ಗದಗ | ಕಾಂತರಾಜು ವರದಿಯನ್ನು ಸರಕಾರ ಅನುಷ್ಠಾನಗೊಳಿಸಲು ಒಂದು ಹೆಜ್ಜೆ ಮುಂದಿಡಬೇಕು: ಬಂಡಾಯ ಸಾಹಿತಿ ಬಸವರಾಜ ಸೂಳಿಬಾವಿ

Date:

“ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನಸಂಖ್ಯೆ ಆಧಾರಿತ ಜನಗಣತಿಯನ್ನು ಒಪ್ಪಬೇಕು’ ಎಂದು ನಿರಂತರವಾಗಿ ಪ್ರತಿಪಾದನೆ ಮಾಡುತ್ತ ಬಂದವರು. ಈ ಮೇಲ್ಜಾತಿ ರಾಜಕೀಯ ಒತ್ತಡಕ್ಕೆ ಮಣಿಯದೆ ಕಾಂತರಾಜು ವರದಿಯ ದತ್ತಾಂಶಗಳನ್ನು ಸರಕಾರ ಒಪ್ಪಿಕೊಂಡು ಅನುಷ್ಟಾನಗೊಳಿಸುವ ನೆಲೆಯಲ್ಲಿ ಒಂದು ಹೆಜ್ಜೆಯನ್ನು ಇಡಬೇಕು” ಎಂದು ಬಂಡಾಯ ಸಾಹಿತಿ ಬಸವರಾಜ ಸೂಳಿಬಾವಿ ಒತ್ತಾಯಿಸಿದರು.

- Advertisement -

ಗದಗ ಪಟ್ಟಣದ ಪತ್ರಿಕಾ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಸರ್ಕಾರ ಜನಸಂಖ್ಯಾವಾರು ಮೀಸಲಾತಿಯನ್ನು ಬೆಂಬಲಿಸಿ ಕರ್ನಾಟಕ ಸರ್ಕಾರ ಜಾತಿ ಗಣತಿಯನ್ನು ಶೀಘ್ರದಲ್ಲೆ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಈ ದೇಶ, ಕರ್ನಾಟಕ ರಾಜ್ಯದೊಳಗಡೆ ಬಲಾಡ್ಯ ಜಾತಿಗಳು ಸಮಾಜದಲ್ಲಿವೆ. ಅವು ಜನಸಂಖ್ಯೆ ಆಧಾರಿತವಾಗಿ ಕಡಿಮೆ ಸಂಖ್ಯೆಯಲ್ಲಿದ್ದರೂ ಕೂಡ ತಮ್ಮ ಸಾಮಾಜಿಕ ಪ್ರಧಾನ್ಯತೆ, ಆರ್ಥಿಕ ಸದೃಢತೆ ಮತ್ತು ರಾಜಕೀಯವನ್ನು ಮುಂದಿಟ್ಟುಕೊಂಡು ಸಮಾಜದಲ್ಲಿರುವ ಕೆಳ ಜಾತಿ, ಹಿಂದುಳಿದ ಜಾತಿಗಳನ್ನು ನಿಯಂತ್ರಿಸುವ ಕೆಲಸ ಮಾಡಿಕೊಂಡು ಬಂದಿವೆ. ಇವತ್ತಿಗೂ ಕೂಡ ಕಾಂತರಾಜು ವರದಿಯನ್ನು ಜಾರಿಗೊಳಿಸಬಾರದೆಂದು ಚರ್ಚೆಗಳಿವೆ. ಚರ್ಚೆಗಳ ಹಿಂದೆ ಈ ಬಲಾಡ್ಯ ಜಾತಿಗಳಿವೆ. ಈ ಬಲಾಡ್ಯ ಜಾತಿಗಳ ಸರ್ವಾಧಿಕಾರತ್ವ ಇವತ್ತು ಕರ್ನಾಟಕದಲ್ಲಿ ಎದ್ದು ಕಾಣುತ್ತಿದೆ. ಹಾಗಾಗಿ ಜಾತಿ ಗಣತಿಯನ್ನು ಒಪ್ಪುತ್ತಿಲ್ಲ “ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ಕಾಂತರಾಜು ವರದಿಯನ್ನು ವಿರೋಧ ಮಾಡುವ ಶಕ್ತಿಗಳು, ಈ ವರದಿಗೆ ಕಾಂತರಾಜು ಅವರನ್ನು ನೇಮಕ ಮಾಡಿದಾಗ ಯಾಕೆ ವಿರೋಧಿಸಲಿಲ್ಲ. ಕಾಂತರಾಜು ವರದಿಯನ್ನು ಕಟ್ಟಿಕೊಡಲು ಜಯಪ್ರಕಾಶ ಹೆಗಡೆ ಅವರು ಆಯೋಗವನ್ನು ನೇಮಕ ಮಾಡ್ತಾರೆ. ಇವು ಕಾರ್ಯನಿರ್ವಹಿಸುವಾಗ ಅವೈಜ್ಞಾನಿಕ ವಿಚಾರಗಳು ಎಂದು ಹೇಳುವವರು ಅವುಗಳನ್ನು ಯಾಕೆ ಆಯೋಗದ ಮುಂದೆ ಇಡಲಿಲ್ಲ. ಹಾಗೆ ಈ ಬಲಾಡ್ಯ ಜಾತಿಗಳು ಕಾಂತರಾಜು ವರದಿ ಸಂಪರ್ಕ ಮಾಡಿದ ಉದಾಹರಣೆಗಳಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ರಾಜ್ಯದ ಮಠಾಧೀಶರು ಮತ್ತು ರಾಜಕಾರಣಿಗಳನ್ನು ಒಳಗೊಂಡು ಬಲಾಡ್ಯ ಜಾತಿಯ ಹಿರಿಮೆಯನ್ನು ಉಳಿಸಿಕೊಳ್ಳಲು ಕಾಲ್ಪನಿಕ ಜನಸಂಖ್ಯೆಗಳನ್ನು ಕೊಡುವ ಮೂಲಕ ನಿಯಂತ್ರಣ ಮಾಡುತ್ತಿರುವುದು, ತಮ್ಮ ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ ” ಎಂದು ಹೇಳಿದರು.

“ಎಸ್ಸಿ ಎಸ್ಟಿಗಳ ಜನಸಂಖ್ಯೆಹೆಚ್ಚಾಗಿದೆ. ಅವುಗಳನ್ನು ವಾಸ್ತವವಾಗಿ ಒಪ್ಪಿಕೊಳ್ಳಬೇಕು. ಕಾಂತರಾಜು ವರದಿ ಕೇವಲ ಜಾತಿಗಣತಿ ಅಷ್ಟೇ ಅಲ್ಲ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗಳ ಅಧ್ಯಯನ ಕೂಡ ಅದರಲ್ಲಿದೆ. ಹಿಂದೆ ಬಿಜೆಪಿ ಅಧಿಕಾರದ ಅವಧಿಯಲ್ಲಿಯೇ ಜಯಪ್ರಕಾಶ ಹೆಗಡೆ ಅವರು ಸರಕಾರಕ್ಕೆ ಮಧ್ಯಂತರ ವರದಿಯನ್ನು ಕೊಟ್ಟಿತ್ತು” ಎಂಬುದನ್ನು ತಿಳಿಸಿದರು.

“ಇವತ್ತು ಯಾಕೆ ಜಾತಿಗಣತಿಯನ್ನು ವಿರೋಧ ಮಾಡುತ್ತಿದ್ದಾರೆ. ಈ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಅಧ್ಯಯನಕ್ಕಾಗಿ ನೇಮಕವಾಗಿದ್ದ ಯಾವ ವರದಿಗಳನ್ನು ಮೇಲ್ಜಾತಿಯವರು ಒಪ್ಪಿಕೊಂಡಿಲ್ಲ. ಹಾವನೂರು ವರದಿಯನ್ನು ಒಪ್ಪಿಕೊಂಡಿಲ್ಲ. ಚಿನ್ನಪ್ಪ ವರದಿಯನ್ನು ಒಪ್ಪಿಕೊಂಡ ಉದಾಹರಣೆಗಳೇ ಇಲ್ಲ” ಎಂದು ಬಸವರಾಜ ಸೂಳಿಬಾವಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ : ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಪತ್ರಿಕಾಗೋಷ್ಠಿಯಲ್ಲಿ ಪ್ರಗತಿಪರ ಚಿಂತಕರು ಬಸವರಾಜ ಪೂಜಾರ, ಹೋರಾಟಗಾರರು ಮುತ್ತು ಬಿಳಿಯಲಿ, ಶರೀಫ ಬಿಳಿಯಲಿ, ಬಾಲರಾಜ್ ಅರಬರ, ಅನಿಲ ಕಾಳೆ, ಪರಸು ಕಾಳೆ ಹಾಗೂ ಆನಂದ ಶಿಂಗಾಡಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...