ಗದಗ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ತಮಟೆ ಚಳವಳಿ

Date:

ಸುಪ್ರೀಂ ಕೋರ್ಟಿನ ಸಂವಿಧಾನ ಪೀಠವು ಒಳಮೀಸಲಾತಿಯನ್ನು ಜಾರಿಮಾಡುವ ಅಧಿಕಾರವನ್ನು ಆಯಾ ರಾಜ್ಯಗಳಿಗೆ ಕೊಡುವ ಐತಿಹಾಸಿಕ ತೀರ್ಪು ಪ್ರಕಟಿಸಿತ್ತು. ತೀರ್ಪು ಬಂದು ನಾಲ್ಕು ತಿಂಗಳಾದರೂ ಕರ್ನಾಟಕ ಸರ್ಕಾರ ಆಮೆಗತಿಯಲ್ಲಿ ಸಾಗಿದೆ. ಕಾಟಾಚಾರಕ್ಕೆ ನ್ಯಾ. ನಾಗಮೋಹನದಾಸ ಆಯೋಗ ರಚಿಸಿದ್ದು ಬಿಟ್ಟರೆ ಏನನ್ನೂ ಮಾಡಿಲ್ಲ ಎಂದು ಡಿಎಸ್‌ಎಸ್ ನರಗುಂದ ತಾಲೂಕು ಸಂಚಾಲಕ ದತ್ತು ಜೋಗನ್ನವರ ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಒಳಮೀಸಲಾತಿ ಕೂಡಲೇ ಜಾರಿಗೆ ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟದಿಂದ ನರಗುಂದ ಶಾಸಕರ ಮನೆ ಮುಂದೆ ತಮಟೆ ಚಳವಳಿ ನಡೆಸಿ ಶಾಸಕ ಸಿ ಸಿ ಪಾಟೀಲ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಎರಡು ತಿಂಗಳಲ್ಲಿ ಆಯೋಗ ವರದಿ ಕೊಡುತ್ತದೆಂದು ಸರ್ಕಾರ ಹೇಳಿತ್ತು. ಆದರೆ 45 ದಿನವಾದರೂ ಆಯೋಗ ಕೆಲಸ ಆರಂಭಿಸಿಲ್ಲ. ಆಯೋಗಕ್ಕೆ ಬೇಕಾದ ಕಚೇರಿ, ಸಿಬ್ಬಂದಿ, ಹಣಕಾಸಿನ ನೆರವು ನೀಡದೆ ಕಾಲಹರಣ ನಡೆಸುತ್ತಿದೆ. ಆಯೋಗ ರಚಿಸಬೇಕೆನ್ನುವುದು ಮಾದಿಗ ಸಮಾಜದ ಯಾರೊಬ್ಬರ ಬೇಡಿಕೆಯೂ ಆಗಿರಲಿಲ್ಲ. ಸರ್ಕಾರದ ಮುಂದೆ ನ್ಯಾ. ಸದಾಶಿವ ಆಯೋಗ‌, ಮಾಧುಸ್ವಾಮಿ ಸಮಿತಿ ವರದಿಯಿದೆ. ಮಾಧುಸ್ವಾಮಿಯವರ ಸಮಿತಿ ಯಾಕೆ(ಆದಿಕರ್ನಾಟಕ) (ಆದಿದ್ರಾವಿಡ) ಸಮಸ್ಯೆಗೆ ಪರಿಹಾರ ಒದಗಿಸಿದೆ” ಎಂದರು.

“2011ರ ಜನಗಣತಿಯ ಅಂಕಿ ಅಂಶಗಳ ಆಧಾರದಲ್ಲಿ ವರ್ಗೀಕರಣ ಮಾಡಿದೆ. ಈಗ ಮತ್ತೆ ನ್ಯಾ. ನಾಗಮೋಹನದಾಸ ಆಯೋಗಕ್ಕೆ ಅದೇ ಕೆಲಸವನ್ನು ಕೊಡಲಾಗಿದೆ. ಸರ್ಕಾರದ ಈ ನಿಧಾನಗತಿಯ ನಿರ್ಲಕ್ಷ್ಯದ ಧೋರಣೆ ನೋಡಿದರೆ ಇವರಿಗೆ ಅವಕಾಶ ವಂಚಿತ ದಲಿತ ಸಮುದಾಯಗಳಿಗೆ ಒಳಮೀಸಲಾತಿ ಕೊಡುವ ಮನಸ್ಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಒಳಮೀಸಲಾತಿ ಜಾರಿಯಾಗುವವರಿಗೆ ಸರ್ಕಾರ ಯಾವುದೇ ಉದ್ಯೋಗ ನೇಮಕಾತಿ ಮಾಡುವುದಿಲ್ಲವೆಂದು ಭರವಸೆ ಕೊಟ್ಟಿತ್ತು. ಆದರೆ ಈ ಭರವಸೆ ಜಾರಿಯಾಗಿಲ್ಲ. ನೇಮಕಾತಿಯ ಘೋಷಣೆಗಳು ವಿವಿಧ ಇಲಾಖೆಗಳಿಂದ ಬರುತ್ತಲೇ ಇವೆ. ಹಾಗಾಗಿ ಬೆಳಗಾವಿಯಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶಕ್ಕೆ ಕರೆ ಕೊಡಲಾಗಿದೆ” ಎಂದರು.

ಈ ಸುದೆದಿ ಓದಿದ್ದೀರಾ? ಗಜೇಂದ್ರಗಡ | ಬೀದಿಬದಿ ವ್ಯಾಪಾರಸ್ಥರ ತಾಲೂಕು ಸಮಾವೇಶ

“ಹರಿಯಾಣದ ಬಿಜೆಪಿ ಸರ್ಕಾರ ಸುಪ್ರ ಕೋರ್ಟಿನ ತೀರ್ಪು ಬಂದ ಮೊದಲ ವಾರದಲ್ಲೇ ಒಳಮೀಸಲಾತಿ ಜಾರಿಮಾಡಿದೆ. ಆದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಬ‌ದ್ಧತೆ ತೋರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಅಧಿಕಾರಕ್ಕೆ ಬಂದ ಮೊದಲ ವಾರದಲ್ಲೇ ಒಳಮೀಸಲಾತಿ ಜಾರಿ ಮಾಡುತ್ತೇವೆಂದು ಹೇಳಿ ಅಧಿಕಾರ ಹಿಡಿದ ಕಾಂಗ್ರೆಸ್ ನಾಯಕರು ಮಾದಿಗ ಜನತೆಗೆ ವಿಶ್ವಾಸ ದ್ರೋಹ ಎಸಗಿದ್ದಾರೆ” ಎಂದು ದತ್ತು ಜೋಗಣ್ಣವರ ಆಕ್ರೋಶ ವ್ಯಕ್ತಪಡಿಸಿದರು.

“ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ಒಳಮೀಸಲಾತಿಯ ವಿಷಯವನ್ನು ಪ್ರಸ್ತಾಪಿಸಿ ಬೆಂಬಲ ಸೂಚಿಸಿ ಜಾರಿಗೆ ತರಬೇಕು” ಎಂದು ಒತ್ತಾಯಿಸಿದರು.

ತಮಟೆ ಚಳವಳಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರು, ಹೋರಾಟಗಾರರು, ಕಾರ್ಯಕರ್ತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...