ಗದಗ | ನ್ಯಾಯಸಮ್ಮತ ಹಾಗೂ ನಿರ್ಭೀತಿ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ: ಜಿಲ್ಲಾಧಿಕಾರಿ

Date:

ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನ್ಯಾಯಸಮ್ಮತವಾಗಿ ಹಾಗೂ ನಿರ್ಭೀತವಾಗಿ ಚುನಾವಣೆ ನಡೆಸಲು ಗದಗ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ತಿಳಿಸಿದರು.

- Advertisement -

ಗದಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ (ಮಾ.16) ಲೋಕಸಭಾ ಸಾರ್ವತ್ರಿಕ ಚುನಾವಣೆ ಕುರಿತು ಜರುಗಿದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಗದಗ ಜಿಲ್ಲೆಯ ವ್ಯಾಪ್ತಿಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಿದ್ದು, 65-ಶಿರಹಟ್ಟಿ, 66-ಗದಗ ಹಾಗೂ 67-ರೋಣ ವಿಧಾನಸಭಾ ಕ್ಷೇತ್ರಗಳು 10-ಹಾವೇರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತದೆ. ಇನ್ನುಳಿದ 68-ನರಗುಂದ ವಿಧಾನಸಭಾ ಕ್ಷೇತ್ರವು 3-ಬಾಗಲಕೋಟೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತದೆ” ಎಂದರು.

“10-ಹಾವೇರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಜಿಲ್ಲಾಧಿಕಾರಿ, ಹಾವೇರಿ ಹಾಗೂ 3-ಬಾಗಲಕೋಟೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬಾಗಲಕೋಟೆ ಜಿಲ್ಲಾಧಿಕಾರಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸುವರು. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು 65-ಶಿರಹಟ್ಟಿ, 66-ಗದಗ ಉಪವಿಭಾಗಾಧಿಕಾರಿ ಗದಗ -66, ಡಿಯುಡಿಸಿ ಯೋಜನಾ ನಿರ್ದೇಶಕರು ರೋಣ-67 ಮತಕ್ಷೇತ್ರಕ್ಕೆ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯಾವಹಾರಗಳ ಇಲಾಖೆಯ ಉಪನಿರ್ದೇಶಕರು ನರಗುಂದ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ” ಎಂದರು.

ಪ್ರತಿ ಅಭ್ಯರ್ಥಿಗಳ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇಡಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 02 ರಂತೆ ಒಟ್ಟು 08 ಲೆಕ್ಕ ತಂಡಗಳನ್ನು ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬರಂತೆ ಒಟ್ಟು 04 ಸಹಾಯಕ ವೆಚ್ಚ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಭಾರತ ಚುನಾವಣಾ ಆಯೊಗದ ನಿರ್ದೇಶನಗಳಂತೆ ಸಾರ್ವಜನಿಕ ಹಾಗೂ ಖಾಸಗಿ ಆಸ್ಥಿಗೆ ಸಂಬಂಧಿಸಿದಂತೆ ಗೋಡೆ ಬರಹ, ಪೋಸ್ಟರ್ಸ್, ಬ್ಯಾನರ್ಸ್‍ಗಳನ್ನು ಗುರುತಿಸಿ ಸದರಿ ಎಲ್ಲ ಪೋಸ್ಟರ್ ಅಥವಾ ಬ್ಯಾನರಗಳನ್ನು ತೆರವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

ಜಿಲ್ಲಾ ದೂರು ನಿರ್ವಹಣಾ ಕೇಂದ್ರ: ಜಿಲ್ಲೆಯಲ್ಲಿ ಯಾವುದೇ ರೀತಿ ದೂರುಗಳ ನಿರ್ವಹಣೆಗಾಗಿ ಸೈಯದ್ ಜೋಹೈಬುಲ್ಲಾ, ಜಿಲ್ಲಾ ವ್ಯವಸ್ಥಾಪಕರು, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಗದಗ (ಮೊ.ನಂ: 8277944217) ಇವರನ್ನು ನೋಡಲ್ ಅಧಿಕಾರಿಗಳೆಂದು ನೇಮಕ ಮಾಡಲಾಗಿದೆ. ಇವರ ಅಧೀನದಲ್ಲಿ Complaint Monitoring Team CVIGL ತಂಡ, 1950 ಕಾಲ್ ಸೆಂಟರ್ ಹಾಗೂ ಜಿಲ್ಲಾ ಕಂಟ್ರೋಲ್ ರೂಂ ಕಾರ್ಯನಿರ್ವಹಿಸುತ್ತವೆ.

ಮತದಾರರ ವಿವರ:  ಈವರೆಗೆ ಜಿಲ್ಲೆಯಲ್ಲಿ 4,40,927 ಪುರುಷ ಮತದಾರರು, 4,42,647 ಮಹಿಳಾ ಮತದಾರರು, 60 ಇತರೆ ಮತದಾರರು ಸೇರಿದಂತೆ ಒಟ್ಟು 8,83,634 ಮಂದಿ ಮತದಾರರು ಇದ್ದಾರೆ. ಜಿಲ್ಲೆಯಲ್ಲಿ ಈವರೆಗೆ 18-19 ವಯೋಮಾನದ ಒಟ್ಟು 23,665 ಮಂದಿ ಯುವ ಮತದಾರರ ಹೆಸರುಗಳು ಸೇರ್ಪಡೆಗೊಂಡಿರುತ್ತವೆ. ಜಿಲ್ಲೆಯಲ್ಲಿ ಈವರೆಗೆ 11,897 ದಿವ್ಯಾಂಗ ಚೇತನರು ಮತದಾರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿರುತ್ತಾರೆ. ಅದೇ ರೀತಿ, 85 ವರ್ಷ ವಯೋಮಿತಿ ಮೀರಿದ ಹಿರಿಯ ನಾಗರಿಕರು 5,747 ಜನ ಮತದಾರ ಪಟ್ಟಿಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ” ಎಂದರು.

ಮತಗಟ್ಟೆ ವಿವರ: “ಜಿಲ್ಲೆಯಲ್ಲಿ ಒಟ್ಟು 961 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ 65-ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 251, 66-ಗದಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 223, 67-ರೋಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 267 ಹಾಗೂ 68-ನರಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 220 ಮತಗಟ್ಟೆಗಳು ಬರುತ್ತವೆ” ಎಂದರು.

ಚುನಾವಣಾ ವೇಳಾಪಟ್ಟಿ: “ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಏಪ್ರಿಲ್ 12ರಂದು ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 19 ಕೊನೆಯ ದಿನವಾಗಿದೆ. ಏಪ್ರಿಲ್ 20ರಂದು ನಾಮಪತ್ರಗಳ ಪರಿಶೀಲನೆ ಜರುಗಲಿದ್ದು,  ಏಪ್ರಿಲ್ 22ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದೆ.  ಮೇ 7ರಂದು ಮತದಾನ ಜರುಗಲಿದ್ದು, ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ಪ್ರಕ್ರಿಯೆ ಜೂನ್ 6 ರಂದು ಕೊನೆಗೊಳ್ಳಲಿದೆ” ಎಂದರು.

“ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ ಮಾತನಾಡಿ, “ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಯುತ ಮತದಾನ ನಡೆಯುವಂತಾಗಲು ಹಾವೇರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಶಿರಹಟ್ಟಿ, ಗದಗ ಹಾಗೂ ರೋಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 10 ಚೆಕ್ ಪೋಸ್ಟ್‌ಗಳನ್ನು ಹಾಗೂ ಬಾಗಲಕೋಟೆ ಲೋಕಸಭಾ ಕ್ಷೇತ್ರದ ನರಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದ್ದು, 24/7 ಕೆಲಸ ನಿರ್ವಹಿಸಲು ಕ್ರಮ ಜರುಗಿಸಲಾಗಿದೆ” ಎಂದರು.

“ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಯಿಂದ ಮತದಾನ ನಡೆಯುವಂತೆ ಮುಂಜಾಗೃತಾ ಕ್ರಮವಾಗಿ ಗೂಂಡಾ ಹಾಗೂ ರೌಡಿಗಳ ಗಡಿಪಾರಿಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ, ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ 1,500 ಮಂದಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ” ಎಂದು ವಿವರಿಸಿದರು.

ಜಿಲ್ಲಾ ಪಂಚಾಯತ್ ಸಿಇಒ ಭರತ್ ಎಸ್ ಮಾತನಾಡಿ, “ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣಾ ಪ್ರಚಾರ ಸಭೆ ವೀಕ್ಷಣೆ, ಮಾದರಿ ಸಂಹಿತೆ ಪಾಲನೆ ಕುರಿತು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 9 ರಂತೆ ಒಟ್ಟು 36 ಸಂಚಾರಿ ದಳಗಳನ್ನು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 3ರಂತೆ ಒಟ್ಟು 12 ವಿಡಿಯೋ ಕಣ್ಗಾವಲು ತಂಡಗಳನ್ನು ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ಒಂದರಂತೆ 4 ವಿಡಿಯೋ ವೀಕ್ಷಣಾ ತಂಡಗಳನ್ನು ರಚಿಸಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜಿಲ್ಲಾಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸುವಂತೆ ಎಸ್‌ಯುಸಿಐ ಆಗ್ರಹ

“ಜಿಲ್ಲೆಯ ಯಾವುದೇ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಪಾಲನೆಯಾಗದಿದ್ದಲ್ಲಿ, ದೂರುಗಳಿದ್ದಲ್ಲಿ ಸಾರ್ವಜನಿಕರು 1950 ಟೋಲ್ ಫ್ರೀ ನಂಬರ್‌ಗೆ ಕರೆ ಮಾಡಿ ದೂರು ನೀಡಬಹುದು. ಇಲ್ಲವಾದಲ್ಲಿ ಸಿ.ವಿಜಲ್ ಆ್ಯಪ್‌ನಲ್ಲೂ ದೂರು ದಾಖಲಿಸಬಹುದು” ಎಂದು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಅಪರ ಜಿಲ್ಲಾಧಿಕಾರಿ ಸುರೇಖಾ, ಜಿಲ್ಲಾ ವಾರ್ತಾಧಿಕಾರಿ ವಸಂತ ಮಡ್ಲೂರ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...