ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

Date:

Advertisements

“ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ, ಸಂಧ್ಯಾ ಸುರಕ್ಷಾ,ವಿದವಾ ವೇತನ, ಅಂಗವಿಕಲ ಯೋಜನೆಯಲ್ಲಿ ಅಡಿಯಲ್ಲಿ  ಅಧಿಕಾರಿಗಳ ಅವಾಂತರ ಮತ್ತು ಭ್ರಷ್ಟಾಚಾರ ನಡೆಯುತ್ತಿದ್ದು ಕೂಡಲೇ ಕ್ರಮ ತೆಗೆದುಕೊಳ್ಳಬೇಕು” ಎಂದು ಡಾ.ಬಿ.ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಶಿವಾನಂದ ತಮ್ಮಣ್ಣವರ ಒತ್ತಾಯಿದ್ದಾರೆ.

ಗದಗ ಪಟ್ಟಣದಲ್ಲಿ ಪತ್ರಿಕಾ ಹೇಳಿಕೆ ನೀಡಿದ ಅವರು, “ಮಾನ್ಯ ಆಯುಕ್ತಾಲಯ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳು ಬೆಂಗಳೂರು ಇವರು ದಿನಾಂಕ 6/6/2025ರಂದು ಸಾಮಾಜಿಕ ಭದ್ರತಾ ಯೋಜನಗಳ ಪೈಕಿ ವೃಧ್ಯಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಗಳ ಅಡಿಯಲ್ಲಿ ಪಿಂಚಣಿ ಪಡೆಯುತ್ತಿರುವ ಅನರ್ಹ ಫಲಾನುಭವಿಗಳ ಭೌತಿಕ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿಗಳ ಕಚೇರಿಗೆ ಪತ್ರ ಬರೆಯಲಾಗಿತ್ತು.

“ಮುಂದುವರೆದು ಸಾಮಾಜಿಕ ಭದ್ರತೆ ಯೋಜನೆಗಳ ಭೌತಿಕ ಪರಿಶೀಲನೆ ನಡೆಸಲು ಆಯುಕ್ತಾಲಯದ ತಹಶೀಲ್ದಾರರಾದ ಬಸವರೆಡ್ಡಪ್ಪ ಹೂಗಾರ ಅವರನ್ನು ದಿನಾಂಕ 17.06.2025 ರಿಂದ 19.06.2025ರ ವರೆಗೆ  ಭೌತಿಕ ಪರಿಶೀಲನೆ ಮಾಡಲು ನೀಯೋಜಿಸಲಾಗಿತ್ತು ಗದಗ ಜಿಲ್ಲೆಯ ಎಲ್ಲಾ ತಾಲ್ಲೂಕು ಹೋಬಳಿಗಳಲ್ಲಿ ಪರಿಶೀಲನೆ ಮಾಡಿ ಅನರ್ಹರ ಯಾದಿಯನ್ನು ತಯಾರಿಸಿ ರದ್ದೂಗೊಳಿಸಲು ಮಾನ್ಯ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿತ್ತು. ಆದರೆ ಜಿಲ್ಲಾಧಿಕಾರಿಗಳು 01.07.2025ರ ಹಿಂದಿನ ಅನರ್ಹರ ಯಾದಿ ಇದ್ದರೂ ಸಹ ಸರ್ಕಾರಕ್ಕೆ ವರದಿ ಸಲ್ಲಿಸಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳಲಿಲ್ಲ? ಕಾನೂನು ಸಚಿವರ ಗಮನಕ್ಕೆ ಯಾಕೆ ತರಲಿಲ್ಲ? ಇಲ್ಲಿ ಸೂಕ್ಷ್ಮವಾಗಿ ಗಮನಿದಾಗ ಮಾನ್ಯ ಜಿಲ್ಲಾಧಿಕಾರಿಗಳು ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ನಿಂತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ” ಎಂದು ಹೇಳಿದ್ದಾರೆ.

Advertisements

“ಗದಗ ತಾಲೂಕಿಗೆ ಸಂಬಂಧಪಟ್ಟ ಸಾಮಾಜಿಕ ಭದ್ರತಾ ಯೋಜನೆಯಡಿ ಮಂಜೂರಾದ ಫಲಾನುಭವಿಗಳ ಪಟ್ಟಿ ಹಾಗೂ ದಾಖಲೆಗಳನ್ನು ನಾನು ಮಾಹಿತಿ ಹಕ್ಕಿನಡಿ ಕೇಳಿದಾಗ, ನಿಗದಿತ ಅವಧಿಯೊಳಗೆ ಮಾಹಿತಿಯನ್ನು ನೀಡಿರುವುದಿಲ್ಲ. ಮುಂದುವರೆದು ಪ್ರಥಮ ಮೇಲ್ಮನವಿ ಸಲ್ಲಿಸಿದರೂ ಇದುವರೆಗೂ ವಿಚಾರಣೆಗೆ ಕರಿಯದೆ ಅಪೂರ್ಣ ಮಾಹಿತಿ ನೀಡಿತ್ತಾರೆ.

“ಗದಗ ತಾಲೂಕಿನ ತಹಶೀಲ್ದಾರರಾದ ಶ್ರೀನಿವಾಸಮೂರ್ತಿ ಕುಲಕರ್ಣಿ ಇವರ ಬೇಜವಾಬ್ದಾರಿತನ ಎದ್ದು ಕಾಣುತ್ತದೆ ದಿ. 03-08-2008 ರಿಂದ 01-02-2025ರ ವರೆಗೆ ಹಾಲಿ ಹಾಗೂ ಮಾಜಿ ಅಧಿಕಾರಿಗಳು ಸಹ ಅನರ್ಹ ಫಲಾನುಭವಿಗಳಿಗೆ ವಿವಿಧ ಯೋಜನೆಗಳಿಗೆ ಕಾನೂನು ಬಾಹಿರವಾಗಿ ಸುಮಾರು 25 ರಿಂದ 30 ಸಾವಿರ ಅನರ್ಹ ಫಲಾನುಭವಿಗಳಿಗೆ ಆದೇಶ ಮಾಡಿದ್ದು ಮೇಲ್ನೋಟಕ್ಕೆ ಕಂಡು ಬರುತ್ತದೆ. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಇನ್ನೊಬ್ಬರ ಮುಖಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಆರೋಪಿದ್ದಾರೆ.

“ಇನ್ನು ಹಲವಾರು ಅಧಿಕಾರಿಗಳು ಲಂಚದಸೆಗೆ ಕಾನೂನು ಬಾಹಿರವಾಗಿ ಆದೇಶಗಳನ್ನು ಹೊರಡಿಸಿದ್ದಾರೆ. ಲಂಚದಾಸೆಗೆ   ಸುಮಾರು ಐದು-ಆರು ವರ್ಷಗಳಿಂದ ಇಲ್ಲಿಯೇ ಠಿಕಾಣಿ ಹೂಡಿದ್ದಾರೆ.ಮಾನ್ಯ ಕಾನೂನು ಸಚಿವರು ಇವರ ಮೇಲೆ ತನಿಖೆ ನಡೆಸಲು ತನಿಖಾ ತಂಡ ರಚಿಸಿ ಸೂಚನೆ ನೀಡಬೇಕು ಮುಂದಿನ ದಿನಗಳಲ್ಲಿ ಗದಗ ಜಿಲ್ಲೆಯ ಎಲ್ಲಾ ತಹಶೀಲ್ದಾರ ಹಾಗೂ ಹೋಬಳಿ ಕಾರ್ಯಾಲಯಗಳಲ್ಲಿ ಭ್ರಷ್ಟಾಚಾರ ಮಾಡಿರುವ ಅಧಿಕಾರಿಗಳ ಕರ್ಮಕಾಂಡವನ್ನು ಡಾ. ಬಿ. ಆರ್. ಅಂಬೇಡ್ಕರ ದಲಿತ ಸಂಘರ್ಷ ಸಮಿತಿ ಗದಗ ಜಿಲ್ಲಾ ಘಟಕದ ವತಿಯಿಂದ ಬಯಲಿಗೆ ಎಳೆಯಲಾಗುತ್ತದೆ” ಎಂದು ಶಿವಾನಂದ ತಮ್ಮಣ್ಣವರ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

Download Eedina App Android / iOS

X