ಗದಗ | ಕಬ್ಬು ಇಳುವರಿ ವಾಸ್ತವ ಪರಿಶೀಲನೆಗೆ ತಂಡ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್

Date:

ಜಿಲ್ಲೆಯಲ್ಲಿ ಕಬ್ಬು ಬೆಳೆದ ಪ್ರದೇಶಗಳಿಗೆ ಭೇಟಿ ನೀಡಿ  ರೈತರೊಂದಿಗೆ ಚರ್ಚಿಸಲು ಹಾಗೂ ಕಬ್ಬಿನ ಇಳುವರಿಯ ಕುರಿತು ವಾಸ್ತವತೆಯ ಪರಿಶೀಲನೆ ನಡೆಸಲು ತಂಡವನ್ನು ರಚಿಸಲಾಗಿದ್ದು ತಂಡದವರು ನಿಗದಿತ ಸಮಯದಲ್ಲಿಯೇ ಕಬ್ಬು ಬೆಳೆದ ಪ್ರದೇಶಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.

- Advertisement -

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರದಂದು  ಈ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಬ್ಬಿನ ಇಳುವರಿ ಪರಿಶೀಲನೆ ಕಾಲಕ್ಕೆ ಸಕ್ಕರೆ ಕಾರ್ಖಾನೆಯವರು ಹಾಜರಿರುವುದು ಕಡ್ಡಾಯವಾಗಿದೆ. ಕಬ್ಬು ಕಟಾವು ಪ್ರಕ್ರಿಯೆಯನ್ನು ಜೇಷ್ಠತಾ ಆಧಾರದ ಮೇಲೆ ಜರುಗುವ ಕುರಿತು ಕ್ರಮ ಕೈಗೊಳ್ಳುವುದು. ಈ ಕುರಿತು ಸಕ್ಕರೆ ಕಾರ್ಖಾನೆಯವರು ಜೇಷ್ಠತಾ ಪಟ್ಟಿಯನ್ನು ತಂಡದ ಮುಖ್ಯಸ್ಥರಿಗೆ ಜೇಷ್ಠತಾ ಪಟ್ಟಿ ಸಲ್ಲಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಕಬ್ಬಿನ ಕಟಾವು ಸಮಯದಲ್ಲಿ  ಸ್ಥಳಕ್ಕೆ ಭೇಟಿ ನೀಡಿ ಗ್ಯಾಂಗ್ ಮನ್‍ಗಳಿಂದ, ಕೂಲಿಕಾರರಿಂದ, ಸಾಗಾಣಿಕೆದಾರರಿಂದ ಯಾವುದೇ ತೊಂದರೆಗಳಾಗದಂತೆ ಅಗತ್ಯ ಸೂಚನೆ ನೀಡಬೇಕು. ಕಬ್ಬು ಬೆಳೆಗೆ ಗೊಣ್ಣೆ ರೋಗದ ಭೇತಿ ಇರುವುದರಿಂದ ತಜ್ಞರೊಂದಿಗೆ ಸಮಾಲೋಚಿಸಿ ಅಗತ್ಯ ವೈಜ್ಞಾನಿಕ ಸಲಹೆಗಳನ್ನು ನೀಡಬೇಕು. ಕಬ್ಬು ಬೆಳೆಯ ಕಟಾವು ಪ್ರಕ್ರಿಯೆ ಪ್ರಾರಂಭದಿಂದ ಮುಗಿಯುವವರೆಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.

ಕಬ್ಬು ಕಟಾವು ಪ್ರಕ್ರಿಯೆಯಲ್ಲಿ  ನಿಗದಿತ ದರಕ್ಕಿಂತ ಹೆಚ್ಚಿನ ಹಣದ ಅಮಿಷವೊಡ್ಡಿ ಜೇಷ್ಠತಾ ಪ್ರಕ್ರಿಯೆಯನ್ನು ಬದಲಿಸುವ  ಸಂಭವನೀಯತೆಯನ್ನು ತಡೆಗಟ್ಟಬೇಕು ಹಾಗೂ  ಕಟಾವು ಸಮಯದಲ್ಲಿ ರೈತರೊಂದಿಗೆ ಹಾಗೂ ಗ್ಯಾಂಗ್‍ಮನ್‍ಗಳೊಂದಿಗೆ ಮಾತನಾಡಿ ಮಾಡಿಕೊಂಡು ರೈತರಿಗೆ ಉಂಟಾಗಬಹುದಾದ ತೊಂದರೆಗಳನ್ನು ಹಾಗೂ ನಷ್ಟವನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕೆಂದರು.

ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಗಂಗಪ್ಪ  ಅವರು ಮಾತನಾಡಿ ಪ್ರಸಕ್ತ ಸಾಲಿನ ಸಕ್ಕರೆ ಹಂಗಾಮಿಗೆ ಕೇಂದ್ರ ಸರ್ಕಾರದಿಂದ ನ್ಯಾಯಯುತ ಮತ್ತು ಲಾಭದಾಯಕ ( ಎಫ್.ಆರ್.ಪಿ) ದರವನ್ನು ನಿಗದಿಪಡಿಸಿದ್ದು, ಕಬ್ಬು ಅರಿಯುವ ಮುನ್ನ ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ಹಾಗೂ ಎಫ್.ಆರ್.ಪಿ ದರ ಹೆಚ್ಚಿಸುವ ಹಾಗೂ ಇತರೆ ವಿಷಯಗಳ ಕುರಿತು ಸಕ್ಕರೆ ಕಾರ್ಖಾನೆಯ ಮಂಡಳಿಯವರ ಹಾಗೂ ಕಬ್ಬು ಬೆಳೆಗಾರರ ಸಭೆಯನ್ನು ಜರುಗಿಸಲಾಗಿದೆ ಎಂದರು.

ಕಬ್ಬು ಬೆಳೆಗಾರರ ಸಮಸ್ಯೆಗಳನ್ನು  ಪರಿಶೀಲಿಸಲು ಹಾಗೂ ವಾಸ್ತವತೆ ಅರಿಯಲು   ಆಹಾರ ನಿರೀಕ್ಷಕರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿ, ಸಕ್ಕರೆ ಕಾರ್ಖಾನೆಯ ಅಧಿಕಾರಿಗಳನ್ನೊಳಗೊಂಡಂತೆ  4  ತಂಡಗಳನ್ನು ರಚಿಸಲಾಗಿದೆ.   ಉಪವಿಭಾಗಾದಿಕಾರಿಗಳು, ಜಂಟಿ ಕೃಷಿ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು,  ಮುಂಡರಗಿ ತಹಶೀಲ್ದಾರರು ಒಂದೊಂದು ತಂಡಗಳಿಗೆ ಮುಖ್ಯಸ್ಥರುಗಳಾಗಿರುತ್ತಾರೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ  ಡಾ. ವೆಂಕಟೇಶ ನಾಯ್ಕ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ , ಆಹಾರ ಮತ್ತು ನಾಘರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಗಂಗಪ್ಪ , ಎ.ಪಿ.ಎಂ.ಸಿ.ಯ ಸಹಾಯಕ ನಿರ್ದೇಶಕ ಎಂ.ಆರ್. ನದಾಫ್,  ವಿಜಯನಗರ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕರು,  ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕತಾರ್‌ನಲ್ಲಿ ಉಡುಪಿಯ ಸಮಾಜ ಸೇವಕ ಎಂ. ಇಕ್ಬಾಲ್ ಮನ್ನಾ ಅವರಿಗೆ ಗೌರವ ಸನ್ಮಾನ

ಉಡುಪಿ ಜಿಲ್ಲೆಯ ಪ್ರಮುಖ ಸಮಾಜ ಸೇವಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಎಂ....

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...