ಗದಗ | ಕಡಲೆ ಖರೀದಿಸಿದ ಹಣ ವಾಪಸ್ ಕೊಡಿಸುವಂತೆ ರೈತರಿಂದ ಅನಿರ್ದಿಷ್ಟಾವಧಿ ಧರಣಿ; ಆರನೇ ದಿನಕ್ಕೆ ಕಾಲಿಟ್ಟ ಹೋರಾಟ

Date:

Advertisements

ಕಡಲೆ ಖರೀದಿಸಿದ ಹಣ ವಾಪಸ್ ಕೊಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಆರನೇ ದಿನಕ್ಕೆ ಕಾಲಿಟ್ಟಿದ್ದು, ಕಡಲೆ ಖರೀದಿಸಿದ ₹6.50 ಕೋಟಿ ಹಣ ನೀಡದೆ ವಂಚಿಸಿರುವ ದಲ್ಲಾಳಿಯಿಂದ ಹಣ ಕೊಡಿಸುವವರೆಗೂ ಪ್ರತಿಭಟನೆಯ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ.

ಗದಗ ಮತ್ತು ಮುಂಡರಗಿ ತಾಲೂಕಿನ ರೈತರು ಜಿಲ್ಲಾಡಳಿತ ಭವನದ ಎದುರು ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಂಡಿದ್ದು, ಹೋರಾಟವು ಆರನೇ ದಿನಕ್ಕೆ ಕಾಲಿಟ್ಟಿದೆ.

ರೈತರು ಜಿಲ್ಲಾಡಳಿತ ಭವನದ ಎದುರು ಟೆಂಟ್‌ ಹಾಕಿಕೊಂಡಿದ್ದು, ಊಟ, ನಿದ್ದೆ ಎಲ್ಲವನ್ನೂ ಅಲ್ಲಿಯೇ ಮಾಡುತ್ತಿದ್ದಾರೆ. ಈ ನಡುವೆ, ಮೋಸಕ್ಕೆ ಒಳಗಾದ ರೈತರು ಮೋಸ ಮಾಡಿದ ವ್ಯಕ್ತಿಗಳ ವಿರುದ್ಧ ಗದಗ ಗ್ರಾಮೀಣ ಠಾಣೆಯಲ್ಲಿ ಆರು ಎಫ್ಐಆರ್‌ಗಳನ್ನು ದಾಖಲಿಸಿದ್ದಾರೆ. ಅದಕ್ಕೂ ಮುನ್ನವೇ ಗದಗ ಗ್ರಾಮೀಣ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ಅದರಂತೆ, ಗದಗ ಎಸ್‌ಪಿ ಬಿ ಎಸ್ ನೇಮಗೌಡ ಅವರ ಮಾರ್ಗದರ್ಶನದಲ್ಲಿ ಗದಗ ಗ್ರಾಮೀಣ ಪೋಲಿಸ್ ಠಾಣೆ ಇನ್‌ಸ್ಪೆಕ್ಟರ್ ಸಿದ್ಧರಾಮೇಶ್ವರ ಗಡೇದ ಅವರು ಆರೋಪಿಗಳ ಸುಳಿವು ಪತ್ತೆಹಚ್ಚಿ ದಾವಣಗೆರೆಯ ಮಾರುತಿಗೌಡ ಮತ್ತು ಶ್ರೀನಿವಾಸ ಅವರನ್ನು ಬಂಧಿಸಿದ್ದಾರೆ.

Advertisements

ರೈತ ಮುಖಂಡ ಪ್ರಕಾಶ್ ನಾಯಕ ಮಾತನಾಡಿ, “ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಹೋರಾಟ ಮಾಡಿದ್ದರೂ ಆರೋಪಿಗಳನ್ನು ಬಂಧಿಸಿರಲಿಲ್ಲ. ಇದು ರೈತರ ಅಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಈ ಬಾರಿ ಅಹೋರಾತ್ರಿ ಧರಣಿಗೆ ರೈತರು ನಿರ್ಧರಿಸಿದ್ದಾರೆ. ಈಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರಿಂದ ರೈತರಿಗೆ ಹಣ ಸಿಗುವವರೆಗೂ ಧರಣಿ ನಿಲ್ಲುವುದಿಲ್ಲ” ಎಂದು ಪಟ್ಟು ಹಿಡಿದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪುತ್ತೂರು | ಅಪಘಾತದಲ್ಲಿ ಗಾಯಗೊಂಡ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ; ಇದೇ ಸೌಹಾರ್ದ ಕರ್ನಾಟಕ

ರೈತ ಮುಖಂಡರಾದ ಡಿ ಎಚ್ ನವಲಗುಂದ, ಮಹಾದೇವಿ ಹುಯಿಲಗೋಳ, ಬೀರಪ್ಪ ದೇಶನೂರ, ತನುಕುಮಾರ, ಶಿವಪ್ಪ ಮೂಲಿಮನಿ, ಸೋಮರೆಡ್ಡಿ ಹೊಸಮನಿ, ಪಂಚಾಕ್ಷರಯ್ಯ ಬೆಟಗೇರಿಮಠ, ನಾರಯಣರೆಡ್ಡಿ ಬಿರ್ಸಲ್, ಮಂಜು ಸೈದಾಪೂರ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X