ಗದಗ | ಚರಂಡಿ ಗಬ್ಬುನಾರುತ್ತಿದ್ದರು ಅಧಿಕಾರಿಗಳ ನಿರ್ಲಕ್ಷ್ಯ; ಗ್ರಾಮಸ್ಥರ ಆಕ್ರೋಶ

Date:

ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಚರಂಡಿಗಳನ್ನು ಸ್ವಚ್ಚಗೊಳಿಸದ ಕಾರಣ ಗ್ರಾಮಸ್ಥರಲ್ಲಿ ಸಾಂಕ್ರಾಮಿಕ ರೋಗದ ಭೀತಿ ಎದುರಿಸುತ್ತಿದ್ದಾರೆ.

ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದ ಪಕ್ಕದಲ್ಲಿರುವ ಮುಖ್ಯ ಚರಂಡಿಯಲ್ಲಿ ಭಾರಿ ಹೂಳು ತುಂಬಿಕೊಂಡಿದ್ದು, ಸೂಕ್ತವಾದ ಸ್ವಚ್ಛತೆ ಇಲ್ಲದೆ ಕೊಳಚೆ ನೀರು ಅಲ್ಲೇ ನಿಂತು ಗಬ್ಬುನಾರುತ್ತಿದೆ. ಇದಕ್ಕೆಲ್ಲಾ ಅಧಿಕಾರಿಗಳ ನಿರ್ಲಕ್ಷ್ಯತನವೇ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕುತ್ತಿದ್ದಾರೆ.

ಗ್ರಾಮದ 5ನೇ ವಾರ್ಡಿನಲ್ಲಿ ಚರಂಡಿಯ ಪಕ್ಕದಲ್ಲಿಯೇ ಕುಡಿಯುವ ನೀರಿನ ಘಟನೆ ನಿರ್ಮಾಣವಾಗಿದ್ದು, ಪ್ರತಿನಿತ್ಯ ನೀರಿಗೆ ಬರುವ ಜನರು ಚರಂಡಿ ದುರ್ವಾಸನೆಯಲ್ಲಿಯೇ ನೀರು ತುಂಬಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆ ವಾರ್ಡಿನ ಸದಸ್ಯರು ಹಾಗೂ ಸಾರ್ವಜನಿಕರು ಸ್ವಚ್ಛತೆ ಮಾಡಿಸಿ ಎಂದು ಅಧಿಕಾರಿಗಳ ಗಮನಕ್ಕೆ ತಂದರೂ ಇತ್ತ ಸ್ವಚ್ಛತೆ ಕಡೆ ಗಮನಹರಿಸುತ್ತಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮದಲ್ಲಿ ಹಲವಾರು ಸಮಸ್ಯೆಗಳಿದ್ದು, ಗ್ರಾ.ಪಂ‌‌ ಅಧಿಕಾರಿಗಳು ಅಭಿವೃದ್ಧಿ ಕಡೆ ಗಮನಹರಿಸದೇ ಇರುವುದು ವಿಪರ್ಯಾಸ. ಅಭಿವೃದ್ಧಿ ಮಾಡುವ ಜನಪ್ರತಿನಿಧಿಗಳು ಅಭಿವೃದ್ಧಿ ಕಡೆ ಗಮನ ಹರಿಸದೆ ಫ್ಯಾನ್ ಖಾಸಗಿ ಕಂಪನಿಯವರ ಕಡೆ ಗಮನ ಹರಿಸುತ್ತಿದ್ದಾರೆ. ಜನ ಪ್ರತಿನಿದಿಗಳಿಗೆ ಬೇಕಾಗಿರುವದು ದುಡ್ಡು ಮಾಡುವದರ ಕಡೆ ಹೊರತು ಅಭಿವೃದ್ದಿ ಕಡೆ ಅಲ್ಲ ಎಂದು ಗ್ರಾಮಸ್ಥಅಂದಪ್ಪ ಮಾದರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್ ಪ್ರಕರಣ | ಸಂಬಂಧಪಟ್ಟವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಹಾಸನದ ಪೆನ್ ಡ್ರೈವ್ ಲೈಂಗಿಕ...