ಗದಗ | ಕಾಲಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಕೌಶಲ್ಯ ಅಭಿವೃದ್ಧಿ ಪಡಿಸಿಕೊಳ್ಳಬೇಕು: ಸಚಿವ ಡಾ ಶರಣ ಪ್ರಕಾಶ ಪಾಟೀಲ್

Date:

Advertisements

“ಅಭ್ಯರ್ಥಿಗಳು ವೇಗವಾಗಿ ಸಾಗುವ ಕಾಲಕ್ಕೆ ತಕ್ಕಂತೆ ತಮ್ಮ ಕೌಶಲ್ಯ ವನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕು” ಎಂದು ಕರ್ನಾಟಕ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ದೀ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು.

ಗದಗ ಪಟ್ಟಣದ ಕೆ ಎಚ್ ಪಾಟೀಲ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಶುಕ್ರವಾರ ಅಪ್ರೆಂಟಿಸ್ ತರಬೇತಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನೇಮಕಾತಿ ಆದೇಶವನ್ನು ವಿತರಣೆ ಮಾಡಿ ಮಾತನಾಡಿದರು.

“ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ಬೇರೆ ಸ್ಥಳಗಳಿಗೆ ಹೋದಾಗ ಊಟ ಸರಿಯಿಲ್ಲವೆಂದೋ, ತಂದೆ ತಾಯಿಯವರನ್ನು ಬಿಟ್ಟು ಇರಬೇಕೆಂದೊ ನೆಪ ಒಡ್ಡಿ ಸಿಕ್ಕಂತಹ ಅವಕಾಶವನ್ನು ತೊರೆದಂತಹ ಹಲವು ಪ್ರಸಂಗಗಳಿವೆ. ಹಾಗಾಗಿ ವಿದ್ಯಾರ್ಥಿಗಳು ಕೆಲಸ ಸಿಕ್ಕ ಮೊದಲ ದಿನಗಳಲ್ಲಿ ಎದುರಾಗುವ ಕಷ್ಟಗಳನ್ನು ಸಹಿಸಿಕೊಳ್ಳಬೇಕು. ಅಂದಾಗ ಅಭ್ಯರ್ಥಿಗಳಿಗೆ ಕಂಪನಿಗಳಿಂದ ಉತ್ತಮ ಅವಕಾಶಗಳು ಒದಗಿ ಬರುತ್ತವೆ” ಎಂದರು.

Advertisements

“ಕಂಪನಿಗಳಲ್ಲಿ ಉದ್ಯೋಗಕ್ಕಾಗಿ ಸೇರಿದಾಗ ಉತ್ಪಾದನೆ ಮತ್ತು ಕಂಪನಿಯಲ್ಲಿ ಕಾರ್ಯನಿರ್ವಹಿಸಬೇಕಾದ ಕೌಶಲ್ಯಗಳ ಅಭಿವೃದ್ಧಿ ಜೊತೆಗೆ ಒಟ್ಟಾರೆ ಕಂಪನಿ ಯಾವ ರೀತಿ ನಿರ್ವಹಣೆಗೊಳ್ಳುತ್ತದೆ ಎಂದುದರ ಬಗ್ಗೆ ವಿಶೇಷ ಆಸಕ್ತಿವಹಿಸಬೇಕು.  ಕಲಿತ ಕೌಶಲ್ಯ ವನ್ನು ಕಾಲಕ್ಕೆ ತಕ್ಕಂತೆ ಅಭಿವೃದ್ಧಿ ಪಡಿಸಿಕೊಳ್ಳಬೇಕು ಮತ್ತು ಉತ್ತಮ ಸಂಭಾಷಣೆ ಕೌಶಲ್ಯ ವನ್ನು ಹೊಂದಬೇಕು ಜೀವನದಲ್ಲಿ ಒಳ್ಳೆಯದಾಗಲಿ” ಎಂದು ನುಡಿದರು.
ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಸರ್ಕಾರಿ ಐಟಿಐ ಕಾಲೇಜಿನಲ್ಲಿ ಕಲಿತ 2000 ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ದೊಡ್ಡ ಖಾಸಗಿ ಸಂಸ್ಥೆಯಲ್ಲಿ 20 ಸಾವಿರ ಸಂಬಳವನ್ನು ಕೊಡುತ್ತಾರೆ. ಅದನ್ನು ವಿದ್ಯಾರ್ಥಿಗಳು ಉಪಯೋಗ ಪಡೆದು ಕಷ್ಟಪಟ್ಟು ಶ್ರದ್ಧೆಯಿಂದ  ಕಲಿಯಬೇಕು. ತಮ್ಮ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಗದಗ ತಾಲೂಕ ಗ್ಯಾರಂಟಿ ಸಮಿತಿ ಸದಸ್ಯ ಕೃಷ್ಣಗೌಡ ಪಾಟೀಲ ಮಾತನಾಡಿ, “ಅಪ್ರೆಂಟಿಸ್ ಪ್ರಕ್ರೀಯೆಯಲ್ಲಿ 290 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ 170 ಜನ ಆಯ್ಕೆ  ಆಗಿರುವುದು  ಸಂತೋಷ ತಂದಿದೆ. ಯುವಕರು ತಮಗೆ ಆಸಕ್ತಿಯಿರುವ  ಯಾವುದೇ ಕೌಶಲ್ಯ ಅಭಿವೃದ್ಧಿಯ ಪ್ರಕ್ರೀಯೆಯನ್ನು  ನಿರಂತರವಾಗಿ ಮಾಡುತ್ತಿರಬೇಕು. ಕೆಲಸದ ಪ್ರಾರಂಭದಲ್ಲಿ ಕಡಿಮೆ ಸಂಬಳ ಸಿಗುವ ಕಾರಣ ವೊಡ್ಡಿ ಕಲಿಕೆಯನ್ನು ಬಿಡಬಾರದು ಇಂದಿನ ದಿನಮಾನದಲ್ಲಿ ತಂತ್ರಜ್ಞಾನ ಅತ್ಯಂತ ವೇಗವಾಗಿ ಬೆಳೆಯುತ್ತಿದೆ.  ನವಯುಗಕ್ಕೆ ತಕ್ಕಂತೆ ನಮ್ಮ ಕೌಶಲ್ಯವನ್ನು  ಬೆಳೆಸಿಕೊಳ್ಳಬೇಕು” ಎಂದರು.

“ಯುವಕರಿಗೆ  ಉದ್ಯೋಗ ದೊರಕಿಸುವ ಸಲುವಾಗಿ ನಗರದಲ್ಲಿ ಉದ್ಯೋಗ  ಮೇಳವನ್ನು  ನಡೆಸಲಾಗಿತ್ತು. ಉದ್ಯೋಗ ಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೂಡಲೇ ನೇಮಕಾತಿ ಆದೇಶವನ್ನು ನೀಡಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿನ  ಯುವಕರಿಗೆ ಉದ್ಯೋಗ ಪಡೆಯಲು ಸಹಕಾರಿಯಾಗಿದೆ” ಎಂದರು.

ಕೆ. ಎಚ್. ಪಾಟೀಲ ಸರ್ಕಾರಿ ಐಟಿಐ ಕಾಲೇಜ ಪ್ರಾಚಾರ್ಯ ಬಸವರಾಜ ಮಲ್ಲೂರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕೌಶಲ್ಯಾಭಿವೃದ್ದಿ ಇಲಾಖೆ ಜಂಟಿ ನಿರ್ದೇಶಕ ಬಸವಪ್ರಭು ಹಿರೇಮಠ ಸೇರಿದಂಯೆ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾಲೇಜಿನ ಸಿಬ್ಬಂದಿ ಹಾಗು ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X