ಗದಗ | ವಿದ್ಯಾರ್ಥಿಗಳು ಬದುಕಿನಲ್ಲಿ ಸಾಧನೆಯ ಹಂಬಲ ಹೊಂದಿರಬೇಕು: ವೀರಯ್ಯ ವಿ. ವಸ್ತ್ರದ

Date:

“ವಿದ್ಯಾರ್ಥಿಗಳು ಬದುಕಿನಲ್ಲಿ ಸಾಧನೆಯ ಹಂಬಲ ಹೊಂದಿರಬೇಕು. ಜತೆಗೆ ನಿರಂತರವಾಗಿ ಅಧ್ಯಯನ ಶೀಲತೆ ಅಳವಡಿಸಿಕೊಂಡಾಗ ಉನ್ನತ ಹುದ್ದೆಗಳನ್ನು ಪಡೆಯಬಹುದು” ಎಂದು  ಅನ್ನದಾನೇಶ್ವರ ಪಿಯು ಕಾಲೇಜಿನ ಚೇರಮನ್ನರು ವೀರಯ್ಯ ವಿ. ವಸ್ತ್ರದ  ಹೇಳಿದರು.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ನಗರದ ಪುರ್ತಗೇರಿ ಕ್ರಾಸ್‌ ಬಳಿ ಇರುವ ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಪ್ರಸಕ್ತ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ವಿವಿಧ ಸಾಂಘಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ʼವಿರಾಟ್-2026ʼ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ಒಂದು ನಿರ್ಧಾರ ಕೈಗೊಂಡಾಗ ಅದನ್ನು ಪೂರ್ಣಗೊಳಿಸದೇ ಹಿಂದೆ ಸರಿಯಬಾರದು. ಅದಕ್ಕೆ ಬೇಕಾದ ಪ್ರಯತ್ನವನ್ನು ನಿರಂತರವಾಗಿ ಮಾಡಬೇಕು. ಪಿಯುಸಿಯಲ್ಲಿ ಪರೀಕ್ಷೆಗೆ ತಯಾರಿ ನಡೆಸುವಾಗ ಗುರುಗಳ ಪಾಠ ಆಲಿಸಿ ಅರ್ಥೈಸಿಕೊಂಡು ಸಮರ್ಥವಾಗಿ ಎದುರಿಸಬೇಕು” ಎಂದರು.

ಉಪನ್ಯಾಸ ನೀಡಿದ ಗಜೇಂದ್ರಗಡದ ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯ ಬಸವಂತಪ್ಪ ಹೊಸಳ್ಳಿ ಮಾತನಾಡಿ, “ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಗುರಿ ಇಟ್ಟುಕೊಳ್ಳುವ ಸಂಕಲ್ಪ ಮಾಡಬೇಕು. ಮಾನಸಿಕ ಸಾಮರ್ಥ್ಯ ಉತ್ತಮವಾಗಿದ್ದು ಪರಿಶ್ರಮ ವಹಿಸಿದರೆ ಏನನ್ನಾದರೂ ಸಾಧಿಸಬಹುದು” ಎಂದರು.

“ಪ್ರತಿಯೊಬ್ಬರು ಮಾಡುವ ಕೆಲಸದಲ್ಲಿ ಶ್ರದ್ಧೆ , ಜಾವಾಬ್ದಾರಿ, ಪ್ರಾಮಾಣಿಕತೆ ಇರಬೇಕು. ಇದಕ್ಕೆ ಇರುವ ಮೂಲ ಗುಣವೆಂದರೆ ದೊಡ್ಡಗುರಿ ಇಟ್ಟುಕೊಳ್ಳಬೇಕು. ಶರೀರಕ್ಕೆ ಶಕ್ತಿ ಬೇಕಾದರೆ, ಮನಸ್ಸು ಹೇಳಿದ್ದನ್ನು ದೇಹ ಮಾಡಿದರೆ ಮಾತ್ರ ಸಾಮಾನ್ಯರು ಅಸಾಮಾನ್ಯ ಸಾಧನೆ ಮಾಡಲು ಸಾಧ್ಯ” ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನರೇಗಲ್‌ನ ಅನ್ನದಾನೇಶ್ವರ ಪದವಿ ಕಾಲೇಜಿನ ಪ್ರಾಚಾರ್ಯ ಎಸ್.‌ ಜಿ. ಕೇಶಣ್ಣವರ, “ವಿದ್ಯಾರ್ಥಿಗಳು ಜೀವನದಲ್ಲಿ ದೊಡ್ಡ ಸಾಧನೆ ಮಾಡುವ ಸಂಕಲ್ಪ ಹೊಂದಿರುವುದು ಅತ್ಯಗತ್ಯ. ಇದು ವಿದ್ಯಾರ್ಥಿಗಳಲ್ಲಿ ಸ್ಪಷ್ಟ ಗುರಿಯನ್ನು, ಆತ್ಮವಿಶ್ವಾಸವನ್ನು ಮತ್ತು ಕಠಿಣ ಪರಿಶ್ರಮ ಮಾಡುವ ಛಲವನ್ನು ಬೆಳೆಸುತ್ತದೆ. ಸಣ್ಣ ಕನಸುಗಳ ಬದಲು ದೊಡ್ಡ ಗುರಿಗಳನ್ನು ಇಟ್ಟುಕೊಂಡಾಗ ಮಾತ್ರ, ತಮ್ಮ ಪೂರ್ಣ ಸಾಮರ್ಥ್ಯವನ್ನು ಬಳಸಲು ಸಾಧ್ಯವಾಗುತ್ತದೆ” ಎಂದರು.

ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ಶೈಕ್ಷಣಿಕ ಸಲಹೆಗಾರ ಬಿ. ಎಸ್. ಗೌಡರ ಮಾತನಾಡಿ, “ವಿದ್ಯಾರ್ಥಿಗಳು ಉತ್ತಮ ಜೀವನ ನಡೆಸಲು ಕೇವಲ ಅಂಕಗಳಷ್ಟೆ ಸಾಲದು ಅದರೊಂದಿಗೆ ಉತ್ತಮ ಸಂಸ್ಕಾರಗಳಿಂದ ಕೂಡಿದ ಆದರ್ಶ ವ್ಯಕ್ತಿತ್ವ ಕೂಡ ಅಗತ್ಯ ಆದ್ದರಿಂದ ಜ್ಞಾನ ಜತೆ ಸಂಸ್ಕಾರ, ಸಂಸ್ಕೃತಿ ಮರೆಯಬಾರದು” ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಗಜೇಂದ್ರಗಡ ಅನ್ನದಾನೇಶ್ವರ ಪಿಯು ಕಾಲೇಜಿನ ಪ್ರಾಚಾರ್ಯ ವಸಂತರಾವ್‌ ಗಾರಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪದವಿ ಕಾಲೇಜುಗಳ ಪ್ರಾಚಾರ್ಯರಾದ ಬಸವಂತಪ್ಪ ಹೊಸಳ್ಳಿ ಮತ್ತು ಎಸ್.‌ ಜಿ. ಕೇಶಣ್ಣವರ ಹಾಗೂ ದ್ವಿತೀಯ ಪಿಯು ಕಂಪ್ಯೂಟರ್‌ ಸೈನ್ಸ್‌ ವಿಷಯದಲ್ಲಿ ಶೇ 100 ರಷ್ಟು ಫಲಿತಾಂಶ ದಾಖಲಿಸಿದ ಉಪನ್ಯಾಸಕ ಚಂದ್ರು ಎಂ. ರಾಥೋಡ್‌ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಗಜೇಂದ್ರಗಡ ಅನ್ನದಾನೇಶ್ವರ ಪಿಯು ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಮುದಕಪ್ಪ ತೊಂಡಿಹಾಳ, ಶೈಕ್ಷಣಿಕ ಮೇಲ್ವಿಚಾರಕ ಶಿವಾನಂದ ಮಠದ, ಗಜೇಂದ್ರಗಡದ ಕುಮಾರೇಶ್ವರ ವಾಣಿಜ್ಯ ಪದವಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಎಂ. ಪಿ. ಪಾಟೀಲ, ನರೇಗಲ್ ಅನ್ನದಾನೇಶ್ವರ ಪಿಯು ಕಾಲೇಜಿನ ಚೇರ್ಮನ್ ಎಂ. ಜಿ. ಸೋಮನಕಟ್ಟಿ, ಗಜೇಂದ್ರಗಡದ ಅನ್ನದಾನೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಚೇರ್ಮನ್ ಪಿ. ಎನ್. ಚವಡಿ ಇದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮರಗಳೇ ಇಲ್ಲದ ಜಾಗಕ್ಕೆ ಅರಣ್ಯ ಇಲಾಖೆಯ ಆಕ್ಷೇಪ; ಸಾರ್ವಜನಿಕರ ಆಕ್ರೋಶ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ...

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ...

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು...

ಸಾಗರ | ತಾಲೂಕು ಮಟ್ಟದ ಪ್ರಜಾಸೇವೆ ಸಭೆ; 500ಕ್ಕೂ ಹೆಚ್ಚು ಅರ್ಜಿಗಳ ಸ್ವೀಕಾರ

ಸಾಗರ ತಾಲೂಕಿನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ ಎಂಬ...