ಗದಗ | ಸೂರ್ಯಕಾಂತಿ ಕಳಪೆ ಬಿತ್ತನೆ ಬೀಜ ವಿತರಣೆ; ಕಂಗಾಲಾದ ರೈತರು

Date:

ಮುಂಗಾರು ಮಳೆಯಾಗದೆ ರೈತರು ಕಂಗಾಲಾಗಿದ್ದಾರೆ. ಬರದ ಆತಂಕ ಎದುರಾಗಿದೆ. ಈ ನಡುವೆ, ಕಳಪೆ ಬಿತ್ತನೆ ಬೀಜದಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ರೈತರು ಸಿಲುಕಿದ್ದಾರೆ. ಸೂರ್ಯಕಾಂತಿ ಬೆಳೆಯುವ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ರೈತರು ಬಿತ್ತನೆ ಬೀಜ ಮಾರಾಟ ಕಂಪನಿಗಳ ವಿರುದ್ಧ ಕಿಡಿಕಾರುತ್ತಿದ್ದಾರೆ.

- Advertisement -

ತಾಲೂಕಿನ ಹೆಚ್ಚಿನ ರೈತರು ಸೂರ್ಯಕಾಂತಿ ಬೆಳೆ ಬೆಳೆಯುತ್ತಾರೆ. ಅಂತೆಯೇ, ಈ ವರ್ಷವೂ ಕೆಲವು ಬಿತ್ತನೆ ಬೀಜ ಮಾರಾಟ ಕಂಪನಿಗಳಿಂದ ಸೂರ್ಯಕಾಂತಿ ಬಿತ್ತನೆ ಬೀಜ ಖರೀದಿಸಿ, ಬಿತ್ತನೆ ಮಾಡಿದ್ದರು. ಆದರೆ, ಕಳಪೆ ಬೀಜಗಳಿಂದಾಗಿ, ಉತ್ತಮ ಬೆಳೆ ಬಾರದೆ, ನಷ್ಟಕ್ಕೆ ಸಿಲುಕಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಖಾಸಗಿ ಬಿತ್ತನೆ ಬೀಜ ಮಾರಾಟ ಕಂಪನಿಯಿಂದ ತಾಲೂಕಿನ ಬರದೂರು, ಮೇವುಂಡಿ, ಹೈತಾಪುರ, ಡಂಬಳ, ಹಳ್ಳಿಕೇರಿ, ಹಳ್ಳಿಗುಡಿ, ಕದಾಂಪುರ, ಶಿರೋಳ, ಮುರುಡಿ, ಮಕ್ತುಂಪುರ ಮೊದಲಾದ ಗ್ರಾಮಗಳ ರೈತರು ಸೂರ್ಯಕಾಂತಿ ಬಿತ್ತನೆ ಬೀಜಗಳನ್ನು ಖರೀದಿಸಿದ್ದರು. ಸೂರ್ಯಕಾಂತಿ ಗಿಡಗಳು ಚೆನ್ನಾಗಿಯೇ ಬೆಳೆದಿದ್ದರೂ, ಹೂವು ಕಾಯಿಗಟ್ಟು ಸಮಯದಲ್ಲಿ ಕಾಳುಗಳ ಬದಲಾಗಿ, ಹುಲ್ಲಿನ ಎಲೆಗಳು ಮೂಡಿವೆ. ಸೂರ್ಯಕಾಂತಿ ತೆನೆಗಟ್ಟದೇ ಇರುವುದರಿಂದ ರೈತರು ಕಂಗಾಲಾಗಿದ್ದಾರೆ.

ಒಂದು ಕೆ.ಜಿ ಸೂರ್ಯಕಾಂತಿ ಬೀಜಕ್ಕೆ 2,000ರಿಂದ 2,500 ರೂ. ಭರಿಸಿ, ಬೀಜ ಖರಿಸಿದ್ದ ರೈತರು, ಎಕರೆಗಟ್ಟಲೆ ಭೂಮಿಯನ್ನು ಉತ್ತು, ಬಿತ್ತನೆ ಮಾಡಿದ್ದರು. ಒಂದು ಎಕರೆ ಬಿತ್ತನೆ ಮಾಡಲು ರೈತ ಸುಮಾರು 20,000 ರೂ. ಖರ್ಚು ಮಾಡಿದ್ದ ರೈತರಿಗೆ, ಹಾಕಿದ್ದ ಬಂಡವಾಳವೂ ಕೈಸೇರದಂತಾಗಿದೆ. ನಷ್ಟದ ಸುಳಿಗೆ ಸಿಲುಕಿಕೊಂಡಿದ್ದಾರೆ.

ಈ ಮುಂಗಾರು ಹಂಗಾಮಿನಲ್ಲಿ ತಾಲೂಕಿನಾದ್ಯಂತ ಒಟ್ಟು 7,000 ಹೆಕ್ಟೇರ್ ಸೂರ್ಯಕಾಂತಿ ಬಿತ್ತನೆ ಮಾಡುವ ಗುರಿಯನ್ನು ಕೃಷಿ ಇಲಾಖೆ ಹೊಂದಿತ್ತು. ಆದರೆ, ಸುಮಾರು 5,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ ಎಂದು ಅಂದಾಜಿಸಲಾಗಿದೆ. ಈ ಪೈಕಿ, 2,000 ಹೆಕ್ಟೇರ್‌ ಪ್ರದೇಶದಲ್ಲಿ ಕಳಪೆ ಬೀಜಗಳ ಬಿತ್ತನೆಯಾಗಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ ಪಾಟೀಲ್, “ರೈತರಿಗೆ ಮೋಸ ಮಾಡಿರುವ ಕಂಪನಿವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅವಕಾಶವಿದೆ. ಕಂಪನಿ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...