ಗದಗ | ಜಿಲ್ಲೆಯಲ್ಲಿ ಸೂರ್ಯಕಾಂತಿ ಬೆಳೆಗೆ ಬೆಂಬಲ ಬೆಲೆ

Date:

“2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ಎಫ್.ಎ.ಕ್ಯು ಗುಣಮಟ್ಟದ ಸೂರ್ಯಕಾಂತಿ ಬೆಳೆಯ ಪ್ರತಿ ಕ್ವಿಂಟಲ್‌ಗೆ ₹8,343 ದರ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕ್ರಮಕೈಗೊಳ್ಳಬೇಕು” ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.

- Advertisement -

ಗದಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿ, “ಜಿಲ್ಲೆಯಲ್ಲಿ ತೆರೆಯಲಾಗುವ ಸೂರ್ಯಕಾಂತಿ ಬೆಳೆ ಖರೀದಿ ಕೇಂದ್ರಗಳಲ್ಲಿ ಎಫ್.ಎ.ಕ್ಯು ಗುಣಮಟ್ಟ ಪರಿಶೀಲನೆಗೆ ಗ್ರೇಡರ್‌ಗಳನ್ನು ನೇಮಕ ಮಾಡಬೇಕು ಮತ್ತು ಅವರಿಗೆ ಸೂಕ್ತ ಗ್ರೇಡಿಂಗ್ ತರಬೇತಿ ನೀಡಬೇಕು. ಪ್ರತಿ ಎಕರೆಗೆ ಕರಿಷ್ಠ 4 ಕ್ವಿಂಟಲ್ ಇಲ್ಲವೇ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್ ಸೂರ್ಯಕಾಂತಿ ಖರೀದಿಸಬಹುದಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ...

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ ಸಾಂಪ್ರದಾಯಿಕ ಟೋಪಿ) ಧರಿಸಿ ನಿಂತಿದ್ದ ಚಿತ್ರವು, ಅವರ ಇಸ್ರೇಲ್ ಪರ ಒಲವಿಗೆ ಅಳಿಸಲಾಗದ ಸಾಕ್ಷಿಯಾಗಿ ಉಳಿದುಕೊಂಡಿದೆ. ಶಾಂತಿ ಪ್ರವಾಸದ ಹೆಸರಿನಲ್ಲಿ...

“ಸರ್ಕಾರದ ಬೆಂಬಲಬೆಲೆಯಡಿ ಸೂರ್ಯಕಾಂತಿ ಬೆಳೆ ಖರೀದಿ ಕುರಿತು ರೈತರಿಗೆ ತಿಳಿವಳಿಕೆ ಮೂಡಿಸಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಜಿಲ್ಲೆಯ ಅರ್ಹ ರೈತರು ಈ ಯೋಜನೆಯ ಲಾಭ ಪಡೆಯಲು ಅನುಕೂಲವಾಗುವಂತೆ ಕ್ರಮ ವಹಿಸಬೇಕು” ಎಂದು ನಿರ್ದೇಶನ ನೀಡಿದರು.

ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕಿ ಸುಧಾ ಆ‌ರ್. ಬಂಡಿ ಮಾತನಾಡಿ, “ಕೇಂದ್ರ ಸರ್ಕಾರದ ಬೆಂಬಲಬೆಲೆ ಮಾರ್ಗಸೂಚಿ ಅನ್ವಯ ನ್ಯಾಫೆಡ್ ಸಂಸ್ಥೆ ಹಾಗೂ ಎನ್.ಸಿ.ಸಿ.ಎಫ್. ಸಂಸ್ಥೆಯನ್ನು ಕೇಂದ್ರದ ಖರೀದಿ ಏಜೆನ್ಸಿಯಾಗಿ ಹಾಗೂ ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತವನ್ನು (ಕೆಒಎಫ್‌) ರಾಜ್ಯದ ಖರೀದಿ ಏಜನ್ಸಿಯಾಗಿ ಗುರುತಿಸಲಾಗಿದೆ. ಸರ್ಕಾರದ ಆದೇಶದ ದಿನಾಂಕದಿಂದ 80 ದಿನಗಳವರೆಗೆ ನೋಂದಣಿ ಹಾಗೂ 90 ದಿನಗಳವರೆಗೆ ಖರೀದಿಗೆ ಅವಕಾಶ ಇರುತ್ತದೆ. ನೋಂದಣಿ ಜೊತೆಗೇ ಖರೀದಿ ಇರುತ್ತದೆ” ಎಂದು ವಿವರಿಸಿದರು.

Advertisements

ಜಿಲ್ಲೆಯ 11 ಕಡೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಲಾಯಿತು. ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ‘ಜಲಜೀವನ್ ಮಿಷನ್’ ಕಾಮಗಾರಿ ಪೂರ್ಣಗೊಳಿಸಲು ಡಿಸೆಂಬರ್‌ ಗಡುವು

ಗ್ರಾಮೀಣ ಭಾಗದಲ್ಲಿ ಬೇಸಿಗೆ ಸೇರಿದಂತೆ ಯಾವುದೇ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ...

ಕೋಲಾರ | ಸ್ಮಶಾನಗಳ ದಾರಿ ಒತ್ತುವರಿ ತೆರವುಗೊಳಿಸಿ ಮೂಲಸೌಕರ್ಯ ಒದಗಿಸಿ: ರೈತ ಸಂಘ ಒತ್ತಾಯ

ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಸ್ಮಶಾನದ ದಾರಿಗಳನ್ನು ಗುರುತಿಸಿ ತೆರವುಗೊಳಿಸುವುದರ ಜತೆಗೆ, ಸ್ಮಶಾನಗಳಲ್ಲಿ ಮೂಲಸೌಕರ್ಯಗಳನ್ನು...

ಚಿಂತಾಮಣಿ | ಕಾರು ಡಿವೈಡರ್‌ಗೆ ಡಿಕ್ಕಿ:ಎರಡು ವರ್ಷದ ಕಂದಮ್ಮ ಸಾವು, ಐವರಿಗೆ ಗಂಭೀರ ಗಾಯ

ಜೋರು ಮಳೆಯಿಂದಾಗಿ ರಸ್ತೆ ಮಧ್ಯದಲ್ಲಿದ್ದ ಡಿವೈಡರ್ ಸರಿಯಾಗಿ ಕಾಣಿಸದೆ,ಚಾಲಕನ ನಿಯಂತ್ರಣ ತಪ್ಪಿದ...

ರಾಯಚೂರು | ನಾಳೆ ಜಿಲ್ಲೆಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ನಾಳೆ (ಅಕ್ಟೋಬರ್ 8ರಂದು) ರಾಯಚೂರು ಹಾಗೂ...