ಗದಗ | ಅಧಿಕಾರಿಗಳ ಸಂಧಾನ; ಮತದಾನ ಬಹಿಷ್ಕಾರ ಹಿಂಪಡೆದ ತಿಮ್ಮಾಪುರ ಗ್ರಾಮಸ್ಥರು

Date:

ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದಲ್ಲಿ ಗ್ರಾಮದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲೋಕಸಭಾ ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಿದ್ದ ಗ್ರಾಮಸ್ಥರನ್ನು  ಮನವೊಲಿಸುವಲ್ಲಿ ಅಧಿಕಾರಿಗಳು ಸಫಲರಾಗಿದ್ದಾರೆ.

- Advertisement -

ಗದಗ ಹಾಗೂ ರೋಣ ತಾಲೂಕು ದಂಡಾಧಿಕಾರಿಗಳು ಹಾಗೂ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳ, ಕಾರ್ಯಪಾಲಕ ಅಭಿಯಂತರರ, ಪೊಲೀಸ್ ಇಲಾಖೆಯ  ತಂಡವು   ಕರ್ನಾಟಕ ರಾಜ್ಯ ರೈತ ಸಂಘದ ಗ್ರಾಮ ಘಟಕ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು – ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮದಲ್ಲಿ ಸಾರ್ವಜನಿಕರೊಂದಿಗೆ ಸಭೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸಾರ್ವಜನಿಕರ ದೂರಿನನ್ವಯ  ತಿಮ್ಮಾಪೂರ ಗ್ರಾಮದಲ್ಲಿ ಅನೇಕ ವರ್ಷಗಳಿಂದ ಅನುಷ್ಠಾನಗೊಳ್ಳದೆ, ಅನುಷ್ಠಾನಗೊಂಡು ಪೂರ್ಣಗೊಳ್ಳದೆ ಇರುವ  ಕಾಮಗಾರಿಗಳಾದ, ತಿಮ್ಮಾಪೂರ ಗ್ರಾಮದಿಂದ ಕೋಟುಮಚಿಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣ, ಕಾಣೆಹಳ್ಳಕ್ಕೆ ಮೇಲು ಸೇತುವೆ ನಿರ್ಮಾಣ, ತಿಮ್ಮಾಪೂರ ಗ್ರಾಮದಿಂದ ಸೋಂಪೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣ, ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ, ನೂತನ ರಾಷ್ಟ್ರೀಕೃತ ಬ್ಯಾಂಕ್ ಶಾಖೆ ತೆರೆಯುವದು, ಕುಡಿಯುವ ನೀರಿನ ಯೋಜನೆಯಾದ ಜಿಜಿಎಂ ಕಾಮಗಾರಿಯಿಂದ ರಸ್ತೆ ದುರಸ್ತಿ, ನೀರು ಪೂರೈಕೆ ಮಾಡುವುದು ಸೇರಿದಂತೆ,

ಮಹಿಳೆಯರಿಗೆ 2 ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡುವುದು, ಹರ್ಲಾಪೂರ ಹಾಗೂ ಹಳ್ಳಿಗುಡಿ ರಸ್ತೆ ಡಾಂಬರೀಕರಣ ಮಾಡುವುದು, ರೈತರು ತಮ್ಮ ಕೃಷಿ ಜಮೀನುಗಳಿಗೆ ಹೋಗುವ ದಾರಿಯನ್ನು ದುರಸ್ತಿ ಮಾಡುವ ಬೇಡಿಕೆ ಗ್ರಾಮಸ್ಥರದ್ದು.

ಈ ಸಮಸ್ಯೆ ಕುರಿತಾಗಿ ಸಂಬಂಧಿಸಿದ ಇಲಾಖೆಗಳೊಂದಿಗೆ ಮತ್ತೊಂದು ಸುತ್ತಿನ ತುರ್ತು ಸಭೆ ಆಯೋಜಿಸಿ ಕ್ರಮವಹಿಸಲಾಗುವುದೆಂದು ಅಧಿಕಾರಿಗಳು ತಿಳಿಸಿದರು ಹಾಗೂ ಶೀಘ್ರವೇ ಗ್ರಾಮದಲ್ಲಿನ ನೀರು ಹಾಗೂ ನೈರ್ಮಲ್ಯ ಸಂಬಂಧಿತ ಕೆಲಸಗಳನ್ನು ತುರ್ತಾಗಿ ವಿಲೇವಾರಿ ಮಾಡಲು ಕ್ರಮಕೈಗೊಳ್ಳಲಾಗುವದು ಎಂದು ಸೂಚಿಸಿದರು.

ನಂತರ ಹಾಜರಿದ್ದ ಗ್ರಾಮಸ್ಥರಿಗೆ ಅಧಿಕಾರಿ ವರ್ಗವು ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸುತ್ತಾ, ಪ್ರತಿಜ್ಞಾ ವಿಧಿ ಬೊಧನೆ ಮಾಡಿಸಿ ಸಭೆಯನ್ನು ಮುಕ್ತಾಯಗೊಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...