“ಮುಂಡರಗಿಯ ಕಲಾ ಶಿಕ್ಷಣ-ಸಂಸ್ಕೃತಿ ಪ್ರತಿಷ್ಠಾನವು ಪ್ರತಿವರ್ಷ ಮುಂಡರಗಿ ತಾಲೂಕಿನಲ್ಲಿ ಮಕ್ಕಳ ಕಲಿಕೆಯಲ್ಲಿ ಸೃಜನಾತ್ಮಕವಾಗಿ ಕಾರ್ಯ ಮಾಡಿದ ಶಿಕ್ಷಕಿಯೊಬ್ಬರನ್ನು ಗುರುತಿಸಿ ತಾಲೂಕಾ ಮಟ್ಟದ ‘ಕಲಾಸಿರಿ ಆದರ್ಶ ಶಿಕ್ಷಕಿ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು, 2025- 26 ನೇ ಸಾಲಿಗೆ ಡಂಬಳ ಉರ್ದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಂಗ್ಲಿಷ ಭಾಷಾ ಶಿಕ್ಷಕಿ ಸುಸನ್ನಾ ಕನವಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ” ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ನಿಂಗು ಸೊಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ಪ್ರಶಸ್ತಿಯು ನಗದು ಪುರಸ್ಕಾರದೊಂದಿಗೆ ಪ್ರಶಸ್ತಿ ಪಲಕ ಒಳಗೊಂಡಿದ್ದು ಸೆಪ್ಟಂಬರ್ 14 ರಂದು ನಡೆಯುವ ತಾಲೂಕಾ ಶಿಕ್ಷಕ ದಿನೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು” ಎಂದು ತಿಳಿಸಿದ್ದಾರೆ.
ಜ.ಅ. ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಡಾ. ಬಿ.ಜಿ. ಜವಳಿಯವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆ ನಡೆಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಗದಗ | ಹಾಸ್ಟೆಲ್ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ
“ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಮುಂಡರಗಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಎಸ್. ಅಣ್ಣಿಗೇರಿ, ಕರ್ನಾಟಕ ರಾಜ್ಯ ನೌಕರರ ಸಂಘ ತಾಲೂಕ ಘಟಕದ ಅಧ್ಯಕ್ಷರು ನಾಗರಾಜ ಹಳ್ಳಿಕೇರಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಕುಮಾರ್ ಸಜ್ಜನ್, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಡಾ. ನಿಂಗು ಸೊಲಗಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘ ತಾಲೂಕಾ ಅಧ್ಯಕ್ಷ ಎ. ಡಿ. ಬಂಡಿ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ತಾಲೂಕ ಘಟಕದ ಅಧ್ಯಕ್ಷ ಎಸ್. ಸಿ. ಹರ್ತಿ, ಪ್ರೌಢ ವಿಭಾಗದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಹನುಮರೆಡ್ಡಿ ಇಟಗಿ, ಮುಂಡರಗಿ ವಲಯ ಸಿಆರ್‌ಪಿ ವಿ. ಎಚ್. ಹೊಳೆಯಮ್ಮನವರ್, ಪ್ರೌಡ ವಿಭಾಗ ಈಸಿಓ ಮನೋಹರ ಎಸ್. ಪಾಲ್ಗೊಂಡಿದ್ದರು.