ಶಿಕ್ಷಣದ ಹಕ್ಕಿಗಾಗಿ, ಖಾಸಗೀಕರಣ ವಿರೋಧಿಸಿ ವಿದ್ಯಾರ್ಥಿನಿಯರಿಗೆ ಸಮಾನ ಗುಣಮಟ್ಟದ ಶಿಕ್ಷಣ ಹಾಗೂ ಘನತೆಯ ಬದುಕಿಗಾಗಿ ರಾಜ್ಯ ಮಟ್ಟದ ಸಮಾವೇಶವನ್ನು ಕಲಬುರಗಿಯಲ್ಲಿ ಡಿ.01 ಮತ್ತು 02ರಂದು ಆಯೋಜಿಸಿದೆ.
ಈ ಸಮಾವೇಶಕ್ಕೆ ರಾಜ್ಯದ ಎಲ್ಲಾ ಜಿಲ್ಲೆಯಿಂದಲೂ ವಿದ್ಯಾರ್ಥಿನಿಯರನ್ನು ಪ್ರತಿನಿಧಿಸಿ 250 ಜನ ವಿದ್ಯಾರ್ಥಿನಿಯರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದು, ಗದಗ ಜಿಲ್ಲೆಯಿಂದಲೂ ವಿದ್ಯಾರ್ಥಿನಿಯರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಎಸ್‌ಎಫ್‌ಐ ರಾಜ್ಯ ಪದಾಧಿಕಾರಿ ಗಣೇಶ ರಾಠೋಡ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿನಿಯರು ಶೈಕ್ಷಣಿಕ ವಲಯದಲ್ಲಿ ತಮ್ಮದೇ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಶಿಕ್ಷಣ ಸಂಸ್ಥೆಗಳನ್ನು ಪ್ರಜಾಸತ್ತಾತ್ಮಕಗೊಳಿಸಬೇಕು. ಸ್ಟೂಡೆಂಟ್ ಯೂನಿಯನ್ಸ್ ಮತ್ತು ತರಗತಿಯ ಪ್ರತಿನಿಧಿಗಳ ಆಯ್ಕೆಯಲ್ಲೂ ಕಡ್ಡಾಯವಾಗಿ ವಿದ್ಯಾರ್ಥಿನಿಯರಿಗೆ ಪ್ರಾತಿನಿಧ್ಯ ನೀಡಬೇಕು. ವರ್ಷದಲ್ಲಿ ಎರಡು ಸಲವಾದರು ಯುವತಿಯರ ಆರೋಗ್ಯ ತಪಾಸಣೆ ಮಾಡಬೇಕು. ಆರೋಗ್ಯ ಸೇವೆಗಳನ್ನು ಒದಗಿಸಬೇಕು. ಲೈಂಗಿಕ ಕಿರುಕುಳ ವಿರೋಧಿ ಸಮಿತಿಯನ್ನು ಮತ್ತು ದೂರು ಪೆಟ್ಟಿಗೆಗಳನ್ನು ಎಲ್ಲಾ ಶಾಲಾ ಕಾಲೇಜುಗಳಲ್ಲಿ ರಚಿಸಬೇಕು. ವರ್ಮಾ ಸಮಿತಿ ಶಿಪಾರಸ್ಸುಗಳನ್ನು ಜಾರಿ ಮಾಡಬೇಕು ಎಂದು ಸಂಗಿತಾ ಕೆ. ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರಾದ ಚಂದ್ರು ರಾಠೋಡ, ವಾಣಿ, ಅಶ್ವಿನಿ, ಹೇಮಾ, ಶಂಕ್ರಮ್ಮ, ಎಸ್‌ಎಫ್‌ಐನ ತಾಲೂಕು ಮುಖಂಡ ಪ್ರದೀಪ್, ಶರಣು, ಮಹಂತೇಶ ಹಾಗೂ ಇತರರು ಉಪಸ್ಥಿತರಿದ್ದರು.