ಗದಗ | ಎಲ್ಲ ಜ್ಞಾನಗಳ ಮೂಲ ಜಾನಪದ ಸಾಹಿತ್ಯ: ಡಾ. ರಾಜಶೇಖರ ದಾನರಡ್ಡಿ

Date:

ಎಲ್ಲ ಜ್ಞಾನಗಳ ಮೂಲ ಜಾನಪದ ಸಾಹಿತ್ಯವಾಗಿದೆ. ಜಾನಪದ ಸಾಹಿತ್ಯ ನಮ್ಮ ಬದುಕಿನ ಪ್ರತಿ ಹಂತದಲ್ಲು ಮಾರ್ಗದರ್ಶಿಯಾಗಿ ನಿಂತಿದೆ. ನಿರಕ್ಷರಿಗಳಾದ ಜನಪದರು ಕಾವ್ಯವನ್ನು ರಚಿಸುವ ಸೃಜನಶೀಲ ಗುಣವನ್ನು ಹೊಂದಿದ್ದರು ಎಂದು ಡಾ.ರಾಜಶೇಖರ ದಾನರಡ್ಡಿ ಹೇಳಿದ್ದಾರೆ.

ಗದಗದಲ್ಲಿರುವ ಜಗದ್ಗುರು ತೋಂಟದಾರ್ಯ ಮಹಾವಿದ್ಯಾಲಯದಲ್ಲಿ ನಡೆದ ‘ಜಾನಪದ ಸಾಹಿತ್ಯ’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಭತ್ತ, ರಾಗಿಯನ್ನು ಕುಟ್ಟುವಾಗ, ಬೀಸುವಾಗ ಮತ್ತು ಹಂತಿ ಹೊಡೆಯುವಾಗ ದೇಹದ ದಣಿವನ್ನು ನೀಗಿಸಿಕೊಳ್ಳಲು ಹಳ್ಳಿಯ ಜನ ಜನಪದ ಹಾಡುಗಳನ್ನು ತ್ರಿಪದಿ ಹಾಗೂ ಪ್ರಾಸ ರೂಪದಲ್ಲಿ ರಚಿಸುತ್ತಿದ್ದರು. ಅವು ಬಾಯಿಂದ ಬಾಯಿಗೆ ಪರಂಪರಾಗತವಾಗಿ ಮುಂದುವರೆದುಕೊಂಡು ಬಂದವು. ಇಂದಿನ ಆಧುನಿಕ ಬದುಕು ಕೇವಲ ಮೊಬೈಲ್‌ ಬಳಕೆಗೆ ಸೀಮಿತವಾಗಿರುವುದು ದುರಾದೃಷ್ಟಕರ ಸಂಗತಿ” ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಕಲ್ಲಯ್ಯ ಹಿರೇಮಠ, “ಸಂಶೋಧಕ ಒಬ್ಬ ಸೃಜನಶೀಲ ಲೇಖಕ ಹಾಗೂ ವಿಮರ್ಶಕನಾಗಿರಬೇಕು. ತಾಳ್ಮೆ, ಸಹನೆ, ಸಮಯಪ್ರಜ್ಞೆ ಮತ್ತು ಕ್ಷೇತ್ರಕಾರ್ಯದ ಜ್ಞಾನ ಹೊಂದಿರಬೇಕು. ಸತ್ಯ ಶೋಧನೆ ಸಂಶೋಧಕನ ಮುಖ್ಯ ಗುಣವಾಗಿರಬೇಕು. ಸಂಶೋಧನೆ ಕಾರಣದಿಂದ ಜಗತ್ತಿನ ಕೆಲವು ರಾಷ್ಟ್ರಗಳು ಚಂದ್ರಯಾನದಂತಹ ಕಾರ್ಯಗಳಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾರ್ಯಕ್ರಮದಲ್ಲಿ ಡಾ.ಅಂದಯ್ಯ ಅರವಟಗಿಮಠ, ಪ್ರೊ. ಜಿ ವಿಶ್ವನಾಥ, ಡಾ. ನಾಗರಾಜ ಬಳಿಗೇರ, ಪ್ರೊ. ಶಂಭು ತಮ್ಮನಗೌಡ್ರ, ಸುಶ್ಮೀತಾ ಪೂಜಾರ ಸೇರಿದಂತೆ ಹಲವಾರು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ‘ಸೊಳ್ಳೆ ಉತ್ಪಾದನಾ ಕೇಂದ್ರ’ವಾದ ವೈದ್ಯಕೀಯ ಕಾಲೇಜು; ಕಣ್ಮುಚ್ಚಿ ಕುಳಿತ ಅಧಿಕಾರಿಗಳು!

ಇಡೀ ರಾಜ್ಯದಲ್ಲಿ ಡೆಂಘೀ ಜ್ವರ ಹರಡುತ್ತಾ ಇರುವಾಗ ನೈರ್ಮಲ್ಯ ಕಾಪಾಡಿ, ನೀರು...

ವಿಜಯಪುರ | ಎನ್‌ಎಸ್‌ಎಸ್ ಸ್ವಯಂ ಸೇವಕರಲ್ಲಿ ತಾಳ್ಮೆ, ಶಿಸ್ತಿನ ಜೊತೆಗೆ ಧೈರ್ಯ ತುಂಬುತ್ತದೆ: ಡಾ.ಪ್ರತಾಪ್ ಲಿಂಗಯ್ಯ

"ಎನ್‌ಎಸ್‌ಎಸ್ ಎಂಬುದು ಮನುಷ್ಯನಲ್ಲಿ ಸಹನೆ, ತಾಳ್ಮೆ ಹಾಗೂ ಶಿಸ್ತಿನ ಜೊತೆಗೆ ಧೈರ್ಯವನ್ನು...

ವಿಜಯಪುರ | ನೂತನ ವಸತಿ ನಿಲಯ ಮಂಜೂರು ಮಾಡುವಂತೆ ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ವಿಜಯಪುರ ನಗರದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದಲ್ಲಿ ಹಿಂದುಳಿದ ವರ್ಗಗಳ ಮತ್ತು...

ಚಿಕ್ಕಬಳ್ಳಾಪುರ | ಶಾಶ್ವತ ನೀರಾವರಿ ಯೋಜನೆಗಾಗಿ ಪ್ರಧಾನಿ ಭೇಟಿ : ಶಾಸಕ ಸಮೃದ್ಧಿ ಮಂಜುನಾಥ್‌ ವಾಗ್ದಾನ

"ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ತರುವ ಕುರಿತು ಪ್ರಧಾನಿ ಮೋದಿ ಭೇಟಿಗೆ...