ಗದಗ | ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರಕ್ಕೆ ಅನುದಾನ ನೀಡಿ ಬಲಪಡಿಸಬೇಕು: ಎಸ್ ಎಫ್ ಐ ಒತ್ತಾಯ

Date:

“ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಮುಂದೆ ನಡೆಯುವ ರಾಜ್ಯ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಟ್ಟು, ಶಿಕ್ಷಣ ಕ್ಷೇತ್ರವನ್ನು ರಾಜ್ಯ ಸರ್ಕಾರ ಬಲಪಡಿಸಬೇಕು” ಎಂದು  ಎಸ್ ಎಫ್ ಐ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ ಒತ್ತಾಯಿಸಿದರು.

- Advertisement -

ಗದಗ ಜಿಲ್ಲೆ ರೋಣ ಪಟ್ಟಣದ ಶಾಸಕ ಜಿ ಎಸ್ ಪಾಟೀಲ್ ಅವರಿಗೆ ಭಾರತ ವಿದ್ಯಾರ್ಥಿ ಫೆಡರೇಷನ್ ಸಂಘಟನೆಯು ರಾಜ್ಯ ಬಜೆಟ್ನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ  ಬೇಡಿಕೆಗಳನ್ನು ಈಡೇರಿಸಲು ಹೆಚ್ಚಿನ ಅನುದಾನ ಮೀಸಲಿಡಬೇಕೆಂದು ಮನವಿ ಸಲ್ಲಿಸಿ ಮಾತಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

“ದೇಶದಲ್ಲಿ ಕರೋನ ನಂತರದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ತುಂಬಾ ವ್ಯತ್ಯಾಸಗಳಾಗಿವೆ. ಎಲ್.ಕೆ.ಜಿ ಯಿಂದ ಉನ್ನತ ಶಿಕ್ಷಣದವರೆಗೆ ಅವಲೋಕಿಸಿದಾಗ ಶಿಕ್ಷಣದ ಮೇಲೆ ಗಮನಾರ್ಹ ಪರಿಣಾಮ ಆಗಿದ್ದು ಕಂಡುಬರುತ್ತದೆ. ದಿನದಿಂದ ದಿನಕ್ಕೆ ಶಾಲೆ ಬಿಟ್ಟ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅವರನ್ನು ಮರಳಿ ಶಾಲೆಗೆ ಕರೆತರಲು ನಿರ್ಧಿಷ್ಟವಾದ ಯಾವುದೇ ಕಾರ್ಯ ಯೊಜನೆಯಿಲ್ಲ.  ಇನ್ನೊಂದೆಡೆಗೆ ಸರ್ಕಾರಿ ಮತ್ತು ಮಾತೃಭಾಷೆ  ಮಾಧ್ಯಮದ  ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚುತ್ತಿರುವುದನ್ನು ಕಾಣುತ್ತೆವೆ.  ಕರ್ನಾಟಕದಲ್ಲಿ ಇತ್ತಿಚೆಗೆ ಸುಮಾರು 6ಸಾವಿರಕ್ಕೂ ಅಧಿಕ ಕನ್ನಡ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚಲು ಪ್ರಸ್ತಾಪಿಸಿರುವುದು ಖಂಡನಿಯ” ಎಂದರು.

ರಾಜ್ಯ ಉಪಾಧ್ಯಕ್ಷರು ಗಣೇಶ ರಾಠೋಡ ಮಾತನಾಡಿ, “ಕನ್ನಡ ಶಾಲೆಗಳಿಗೆ ಮೂಲಭೂತ ಸೌಕರ್ಯಗಳು ಶುದ್ಧ ಕುಡಿಯುವ ನೀರು, ಪೌಷ್ಟಿಕ ಆಹಾರ, ಪಠ್ಯ ಪುಸ್ತಕ, ಸಮವಸ್ತ್ರ, ಸುಸಜ್ಜಿತ ಶೌಚಾಲಯ, ಶಾಲಾ ಕಟ್ಟಡಗಳು ಹಾಗೂ ಶಿಕ್ಷಕರು ನೇಮಕ,  ಆಟದ ಸಾಮಗ್ರಿಗಳು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಬಿಸಿಯೂಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು, ಶೆಂಗಾ ಚೆಕ್ಕೆ, ಹಾಲು ಇವುಗಳನ್ನು ಸರಿಯಾಗಿ ನಿಡದೆ ಇರುವುದರಿಂದ ಶಾಲಾ ಶಿಕ್ಷಣ ವ್ಯವಸ್ಥೆಯು ಇಂದು ಕುಂಠಿತಗೊಂಡಿದೆ. ಹಾಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು  ಕಾರ್ಪೋರೇಟ್ ಖಾಸಗಿ ಶಿಕ್ಷಣ ಸಂಸ್ಥೆಗಳ ಕಡೆ ಮುಖ ಮಾಡುತ್ತಿದ್ದಾರೆ. ಇದನ್ನು ತಡೆಗಟ್ಟಲು ಸರ್ಕಾರಗಳು ಶಿಕ್ಷಣ ಒಂದು ಸಾರ್ವತ್ರಿಕ ವ್ಯವಸ್ಥೆಯಾಗಿ ಉಳಿಸಿಕೊಳ್ಳಲು ವಿಫಲಗೊಂಡಿದೆ.” ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಫಲಶೃತಿ | ರಾಜ್ಯದಲ್ಲಿ ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಲೇಬಲ್‌ ಕಡ್ಡಾಯ

ಮನವಿ ಸಂದರ್ಭದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ ಮುಖಂಡರು ಅನಿಲ ಆರ್, ಶರಣು ಮಾಟರಂಗಿ, ನಾಗರಾಜ, ಅಭಿಲಾಷ್ ರಾಠೋಡ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ನವೆಂಬರ್ 20, 21ರಂದು ಜೈವಿಕ ತಂತ್ರಜ್ಞಾನ ಕುರಿತು ರಾಷ್ಟ್ರೀಯ ಕಾರ್ಯಾಗಾರ

ಬಿವಿವಿಎಸ್ ರಿಸರ್ಚ್ ಸೆಂಟರ್ ಫಾರ್ ಎಕ್ಸಲೆನ್ಸ್ ವತಿಯಿಂದ ನವೆಂಬರ್ 20 ಮತ್ತು...

ರೈತರ ಸಂಕಷ್ಟ ನಿವಾರಿಸಲಿ, ಕಣ್ಣೀರು ಸುರಿಸುವ ಸಭೆಯಾಗದಿರಲಿ: ಕುರುಬೂರು ಶಾಂತಕುಮಾರ್

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಅಕ್ಟೋಬರ್ 26ರಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ...

‘ SIR’ ಫಾರಂ-7 ದುರ್ಬಳಕೆ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಿ: ಜಾಗೃತ ಕರ್ನಾಟಕ ಒತ್ತಾಯ

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ...