ಗದಗ | ವಿದ್ಯಾರ್ಥಿಗಳು ಕ್ಷಣಿಕ ಸುಖಕ್ಕೆ ಬಲಿಯಾಗಬೇಡಿ: ಸಿಪಿಐ ಮುಖಂಡ

Date:

Advertisements

ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದೆ ತಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಬೇಕು. ಹದಿ ಹರೆಯದ ವಯಸ್ಸಿನಲ್ಲಿ ಕ್ಷಣಿಕ ಸುಖ ನೀಡುವ ಮಾದಕ ವಸ್ತುಗಳ ಮೋಹಕ್ಕೆ ಬಿದ್ದು ಜೀವನವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಸಿಪಿಐ ಮಂಜುನಾಥ ನಡುವಿನಮನಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಗದಗ ಜಿಲ್ಲೆ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದ ಪದವಿ ಪೂರ್ವ ಕಾಲೇಜಿನಲ್ಲಿ ನರಗುಂದ ಪೊಲೀಸ್ ಠಾಣೆ ಹಾಗೂ ಪದವಿ ಪೂರ್ವ ಕಾಲೇಜು ಚಿಕ್ಕನರಗುಂದ ಇವರ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮಾದಕ ವಸ್ತುಗಳ ಬಳಕೆ ಮತ್ತು ಪೂರೈಕೆಯ ವಿರುದ್ಧ ಹಮ್ಮಿಕೊಂಡಿದ್ದ ವಿಶೇಷ ಅಭಿಯಾನದಲ್ಲಿ ಮಾತನಾಡಿದರು.

“ಪ್ರಸ್ತುತ ದಿನಗಳಲ್ಲಿ ಯುವಜನರು ಹೆಚ್ಚಾಗಿ ಮಾದಕ ಪದಾರ್ಥಗಳ ವ್ಯಸನಕ್ಕೆ ಬಲಿಯಾಗಿ ತಮ್ಮ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಾದಕ ವಸ್ತುಗಳ ಸೇವನೆ ಮಾಡುವ ಯುವ ಸಮುದಾಯ ಹೆಚ್ಚಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದರಿಂದ ಸಮಾಜದ ಸ್ವಾಸ್ಥ್ಯ ಕೂಡಾ ಹಾಳಾಗುತ್ತಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಧಾರವಾಡ | ಹೊಸ ಎಪಿಎಂಸಿ ನಿರ್ಮಾಣ; ಹಳೆ ಎಪಿಎಂಸಿ ಕುರಿತು ನಿರ್ಲಕ್ಷ್ಯ

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮುತ್ತು ರಾಯರಡ್ಡಿ, ಎಸ್‌ಡಿಎಂಸಿ ಅಧ್ಯಕ್ಷ  ಶರಣಬಸಪ್ಪ ಹಳೇಮನಿ, ಕಾಲೇಜು ಪ್ರಾಂಶುಪಾಲ ಎಸ್ ವಿ ದಂಡನಾಯ್ಕರ ಹಾಗೂ ಕಾಲೇಜು ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X