ಗದಗ | ದಸರಾ ಉದ್ಘಾಟನೆ ವಿಚಾರ: ಪ್ರತಾಪ್ ಸಿಂಹಗೆ ನ್ಯಾಯಾಲಯವೇ ಛೀಮಾರಿ ಹಾಕಿದೆ; ಸಿಎಂ ಸಿದ್ದರಾಮಯ್ಯ

Date:

“ದಸರಾ ಉದ್ಘಾಟನೆಯನ್ನು ಮಾಡಲಿರುವ ಸಾಹಿತಿ ಬಾನು ಮುಷ್ತಾಕ್ ಅವರು ಉದ್ಘಾಟನೆ ಮಾಡಬಾರದೆಂದು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮಾತ್ರವಲ್ಲ ಸುಪ್ರೀಂ ಕೋರ್ಟಿಗೂ ಹೋಗಿದ್ದರು. ಸುಪ್ರೀಂ ಕೋರ್ಟ್ ಕೂಡ ನಿನ್ನೆ ಛೀಮಾರಿ ಹಾಕಿದೆ”  ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

- Advertisement -

ಗದಗ ಪಟ್ಟಣದ ಕನಕ ಭವನ ರಾಕೇಶ ಸಿದ್ದರಾಮಯ್ಯ ಸಭಾ ಭವನದಲ್ಲಿ  ಗದಗ ತಾಲ್ಲೂಕು ಕುರುಬರ ಸಂಘ ರಜತ ಮಹೋತ್ಸವ ಸವಿನೆನಪಿಗಾಗಿ ಹಾಗೂ ಸಂಘಜೀವ ಶ್ರೀ ಫಕೀರಪ್ಪ ಹೇಬಸೂರು ಅವರ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಹಿಂದೆ ದಸರಾ ಹಬ್ಬದ ಉದ್ಘಾಟನೆಯನ್ನು ಹಿರಿಯ ಕವಿ ಕೆ. ಎಸ್. ನಿಸಾರ್ ಅಹಮದ್ ಅವರು ಮಾಡಿದ್ದರು. ಅವರ ಸಾಲಿನಲ್ಲಿಯೇ ಪ್ರತಾಪ ಸಿಂಹನು ಕುಳಿತಿದ್ದನು. ಆವಾಗ ವಿರೋಧ ಮಾಡದವನು, ಈಗ ಬಾನು ಮುಸ್ತಾಕ್ ಅವರನ್ನು ದಸರಾ ಉದ್ಘಾಟನೆ ಮಾಡಬಾರದೆಂದು ವಿರೋಧ ವ್ಯಕ್ತಪಡಿಸುತ್ತಿದ್ದಾನೆ” ಎಂದು ಹೇಳಿದರು.

ನಾಡ ಹಬ್ಬ ದಸರಾ ಉದ್ಘಾಟನೆಗಾಗಿ ಈ ನಾಡಿಗೆ ಬೂಕರ್ ಪ್ರಶಸ್ತಿ ಮೂಲಕ ಘನತೆ ತಂದ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದೆವು. ಇದಕ್ಕೆ ಎರಡು ಬಾರಿ ಸಂಸದರಾಗಿ ಈ ಮಾಜಿ ಆಗಿರುವ ವ್ಯಕ್ತಿ ವಿರೋಧಿಸಿ ಸಣ್ಣತನ‌ ತೋರಿಸಿದರು. ಆದರೆ ಸುಪ್ರೀಂಕೋರ್ಟ್ ಸಂವಿಧಾನದ ಮೌಲ್ಯವನ್ನು ಎತ್ತಿ ಹಿಡಿದಿದೆ ಎಂದು ಮೆಚ್ಚುಗೆ ಸೂಚಿಸಿದರು.

ಇದನ್ನು ಓದಿದ್ದೀರಾ? ಮಲಯಾಳಂ ನಟ ಮೋಹನ್‌ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಸಚಿವರಾದ ಎಚ್.ಕೆ.ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಶಾಸಕರಾದ ರಾಘವೇಂದ್ರ ಹಿಟ್ನಾಳ್ , ರಾಕೇಶ್ ಧವನ್ ಸಿದ್ದರಾಮಯ್ಯ ಸೇರಿ ಮಾಜಿ ಸಚಿವರು, ಶಾಸಕರು ಹಾಗೂ ಸಮುದಾಯದ ಮುಖಂಡರು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...