ಗದಗ |  ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಸ್ ಎಫ್ ಐ ಆಗ್ರಹ

Date:

“ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಖುಷಿ ನಿನ್ನೆ ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ಸರಿಯಾದ ಕಾರಣ ಗೊತ್ತಾಗಿಲ್ಲ’ ಎಂದು ವರದಿಯಾಗಿದೆ. ಸರಿಯಾಗಿ ನಿಷ್ಪಕ್ಷಪಾತ ತನಿಖೆ ಮಾಡಿ ನ್ಯಾಯ ಒದಗಿಸಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು” ಎಸ್ ಎಫ್ ಐ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ್ ಒತ್ತಾಯಿಸಿದರು.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ವಿದ್ಯಾರ್ಥಿನಿ ಸಂಶಯಾಸ್ಪದ ಸಾವು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಎಸ್ ಎಫ್ ಐ ತಾಲೂಕು ಶಿರಸ್ತೇದಾರ್ ಪಿ ಬಿ ಶಿಂಗ್ರೀ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಈ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರು ಅವರಿಗೆ ತಕ್ಕ ಶಿಕ್ಷೆ ಆಗಬೇಕು. ಇದಕ್ಕೆ ಯಾವುದೇ ಜಾತಿ ಧರ್ಮದ ಬಣ್ಣ ಹಚ್ಚದೆ ತಪ್ಪು ಮಾಡಿದವರಿಗೆ ಶಿಕ್ಷೆ ನೀಡುವ ಕೆಲಸ ಮಾಡಬೇಕೆಂದು” ಎಸ್ ಎಫ್ ಐ ತಾಲ್ಲೂಕು ಸಮಿತಿಯು ಒತ್ತಾಯಿಸುತ್ತದೆ” ಎಂದು ಹೇಳಿದರು.

ಎಸ್ ಎಫ್ ಐ ರಾಜ್ಯ ಉಪಾಧ್ಯಕ್ಷ ಗಣೇಶ್ ರಾಠೋಡ್ ಮಾತನಾಡಿ, “ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆಯುವ ದೌರ್ಜನ್ಯದ ವಿರುದ್ಧ, ಲೈಂಗಿಕ ಕಿರುಕುಳ ವಿರೋಧಿ ಸಮಿತಿಯನ್ನು ರಚಿಸಲು ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಪಾಲಿಸಬೇಕು. ವರ್ಮಾ ಸಮಿತಿಯ ಶಿಪಾರಸ್ಸಿನಂತೆ  ಎಲ್ಲಾ ಶಾಲಾ ಕಾಲೇಜುಗಳಲ್ಲಿ ಲೈಂಗಿಕ ಕಿರುಕುಳ ವಿರೋಧಿ ಸಮಿತಿಯನ್ನು ರಚಿಸಿ. ದೂರು ಪೆಟ್ಟಿಗೆಗಳನ್ನು ಅಳವಡಿಸಬೇಕು. ದೂರು ನಿರ್ವಹಣಾ ಸಮಿತಿಯನ್ನು ರಚಿಸಿ, ಬಂದ ದೂರುಗಳನ್ನು 15 ದಿನ, ತಿಂಗಳಿಗೊಮ್ಮೆ ತಗೆದು ದೂರುಗಳನ್ನು ನಿವಾರಿಸುವ ಕೆಲಸವನ್ನು ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಗವಿಸಿದ್ಧೇಶ್ವರ ಜಾತ್ರೆ; ಈ ಬಾರಿ ಅನ್ನದಾಸೋಹದಲ್ಲಿ ಜಿಲೇಬಿ ಸಿಹಿ!

ಮನವಿ ಸಂದರ್ಭದಲ್ಲಿ ಡಿ ವೈ ಎಫ್ ಐ ಮುಖಂಡರು ಶಿವಾಜಿ ಜಿ, ಕನಕಪ್ಪ ಹಾದಿಮನಿ, ತಾಲ್ಲೂಕು ಎಸ್ ಎಫ್ ಐ ಮುಖಂಡರು ಹನುಮಂತ ಎಂ, ರಮೇಶ್ ಕೆ, ಕೃಷ್ಣ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...