ಗದಗ | ಅಕ್ರಮ ಮರಳು ಸಾಗಾಣಿಕೆಯಿಂದ ರಾಜ್ಯ ಸರಕಾರಕ್ಕೆ ನಷ್ಟ: ಕ್ರಮಕ್ಕೆ ಕರವೇ ಸ್ವಾಭಿಮಾನಿ ಸೇನೆ ಆಗ್ರಹ

Date:

ಅಕ್ರಮ ಮರಳು ಸಾಗಾಣಿಕೆಯಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ತುಂಬಾ ನಷ್ಟವಾಗುತ್ತಿದೆ. ಈ ಅಕ್ರಮ ಮರಳು ಸಾಗಾಣಿಕೆಯನ್ನು ತಡೆಯದೇ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ತಮ್ಮ ಪಾಲಿಗೆ ಪ್ರಸಾದ ಎಂಬಂತೆ ಸ್ವೀಕರಿಸಿ ಕಣ್ಮುಚ್ಚಿ ಕುಳಿತುಕೊಂಡಿದ್ದಾರೆ ಎಂದು ಕರವೇ ಸ್ವಾಭಿಮಾನಿ ಸೇನೆ ಬೆಳಗಾವಿ ವಿಭಾಗೀಯ ಅಧ್ಯಕ್ಷ ಶರಣು ಗೋಡಿ ಕಿಡಿಕಾರಿದರು.

- Advertisement -

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯು ಅಕ್ರಮ ಮರಳು ಸಾಗಾಣಿಕೆ ನಿಲ್ಲಿಸುವಂತೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ತಹಶೀಲ್ದಾರ್ ಕಛೇರಿ ಎದುರು ಪ್ರತಿಭಟಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಲಕ್ಷ್ಮೇಶ್ವರ ತಾಲ್ಲೂಕಿನ ಅಕ್ಕಿಗುಂದ, ಬಟ್ಟೂರ, ಅಮರಾಪೂರ, ಹುಲ್ಲೂರು, ಆದರಹಳ್ಳಿ, ಕೋಗನೂರ ಗ್ರಾಮಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಕೆಲವು ಟಿಪ್ಪರ್ ಮತ್ತು ಲಾರಿಗಳು ಒಂದೇ ಪಾಸು ಪಡೆದು ತಮಗೆ ಎಲ್ಲಿ ಬೇಕೆಂದರಲ್ಲಿ ಮರಳನ್ನು ತುಂಬಿಕೊಂಡು ಅದೇ ಪಾಸ್‌ನಲ್ಲಿ ನಾಲ್ಕು ಐದು ಟ್ರಿಪರ್ ಮರಳು ಸಾಗಾಟ ಮಾಡುತ್ತಿದ್ದಾರೆ. ಲಾರಿ ಮತ್ತು ಟಿಪ್ಪರ್ ಗಳಿಗೆ ಜಿಪಿಎಸ್ ಇದ್ದರೂ ಸಹ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಕಣ್ಣು ತಪ್ಪಿಸಿ ಜಿಪಿಎಸ್ ಬಂದ್ ಮಾಡಿ ಮರಳು ಗುತ್ತಿಗೆದಾರರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಅಕ್ರಮದ ಜೊತೆಗೆ ಅಕ್ರಮ ಮರಳು ಸಾಗಾಣಿಕೆ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಕೂಡಲೇ ಈ ಎಲ್ಲಾ ಅಕ್ರಮ ಮರಳು ಗಣಿಗಾರಿಕೆಯನ್ನು ಈ ಕೂಡಲೇ ಸ್ಥಗಿತಗೊಳಿಸಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿರುವುದನ್ನು ತಡೆಹಿಡಿದು ಸಂಬಂಧಪಟ್ಟ ಅಕ್ರಮ ಮರಳು ದಂಧೆಕೋರರ ಮೇಲೆ ಸೂಕ್ತ ಕಾನೂನು ಕ್ರಮವನ್ನು ಒಂದು ವಾರದೊಳಗೆ ಜರುಗಿಸಬೇಕು ಇಲ್ಲವಾದರೆ ನಾವು ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ಶರಣು ಗೋಡಿ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಮೈನು ಮನಿಯಾರ್, ಅಕ್ಬರ್ ಬಾಗೋಡಿ, ರಫಿಕ್ ಶಿಗ್ಗಾವಿ, ನದಿಮ್ ಕುಂದಗೋಳ, ಮುಕ್ತಿಯಾರ್ ಜಮಖಂಡಿ, ನಾಸಿರ್ ಜಮಾದಾರ, ಜಾಕಿರ್ ಶಿರಹಟ್ಟಿ, ಮಹಾಂತೇಶ್ ಉಮಚಗಿ, ಯಲ್ಲಪ್ಪ ಹಂಚಗಿ, ಪ್ರವೀಣ್ ಆಚಾರಿ, ದೀಪಿಕ್ ಲಮಾಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...