ಗದಗ | ಸುಗಮ, ಸುರಕ್ಷಿತ ಸಂಚಾರಕ್ಕಾಗಿ ‘ಥರ್ಡ್‌ ಐ’ ತಂತ್ರಜ್ಞಾನ; ಮಾರ್ಚ್ 1ರಿಂದ ಜಾರಿಗೆ

Date:

ಗದಗ ಜಿಲ್ಲೆಯ ರೋಣ ನಗರದಲ್ಲಿ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ ‘ಥರ್ಡ್‌ ಐ’ ತಂತ್ರಜ್ಞಾನವನ್ನು ಮಾರ್ಚ್ 1ರಿಂದ ಜಾರಿಗೆ ಬರಲಿದೆ ಎಂದು ರೋಣ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವನಿಟ್ಟಿನಲ್ಲಿ ಇತ್ತೀಚೆಗೆ ರಾಜ್ಯದಲ್ಲಿ ಪರಿಚಯಿಸಿದ ಸಿಸಿಟಿವಿ ಕ್ಯಾಮರಾ ಆಧಾರಿತ ನೂತನ ತಂತ್ರಜ್ಞಾನ ವ್ಯವಸ್ಥೆಯೇ ಈ ಥರ್ಡ್‌ ಐ. ಈಗಾಗಲೇ ರೋಣ ನಗರದ ಪ್ರಮುಖ ಸ್ಥಳಗಳಲ್ಲಿ ಥರ್ಡ್‌ ಐ ತಂತ್ರಜ್ಞಾನ ಅಳವಡಿಸಲಾಗಿದ್ದು, ಇನ್ನು ಮುಂದೆ ಸಂಚಾರಿ ನಿಯಮ ಉಲ್ಲಂಘಿಸುವ ವಾಹನ ಸವಾರರ ಮೇಲೆ ಇಲಾಖೆ ಹದ್ದಿನ ಕಣ್ಣಿಡಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

‘ಥರ್ಡ್‌ ಐ’ ಜಾರಿ ಪೂರ್ವದಲ್ಲಿ ಇಲಾಖೆಯು ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸಿದ್ದು, ವಾಹನ ಸವಾರರು ರಸ್ತೆ ಸಂಚಾರ ನಿಯಮಗಳಾದ ಹೆಲ್ಮೆಟ್ ಧರಿಸುವುದು, ಸೀಟ್ ಬೆಲ್ಟ್ ಧರಿಸುವುದು, ಟ್ರಿಪಲ್ ರೈಡಿಂಗ್ ನಿಷೇಧ, ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತ ವಾಹನ ಚಲಾಯಿಸದಿರುವುದು ಸೇರಿದಂತೆ ವಿವಿಧ ನಿಯಮಗಳನ್ನು‌ ಕಡ್ಡಾಯವಾಗಿ‌ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಒಂದು ವೇಳೆ ನಿಯಮ ಉಲ್ಲಂಘಿಸಿದಲ್ಲಿ ದಂಡ ಕಟ್ಟಲು ನೋಟಿಸ್ ನೀಡಲಾಗುವುದು ಎಂದು ರೋಣ ನಗರ ಮತ್ತು ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಿಗೆ ಪ್ರಕಟಣೆ ಮೂಲಕ ತಿಳಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...