ಗದಗ | ಎಸ್. ಎಮ್. ಭೂಮರೆಡ್ಡಿ ಸರಕಾರಿ ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮ

Date:

Advertisements
  • ಗುಣಮಟ್ಟ ಶಿಕ್ಷಣದಿಂದ ಮಕ್ಕಳ ಭವಿಷ್ಯ ಉಜ್ವಲವಾಗುತ್ತದೆ
  • ಮುಂಡರಗಿಯಲ್ಲಿ ಸರಕಾರಿ ಪ್ರೌಢಶಾಲೆ ಮಂಜೂರಾತಿಗೆ ಪ್ರಯತ್ನ

ಸರಕಾರಿ ಶಾಲೆಗಳ ಬೆಳವಣಿಗೆಯಲ್ಲಿ ಶಿಕ್ಷಕರು ಪಾತ್ರ ಮಹತ್ವವಾದದ್ದು, ಎಲ್ಲರೂ ಕೂಡಿದರೆ ಸರ್ಕಾರಿ ಶಾಲೆಗಳು ಉನ್ನತ ಮಟ್ಟಕ್ಕೆ ಕೊಂಡೊಯ್ಯಬಹುದು ಎಂದು ಮಾಜಿ ಸಚಿವ, ಶಾಸಕ ಎಸ್.ಎಸ್.ಪಾಟೀಲ್ ಹೇಳಿದರು.

ಮುಂಡರಗಿ ಪಟ್ಟಣದ ಎಸ್.ಎಮ್.ಭೂಮರೆಡ್ಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “ಶಿಕ್ಷಕರ ಹಾಗೂ ಪೋಷಕರ ನಡೆ, ನುಡಿ, ಮನ, ಭಾವ, ಶುಚಿಯಾಗಿರಬೇಕು. ಶಿಕ್ಷಣ ವಲಯದಲ್ಲಿ ಎಲ್ಲರು ಕೂಡಿಕೊಂಡರೆ ಸರ್ಕಾರಿ ಶಾಲಾ ಮಕ್ಕಳಿಗೆ ನೈತಿಕ ಮೌಲ್ಯಗಳ ನೀಡಲು ಕೊಡಲು ಸಾಧ್ಯ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಾತಾವರಣ ನಿರ್ಮಿಸಿದ್ದು ಶ್ಲಾಘನೀಯ ಕಾರ್ಯ. ಮುಂಡರಗಿಯಲ್ಲಿ ಸರಕಾರಿ ಪ್ರೌಢ ಶಾಲೆಯ ಅಗತ್ಯವಿದೆ. ಈ ಬಗ್ಗೆ ನಾನು ಅನುಮತಿ ತರುತ್ತೇನೆ. ಆದರೆ ಭೂದಾನಿಗಳು ಮುಂದಾಗಬೇಕು” ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ಜಿ.ಪಂ. ಅಧ್ಯಕ್ಷ ವಾಸಣ್ಣ ಕುರುಡಗಿ ಮಾತನಾಡಿ, “ತಂದೆ -ತಾಯಿ ಹೆದರದವರು, ಗುರುಗಳಿಗೆ ಹೆದರಬೇಕು. ಆಗ ಶಿಕ್ಷಣ ಕಲಿಯಬಹುದು. ಶಿಕ್ಷಕರು‌ ಶಾಲೆಗೆ ಸೂಕ್ತ ಸಮಯಕ್ಕೆ ಬಂದು ಮೌಲ್ಯ ಶಿಕ್ಷಣ ನೀಡಲು ಮುಂದಾಗಬೇಕು. ಗುಣಮಟ್ಟ ಶಿಕ್ಷಣ ಕೊಡದಿದ್ದರೆ ಮಕ್ಕಳ ಉಜ್ವಲ ಭವಿಷ್ಯ ಹಾಳಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಶಿಕ್ಷಕರು ಪ್ರೇರಣೆ ನೀಡಬೇಕು” ಎಂದು ಹೇಳಿದರು.

Advertisements

ನಿಕಟಪೂರ್ವ ಮುಖ್ಯೋಪಾಧ್ಯಾಯ ನಿಂಗು ಸೊಲಗಿ ಪ್ರಾಸ್ತವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಡಿಡಿಪಿಐ ಎಂ.ಎ. ರಡ್ಡೇರ, ಪ್ರಗತಿಪರ ರೈತ ಈಶ್ವರಪ್ಪ ಹಂಚಿನಾಳ, ಮುಖಂಡ ಹೇಮಂತಗೌಡ ಪಾಟೀಲ್, ಕೆ.ಬಿ.ಕೊಣ್ಣೂರ, ನಾಗರಾಜ ಹಳ್ಳಿಕೇರಿ ಸೇರಿದಂತೆ ಶಾಲಾ ಶಿಕ್ಷಕರು ಹಾಗೂ ಹಳೆಯ ವಿದ್ಯಾರ್ಥಿಗಳು, ಪಾಲಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X