ಗದಗ | ಮತದಾನದ ಹಕ್ಕು ಪ್ರಜಾಪ್ರಭುತ್ವದ ರಕ್ಷಣೆಗೆ ಇರುವ ಪ್ರಬಲ ಅಸ್ತ್ರ: ಶಾಸಕ ಡಾ.ಎಚ್.ಕೆ. ಪಾಟೀಲ

Date:

“ಪ್ರಜಾಪ್ರಭುತ್ವದ ರಕ್ಷಣೆಗೆ ಮತದಾನದ ಹಕ್ಕು ಪ್ರಬಲ ಅಸ್ತ್ರವಾಗಿದೆ. ಸಂವಿಧಾನದ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ” ಎಂದು ಶಾಸಕ ಡಾ.ಎಚ್.ಕೆ.ಪಾಟೀಲ ತಿಳಿಸಿದರು. 

- Advertisement -

ಗದಗ ನಗರದ ಜಿಲ್ಲಾಡಳೀತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾದಿಕಾರ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

“ಮತದಾನದ ಹಕ್ಕು ಉಳಿದರೆ ಮಾತ್ರ ಪ್ರಜಾಪ್ರಭುತ್ವ ಶಕ್ತಿಯಾಲಿಯಾಗುತ್ತದೆ. ಸಂವಿಧಾನದ ಪೀಠಿಕೆಯಂತೆ ಸರ್ವರು ಬದುಕನ್ನು ನಡೆಸಬೇಕು. ಪ್ರಜಾಪ್ರಭುತ್ವದ ಕುರಿತು ಜಾಗೃತಿ ಮೂಡಿಸುವುದಕ್ಕೋಸ್ಕರವೇ ಈ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಪ್ರತಿಯೊಬ್ಬರಿಗೂ ಸಮಾನವಾದ ಅವಕಾಶ, ಸ್ಥಾನಮಾನ ದೊರಕುಬೇಕು. ಬಡತನವನ್ನು ಬೇರು ಸಹಿತ ಕಿತ್ತೋಗೆಯುವಲ್ಲಿ ಯಶಸ್ವಿಯಾಗಿದ್ದೇವೆ ಆದರೂ ಸಹಿತ ಅಸ್ಪೃಶ್ಯತೆಯನ್ನು ಕಿತ್ತೋಗೆಯಲು ಸಾಧ್ಯವಾಗಿಲ್ಲ. ಸರ್ಕಾರವು ಜಗಜ್ಯೋತಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಅನುಭವ ಮಂಟಪವೇ ಮೊದಲ ಸಂಸತ್ತಾಗಿದೆ. ಸಂವಿಧಾನ ಮತ್ತು ಬಸವೇಶ್ವರ ವಚನಗಳಲ್ಲಿ ಸಾಮ್ಯತೆಯನ್ನು ಕಾಣುತ್ತೇವೆ. ಪ್ರಜಾಪ್ರಭುತ್ವ ಕಾಪಾಡಿಕೊಂಡು ಬಲಿಷ್ಟ ರಾಷ್ಟçವಾಗಿ ನಮ್ಮ ದೇಶ ಬೆಳೆಯಲು ಸಂವಿಧಾನವೇ ಕಾರಣವಾಗಿದೆ. ಜಗತ್ತಿನಲ್ಲಿಯೇ ಬಲಿಷ್ಟ ಪ್ರಜಾಪ್ರಭುತ್ವ ಹೊಂದಿದ ರಾಷ್ಟç ನಮ್ಮ ದೇಶವಾಗಿದೆ. ಸಂವಿಧಾನವನ್ನು ಗೌರವಿಸುವುದು ಮತ್ತು ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ” ಎಂದು ಶಾಸಕ ಡಾ. ಎಚ್.ಕೆ.ಪಾಟೀಲ ತಿಳಿಸಿದರು. 

ಸಹಾಯಕ ಕಾನೂನು ನೆರವು ಅಭಿರಕ್ಷಕರಾದ ಗುರುರಾಜ ಗೌರಿ ಅವರು ಉಪನ್ಯಾಸ ನೀಡಿ ಮಾತಾಡುತ್ತಾ, “ಜಗತ್ತಿನಾದ್ಯಂತ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲು ನೆಲ್ಸನ್ ಮಂಡೇಲಾ ಅವರನ್ನು ಇಂದು ನಾವು ಸ್ಮರಿಸಬೇಕಾಗಿದೆ. ನೆಲ್ಸನ್ ಮಂಡೇಲಾ ಅವರು ಪ್ರಜಾಪ್ರಭುತ್ವ ದಿನಾಚರಣೆಗೆ ಶ್ರಮಿಸಿದವರಾಗಿದ್ದಾರೆ. ಪ್ರಜಾಪ್ರಭುತ್ವವು ಕೇವಲ ಆಡಳಿತವಲ್ಲ. ಇದೊಂದು ಜೀವನ ಶೈಲಿಯಾಗಿದೆ. ಪ್ರಜಾಪ್ರಭುತ್ವ ಮೇಲ್ನೋಟಕ್ಕೆ ಅಲ್ಲದೇ ಅದನ್ನು ಅನುಭವಿಸಬೇಕು. ದೇಶದ ಪ್ರಗತಿಗೆ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಅದ್ಭುತ ಪ್ರತಿಭೆಯನ್ನು ನಾವು ಇವತ್ತಿನ ದಿವಸ ಸ್ಮರಿಸಬೇಕಾಗಿದೆ.  ‘constitution debate’ ಪುಸ್ತಕಗಳನ್ನು ಪ್ರತಿಯೊಬ್ಬರೂ ಓದಬೇಕು. ಕಾಯ್ದೆಗಳ ಪೂರ್ಣ ಅನುಷ್ಟಾನವಾಗಬೇಕು. ಅವುಗಳ ದುರುಪಯೋಗವಾಗಬಾರದು ಎಂದು ತಿಳಿಸುತ್ತಾ ಶಾಲಾ ವಿದ್ಯಾರ್ಥಿಗಳಿಗೆ ಶಾಸಕರಾಗಿ ಆಯ್ಕೆಯಾದ ಮೇಲೆ ವಿಧಾನಸಭೆಯಲ್ಲಿ ಮಾಡಬೇಕಾದ (concept) ಪರಿಕಲ್ಪನೆಗಳ ಕುರಿತು ವಿವರವಾಗಿ ತಿಳಿಸಿಕೊಟ್ಟರು.

ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯ ಭಿತ್ತಿಪತ್ರ ಬಿಡುಗಡೆಗೊಳಿಸಲಾಯಿತು. ಶರೀಫ್ ಬಿಳಿಯಲಿ ಹಾಗೂ ಸಂಗಡಿಗರು ಸಂವಿಧಾನದ ಕುರಿತು ಗೀತೆಗಳನ್ನು ಪ್ರಸ್ತುತಪಡಿಸಿದರು. ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಭಾರತದ ಸಂವಿಧಾನದ ಪ್ರಸ್ತಾವನೆ ಬೋಧಿಸಿದರು. 

ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಎಚ್.ಎನ್, ಆರ್.ಡಿ.ಪಿ.ಆರ್ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಅಮರೇಶ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರಾದ ಎಸ್.ಜಿ. ಪಲ್ಲೇದ, ಎಸ್.ಎನ್. ಬಳ್ಳಾರಿ, ಆದಪ್ಪನವರ, ಬಸವರಾಜ ಕಡೆಮನಿ, ಆನಂದ ಸಿಂಗಾಡೆ, ಮಾರ್ತಾಂಡ ಹಾದಿಮನಿ, ಪ್ರೊ.ಕೆ.ಎಚ್. ಬೇಲೂರ ಸೇರಿದಂತೆ ಜಿಲ್ಲಾ ಜಾಗೃತ ಸಮಿತಿಯ ನಾಮನಿರ್ದೇಶಿತ ಸದಸ್ಯರು, ನಗರಸಭೆ ಸದಸ್ಯರು, ಸಫಾಯಿ ಕರ್ಮಚಾರಿ ನಾಮನಿರ್ದೇಶಿತ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು. 

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಸರ್ವರನ್ನು ಸ್ವಾಗತಿಸಿದರು. ಪ್ರೊ. ಬಾಬಹುಬಲಿ ಜೈನರ್ ಹಾಗೂ ನಂದಿತಾ ಹಂಪಿಹೊಳಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಕ್ಕೂ ಮುನ್ನ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಬಿಡಿಸಿದ ರಂಗೋಲಿ ಎಲ್ಲರ ಕಣ್ಮನ ಸೆಳೆಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...