ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ಹೋಗಲು ಸಾರಿಗೆ ಬಸ್ ಬರುತ್ತಿಲ್ಲ. ಇದರಿಂದ ನಮ್ಮ ವಿದ್ಯಾಭ್ಯಾಸಕ್ಕೆ ಬಹಳ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ.
ಗದಗ ಜಿಲ್ಲೆಯ ಗಜೆಂದ್ರಗಡ ಪಟ್ಟಣದ ಬಸ್ ನಿಲ್ದಾಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಸರಕಾರದ ವಿರುದ್ದ ಘೋಷಣೆ ಕೂಗಿದರು.
“ಸಾಕಷ್ಟು ಹಳ್ಳಿಗಳಿಗೆ ಸರಿಯಾದ ಸಮಯಕ್ಕೆ ಬಸ್ಸುಗಳು ಬರುತ್ತಿಲ್ಲ.ಕಾಲೇಜಿಗೆ ತಡವಾಗಿ ಹೋಗುತ್ತಿದ್ದೇವೆ . ಕ್ಲಾಸುಗಳು ತಪ್ಪುತ್ತಿವೆ. ಬಸ್ಸುಗಳನ್ನು ಬೀಡುವಂತೆ ಸಾಕಷ್ಟು ಮನವಿ ಮಾಡಿದರೂ, ಯಾವುದೇ ರೀತಿಯ ಕ್ರಮ ತಗೊಂಡಿಲ್ಲ. ಇದರಿಂದ ಬಸ್ಸುಗಳನ್ನು ತಡೆದು ಪ್ರತಿಭಟನೆ ಮಾಡುತ್ತಿದ್ದೇವೆ. ಸರಿಯಾದ ಸಮಯಕ್ಕೆ ಬಸ್ಸುಗಳನ್ನು ಬಿಡುವವರೆಗೂ ನಾವು ಪ್ರತಿಭಟನೆ ನಡೆಸುತ್ತೇವೆ” ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದಿರಾ? ಹಾವೇರಿ | ಮಧ್ಯವರ್ತಿಗಳ ಹಾವಳಿ ತಡೆಗಟ್ಟಲು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ…
ಸ್ಥಳಕ್ಕೆ ಆಗಮಿಸಿದ ಗಜೇಂದ್ರಗಡ ಕೆಎಸ್‌ಆರ್‌ಟಿಸಿ ಘಟಕದ ಮಾನ್ಯೇಜರ್, ಸರಿಯಾದ ಸಮಯಕ್ಕೆ ಇನ್ನೂ ಮುಂದೆ ಬಸ್ಸಗಳನ್ನು ಬಿಡಲು ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ಕೊಟ್ಟ ಮೇಲೆ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ವರದಿ: ಮಂಜುನಾಥ ಬುರಡಿ, ಮೀಡಿಯಾ ವಾಲಂಟಿಯರ್