ರಾಜ್ಯ ಸರ್ಕಾರವು ರಾಜ್ಯದ ಎಲ್ಲ ಗ್ರಾಮಗಳನ್ನು ವ್ಯಾಜ್ಯಮುಕ್ತ ಮಾಡಲು ಸಂಕಲ್ಪ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್. ಕೆ.ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲ ಗ್ರಾಮಗಳನ್ನು ವ್ಯಾಜ್ಯಮುಕ್ತ ಮಾಡಲು ಸಂಕಲ್ಪ ಮಾಡಲಾಗಿದ್ದು, ಪ್ರಾಯೋಗಿಕವಾಗಿ ಗದಗ ಜಿಲ್ಲೆಯಲ್ಲಿ ನವೆಂಬರ್ 26ರಂದು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ವ್ಯಾಜ್ಯ ಮುಕ್ತ ಗ್ರಾಮಗಳ ನಿರ್ಮಾಣ ಮಾಡುವಲ್ಲಿ ಸಾರ್ವಜನಿಕರು, ಕಾನೂನು ಇಲಾಖೆ, ಸಂಘಟನೆಗಳು, ಪೊಲೀಸ್, ವಿರೋಧ ಪಕ್ಷಗಳು, ಮಾಧ್ಯಮಗಳು, ಗ್ರಾಮದ ಹಿರಿಯರು ಸಹಕಾರ ಕೊಡಬೇಕು ಎಂದು ಹೇಳಿದ್ದಾರೆ.