ಗದಗ | ದಮನನಿತರ ಧ್ವನಿಯಾದ ಭಾರತ ವಿದ್ಯಾರ್ಥಿ ಫೆಡರೇಷನ್‌ಗೆ 54ರ ಸಂಭ್ರಮ

Date:

Advertisements

ದಮನಿತರ ದ್ವನಿಯಾಗಿ ಭಾರತ ವಿದ್ಯಾರ್ಥಿ ಫೆಡರೇಷನ್‌(ಎಸ್‌ಎಫ್‌ಐ) ಕಾರ್ಯ ಮಾಡುತ್ತಿದೆ. ಕಳೆದ 54 ವರ್ಷಗಳಿಂದ ವಿದ್ಯಾರ್ಥಿ ಹಕ್ಕುಗಳ ರಕ್ಷಣೆಗೆ, ಶಿಕ್ಷಣದ ಉಳಿವಿಗಾಗಿ, ಸೈದ್ದಾಂತಿಕ ಮತ್ತು ಶೈಕ್ಷಣಿಕ ಚಳವಳಿಯನ್ನು ನಿರಂತರವಾಗಿ ಮುಂದುವರಿಸಿದೆ ಎಂದು ಎಸ್‌ಎಫ್‌ಐ ರಾಜ್ಯ ಪದಾಧಿಕಾರಿ ಗಣೇಶ ರಾಠೋಡ್ ತಿಳಿಸಿದರು.

ಗದಗ ನಗರದ ಎಸ್‌ಎಫ್‌ಐ ಕಚೇರಿಯಲ್ಲಿ ಹಮ್ಮಿಕೊಂಡಿದ್ದ 54ನೇ ಸಂಸ್ಥಾಪನಾ ದಿನಾಚರಣೆಯಲ್ಲಿ  ಎಸ್‌ಎಫ್‌ಐ ಧ್ವಜಾರೋಹಣ ಮಾಡಿ ಮಾತನಾಡಿದರು.

“ಅದೇ ರೀತಿ ಕುವೆಂಪು ಅವರ ಜನ್ಮದಿನವಾದ ಇಂದು ಅವರು ʼಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳುʼ ಎಂದು ಹೇಳಿದಂತೆ ಸಮಾನತೆಯ ಶಿಕ್ಷಣಕ್ಕಾಗಿ ಮತ್ತು ಸ್ವಾತಂತ್ರ್ಯ ಪ್ರಜಾಪ್ರಭುತ್ವ ಸಮಾಜವಾದಕ್ಕಾಗಿ ನಿರಂತರ ಹೋರಾಟ ಮಾಡುತ್ತಿದೆ. ಶೋಷಿತರ, ದಮನಿತರ ಧ್ವನಿಯಾಗಿ ಎಸ್‌ಎಫ್‌ಐ ಕಾರ್ಯ ಮಾಡುತ್ತಿದೆ” ಎಂದರು.

Advertisements

ಕಾರ್ಮಿಕ ಮುಖಂಡ ಮಹೇಶ್ ಹಿರೇಮಠ ಮಾತನಾಡಿ, “ನಿವೆಲ್ಲಾ ರೈತ, ಕಾರ್ಮಿಕ, ಕೃಷಿ ಕೂಲಿಕಾರರ ಮಕ್ಕಳು ನಿಮ್ಮ ಹಕ್ಕುಗಳಿಗಾಗಿ ನಡೆಯುವ ಚಳವಳಿಯ ಜೊತೆ ನಿಲ್ಲಬೇಕು. ಸದಾ ನಿಮ್ಮ ಬೆಂಬಲಕ್ಕೆ ಇರುತ್ತೇವೆ. ಕುವೆಂಪು ಅವರು ಹೇಳಿದ ಹಾಗೆ ಸರ್ವಜನಾಂಗದ ಶಾಂತಿಯ ತೋಟವನ್ನು ಎಲ್ಲರೂ ಸೇರಿ ರಕ್ಷಿಸಬೇಕು. ಉದ್ಯೋಗದ ಅಭದ್ರತೆ ಹೆಚ್ಚುತಿದ್ದು, ಸರ್ಕಾರದ ನೀತಿಗಳು ಕಾರ್ಪೊರೇಟ್ ಪರ ಇವೆ. ಅದಕ್ಕೆ ಕಾರ್ಮಿಕ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ತಡೆಯಲು ಎಸ್‌ಎಫ್‌ಐ ಪಾತ್ರ ಮಹತ್ತದ್ದು, ಹಾಗಾಗಿ ನೀವು ಈ ಸಂಸ್ಥಪನಾ ದಿನದಂದು ಸಂಕಲ್ಪ ಮಾಡಿ ವಿದ್ಯಾರ್ಥಿ ಸಂಘಟನೆಯನ್ನು ಬಲಗೊಳಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಕುವೆಂಪು ಚಿಂತನೆಗಳನ್ನು ಆತ್ಮದಲ್ಲಿ ಸ್ಥಾಪಿಸಿಕೊಳ್ಳಬೇಕು: ಹಿರಿಯ ಸಾಹಿತಿ ಕಾಳೇಗೌಡ ನಾಗವಾರ 

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಮುಖಂಡ ಚಂದ್ರು ರಾಠೋಡ್, ತಾಲೂಕು ಮುಖಂಡ ಶರಣು ಎಂ, ಸುಮಾ, ಮಂಜುಳಾ, ಸರಳಾ, ಸುಜಾತಾ, ಮುಸ್ಕಾನ್, ನಿವೇದಿತಾ, ಶ್ರೇಯಾ, ವೀಣಾ, ರೋಹಿಣಿ, ಅಶ್ವಿನಿ, ರಕ್ಷಿತಾ, ಶ್ರೀದೇವಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X