ಭೀಕರ ಬರದಿಂದ ರೈತರು ಈಗಾಗಲೇ ಕಂಗಾಲಾಗಿದ್ದಾರೆ. ಇದರ ನಡುವೆ, ಸರ್ಕಾರದಿಂದ ಫಸಲ್ ಭೀಮಾ ಯೋಜನೆಯಡಿ 35ಕೋಟಿ ರೂ. ಬೆಳೆ ವಿಮೆ ಬಿಡುಗಡೆ ಆಗಿತ್ತು. ಬೆಳೆ ವಿಮೆ ಹಣ ಬಂದ್ದರೂ ಜಿಲ್ಲಾಡಳಿತ ಮಾತ್ರ ರೈತರಿಗೆ ನೀಡಿಲ್ಲ. ಇದರಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಫಸಲು ಭೀಮಾ ಯೋಜನೆಯಡಿ 35 ಕೋಟಿ ರೂ. ಬಿಡುಗಡೆ ಆಗಿತ್ತು. ರಾಜ್ಯದಲ್ಲೇ ಗದಗ ಜಿಲ್ಲೆಗೆ ಅತಿಹೆಚ್ಚು ಹಣ ಬಿಡುಗಡೆ ಮಾಡಲಾಗಿದೆ. ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ ಎನ್ನುವಂತಾಗಿದೆ ರೈತರ ಪರಿಸ್ಥಿತಿ.
ಬಿಡುಗಡೆಯಾಗಿ ತಿಂಗಳಾದರೂ ರೈತರ ಖಾತೆಗೆ ಜಿಲ್ಲಾಡಳಿತ ಹಣ ಹಾಕಿಲ್ಲ. ಹಾಗಾಗಿ ಗದಗ ಜಿಲ್ಲಾಡಳಿತದ ವಿರುದ್ಧ ಅನ್ನದಾತರು ಆಕ್ರೋಶ ಹೊರಹಾಕಿದ್ದಾರೆ. ರೈತರ ವಿರುದ್ಧ ಜಿಲ್ಲಾಡಳಿತ ಅನ್ಯಾಯ ಮಾಡುತ್ತಿದೆ ಎಂದು ರೈತರು ಗರಂ ಆಗಿದ್ದಾರೆ.