ಗದಗ | ಪ್ರತಿಭೆ ಯಾರ ಸ್ವತ್ತೂ ಅಲ್ಲ: ಮಹಾಂತೇಶ ಕವಟಗಿಮಠ

Date:

ಕಲಾ ನಿಖಾಯದ ಬಹುತೇಕ ವಿದ್ಯಾರ್ಥಿಗಳು ಹಿಂಜರಿಕೆ, ಕೀಳರಿಮೆಗಳಿಂದ ಬಳಲುತ್ತಿದ್ದು, ಅದರಿಂದ ಹೊರಬಂದು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಲ್ಲಿ ಉಜ್ವಲವಾದ ಭವಿಷ್ಯವಿದೆ. ಇಂತಹ ಮಹತ್ಕಾರ್ಯಕ್ಕೆ ದರ್ಶನ-2023 ವಸ್ತು ಪ್ರದರ್ಶನ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಎಂದು ಕೆಎಲ್‌ಇ ಸಂಸ್ಥೆಯ ನಿರ್ದೇಶಕ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರು ತಿಳಿಸಿದರು.

ಗದಗ ನಗರದ ಕೆಎಲ್‌ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಜರುಗಿದ ದರ್ಶನ 2023 ವಸ್ತು ಪ್ರದರ್ಶನದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.

“ವಿಜ್ಞಾನ ವಿಷಯಗಳಲ್ಲಿ ಮಾತ್ರ ಪ್ರದರ್ಶನ ಏರ್ಪಡಿಸಿರುವುದು ಈವರೆಗೆ ನಡೆದು ಬಂದಿರುವ ಪದ್ದತಿ. ಆದರೆ ಮಹಾವಿದ್ಯಾಲಯವು ಕಲಾ ಮತ್ತು ವಾಣಿಜ್ಯ ವಿಷಯದಲ್ಲಿಯೂ ಪ್ರದರ್ಶನ ಏರ್ಪಡಿಸಿ ಹೊಸ ಮಾದರಿಯೊಂದನ್ನು ರೂಪಿಸಿದೆ. ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ, ವಿದ್ಯಾರ್ಥಿಗಳಲ್ಲಿ ಭಾವೈಕ್ಯತೆ ಸಾಮರಸ್ಯ ಬೆಳಸುವಲ್ಲಿಯೂ ಇಂತಹ ಪ್ರದರ್ಶನಗಳ ಪಾತ್ರ ಹಿರಿದಾಗಿದೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ವಸ್ತು ಪ್ರದರ್ಶನ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿನ ಸೃಜನಶೀಲತೆಗೆ ಪೂರಕವಾದ ಬೆಳವಣಿಗೆಯಾಗಿದೆ. ದೇವರು ಪ್ರತಿಯೊಬ್ಬ ವ್ಯಕ್ತಿಯನ್ನೂ ಈ ಭೂಮಿಗೆ ಕಳುಹಿಸಬೇಕಾದರೆ ಯಾರನ್ನೂ ಬರಿಗೈಯಿಂದ ಕಳುಹಿಸಿಲ್ಲ. ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಒಂದು ಕೌಶಲ್ಯ ಅಡಗಿಸಿರುತ್ತಾನೆ. ಅದನ್ನು ಹೊರತಂದು ಸಾರ್ವತ್ರಿಕಗೊಳಿಸುವ ಕೆಲಸ ಇಂತಹ ಪ್ರದರ್ಶನಗಳು ಮಾಡಬೇಕು. ಭಾಷೆ, ಕಲೆ, ಸಮಾಜದಲ್ಲಿಯೂ ವಿಜ್ಞಾನದ ಅಂಶಗಳಿವೆ. ಅವುಗಳನ್ನು ಅರ್ಥೈಸುವ ಕೆಲಸ ಆಗಬೇಕು. ಈ ದೇಶವನ್ನು ಕೇವಲ ವಿಜ್ಞಾನಿಗಳು, ವೈದ್ಯರು, ಎಂಜಿನಿಯರ್‌ಗಳು ಮಾತ್ರ ಕಟ್ಟಲು ಸಾಧ್ಯವಿಲ್ಲ. ಸಾಹಿತಿ, ಇತಿಹಾಸಕಾರ, ಅರ್ಥಶಾಸ್ತ್ರಜ್ಞರೂ ಮುಖ್ಯ. ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೂ ಉಜ್ವಲ ಭವಿಷ್ಯವಿದೆ” ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 58 ತಂಡಗಳಲ್ಲಿ ದರ್ಶನ-2023 ಕಲಾ ಮತ್ತು ವಾಣಿಜ್ಯ ವಸ್ತು ಪ್ರದರ್ಶನದ ವಿಜೇತರನ್ನು ಘೋಷಿಸಿದರು.

ಕೆಎಲ್‌ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯ ಹಾವೇರಿ ಪ್ರಥಮ ಸ್ಥಾನ ಗಳಿಸಿದ್ದು, ₹10,000 ನಗದು ಬಹುಮಾನ ಮತ್ತು ಪ್ರಮಾಣ ಪತ್ರ ತನ್ನದಾಗಿಸಿಕೊಂಡಿತು. ಕೆಎಲ್‌ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಗದಗ ಎರಡನೇ ಸ್ಥಾನ ಗಳಿಸಿದ್ದು, ₹5,೦೦೦ ನಗದು ಬಹುಮಾನ ಮತ್ತು ಪ್ರಮಾಣ ಪತ್ರ ಪಡೆದುಕೊಂಡಿತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಎಸ್ಎಫ್ಐ ನಿಯೋಗದಿಂದ ಪರಿಶಿಷ್ಟ ಪಂಗಡ ನಿರ್ದೇಶಕರ ಭೇಟಿ

ಹಲವು ಮಹಾವಿದ್ಯಾಲಯಗಳ ಹತ್ತು ತಂಡಗಳಿಗೆ ತಲಾ ₹2,000 ನಗದನ್ನು ಸಮಾಧಾನಕರ ಬಹುಮಾನವಾಗಿ ಹಾಗೂ ಪ್ರಮಾಣಪತ್ರ ವಿತರಿಸಿದರು. ಭಾಗವಹಿಸಿದ ತಂಡಗಳ ಎಲ್ಲ ಸದಸ್ಯರಿಗೂ ಪ್ರಮಾಣಪತ್ರ ನೀಡಿದರು.

ಮಹಾ ವಿದ್ಯಾಲಯದ ಪ್ರಾಚಾರ್ಯ ಡಾ. ಎ ಕೆ ಮಠರವರು ಮಾತನಾಡಿ, ಪ್ರದರ್ಶನದ ಯಶಸ್ಸಿಗೆ ದುಡಿದ ಎಲ್ಲ ಮಹಾ ವಿದ್ಯಾಲಯದ ಸಿಬ್ಬಂದಿಗಳಿಗೆ, ವಿದ್ಯಾರ್ಥಿಗಳಿಗೆ, ಆಗಮಿಸಿದ ಅತಿಥಿಗಳಿಗೆ, ತೀರ್ಪುಗಾರರಿಗೆ ಧನ್ಯವಾದಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಆಡಳಿತ ಮಂಡಳಿಯ ಅಧ್ಯಕ್ಷ ರಜನಿ ಪಾಟೀಲ, ಸದಸ್ಯ ಮೃತ್ಯುಂಜಯ ಸಂಕೇಶ್ವರ, ಐಕ್ಯೂಎಸಿ ಸಂಚಾಲಕಿ ಡಾ. ವೀಣಾ ಈ. ಹಾಗೂ ಮಹಾವಿದ್ಯಾಲಯದ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ಬೇರೆ ಬೇರೆ ಮಹಾವಿದ್ಯಾಲಯಗಳ ನೂರಾರು ವಿದ್ಯಾರ್ಥಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಎಚ್‌ಡಿಕೆ ಹೇಳಿಕೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರ ಖಂಡನೆ

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು...

ಕಲಬುರಗಿ | ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ: ದಸಂಸ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌...

ದಾವಣಗೆರೆ | ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ: ಪ್ರಾಂಶುಪಾಲ ಕಲ್ಲೇಶ್‌

ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ. ಅದರ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ...

ರಾಯಚೂರು | ಎಚ್‌ಡಿಕೆಯಿಂದ ಮಹಿಳೆಯರಿಗೆ ಅವಮಾನ, ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ...