ಯರಾಗಿ ಎರಡುಬಾರಿ ಅತ್ಯುತ್ತಮ ಸಂಸದೀಯ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು” ಎಂದು ಹೇಳಿದರು.

“ಯೆಚೂರಿಯವರು ಸಂಸದೀಯ ಅನೇಕ ಸಮಿತಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ ಮತ್ತು ಆರ್ಥಿಕ ಸಲಹೆ ನೀಡಿದ್ದಾರೆ. ತಮ್ಮ ಜೀವನದ ಕೊನೆವರೆಗೂ ದುಡಿಯುವ ಜನರ ಪರವಾಗಿ, ಕೋಮುವಾದಿ ಫ್ಯಾಸಿಸ್ಟನ್ನು ಹಿಮ್ಮೆಟ್ಟಿಸಲು ಶ್ರಮಿಸಿದ ಕಾಮ್ರೇಡ್ ಸೀತಾರಾಮ್ ಯೆಚೂರಿ ಅವರ ಅಗಲಿಕೆ ದೇಶದ ದುಡಿಯುವ ಜನರ ಚಳವಳಿಗೆ ತುಂಬಲಾರದ ನಷ್ಟವಾಗಿದೆ” ಎಂದು ಕಣ್ಣೀರು ಮಿಡಿದರು.

“ದೇಶದ ಜನರ ನಾಡಿಮಿಡಿತ, ಆರ್ಥಿಕತೆ, ಸಾಮಾಜಿಕತೆ, ರಾಜಕೀಯ, ಸಾಂಸ್ಕೃತಿಕತೆ ಬಗ್ಗೆ ಆಳವಾದ ಅಧ್ಯಯನ ಮಾಡಿದ್ದರು. ಸ್ಪಷ್ಟತೆಯ ನಿಲವು ಹೊಂದಿದ್ದರು, ಸಲಹೆ ನೀಡುತ್ತಿದ್ದರು. ಈಗ ಅವರ ಅಗಲಿಕೆ ದೇಶದ ಪ್ರಜಾಸತ್ತಾತ್ಮಕ ಶಕ್ತಿಗಳಿಗೆ ತುಂಬಲಾರದ ನಷ್ಟ” ಎಂದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಶರಾವತಿ ನದಿ ನೀರು ಬೆಂಗಳೂರಿಗೆ ಹರಿಸುವುದು ಅವೈಜ್ಞಾನಿಕ: ರೈತ ಸಂಘ

ಈ ಸಂದರ್ಭದಲ್ಲಿ ಎಸ್‌ಎಫ್‌ಐನ ಪದಾಧಿಕಾರಿಗಳಾದ ಅನಿಲ್ ರಾಠೋಡ, ಸುದೀಪ್ ಹುಬ್ಬಳ್ಳಿ, ಸಿಪಿಎಂ ಪಕ್ಷದ ನಗರ ಸಮಿತಿ ಕಾರ್ಯದರ್ಶಿ ಮೆಹಬೂಬ್ ಹವಾಲ್ದಾರ್‌, ಕಾರ್ಮಿಕ ಮುಖಂಡರಾದ ಕನಕರಾಯ ಹಾದಿಮನಿ, ಪ್ರಾಕಾಶ ಹೊಸಮನಿ, ಶರಣಪ್ಪ ಗೋಸಾವಿ, ಫೀರೋಜಿ ರಾಮ್‌ಜೀ, ಕಳಕಪ್ಪ ಅವಧೂತ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...