ಗದಗ | ಹುಳುಬಿದ್ದ ಸ್ಥಿತಿಯಲ್ಲಿ ಸಾವಿರಾರು ʼಸಂವಿಧಾನ ಓದುʼ ಪುಸ್ತಕಗಳು; ಕ್ರಮಕ್ಕೆ ಶಿವಾನಂದ ತಮ್ಮಣ್ಣವರ ಮನವಿ

Date:

ಗದಗ-ಬೆಟಗೇರಿ ನಗರಸಭೆಯಿಂದ ಸನ್ 2025ನೇ ಸಾಲಿನ ನವೆಂಬರ 26 ದಿನದಂದು ನ್ಯಾಯಮೂರ್ತಿ ನಾಗಮೋಹನ ದಾಸರವರ ‘ಸಂವಿಧಾನ ಓದು’ ಪುಸ್ತಕವನ್ನು ಸುಮಾರು ₹10ಲಕ್ಷ ರೂಪಾಯಿಗಳ, 40 ಸಾವಿರ ಪುಸ್ತಕಗಳನ್ನು ಪ್ರತಿ ಮನೆಗೂ ತಲುಪಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಪ್ರತಿ ಮನೆ ಮನೆಗೆ ತಲುಪದೇ ಹುಳತಿಂದು ಹಾಳಾಗುತ್ತಿವೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಶಿವಾನಂದ ತಮ್ಮಣ್ಣವರ ಗದಗ ಲೋಕಾಯುಕ್ತರಿಗೆ ಮನವಿ ಮಾಡಿದ್ದಾರೆ.

- Advertisement -

 “ಅಧಿಕಾರಿಗಳ ವಿಳಂಬ ನೀತಿಯಿಂದ ಇಲ್ಲಿಯವರೆಗೂ ಆ ಪುಸ್ತಕವನ್ನು ಪ್ರತಿ ಮನೆ ಮನೆಗೂ ತಲುಪಿಸಲಾಗಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ನ್ಯಾಯಮೂರ್ತಿ ನಾಗಮೋಹನ ದಾಸರವರು ಬರೆದಿರುವ ‘ಸಂವಿಧಾನ ಓದು’ ಪುಸ್ತಕವನ್ನು ಜನಪ್ರಕಾಶನದಿಂದ ಮೊದಲ ಹಂತದ ₹5 ಲಕ್ಷ ರೂಪಾಯಿಗಳ 20 ಸಾವಿರ ಪುಸ್ತಕಗಳನ್ನು ಎರಡು ವರ್ಷಗಳ ಹಿಂದೆಯೇ ಬೆಂಗಳೂರಿನಿಂದ ಗದಗ ಕಾಮತ್ ಟ್ರಾವಲ್ಸ್‌ನಲ್ಲಿ ಬಂದು ತಲುಪಿವೆ. ಈ ಪುಸ್ತಕಗಳನ್ನು ಗದಗ-ಬೆಟಗೇರಿ ನಗರಸಭೆ ಇಲ್ಲಿಯವರೆಗೂ ತೆಗೆದುಕೊಂಡು ಬಂದಿಲ್ಲ. ಇದರಿಂದ ಪುಸ್ತಕಗಳನ್ನು, ಇಲಿಗಳು ಕಡಿದು ಸಂಪೂರ್ಣ ಹಾಳಾಗುವ ಪರಿಸ್ಥಿತಿ ತಲುಪಿವೆ” ಎಂದು ತಿಳಿಸಿದ್ದಾರೆ.

“ಈ ಘಟನೆಗೆ ಕಾರಣರಾದ ಅಧಿಕಾರಿಗಳ ಹತ್ತಿರ ಹಾನಿಯಾಗಿರುವ ಪುಸ್ತಕಗಳ ಮೊತ್ತವನ್ನು ಭರಿಸಿಕೊಂಡು ಆ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿಬೇಕು. ಪ್ರತಿ ಮನೆಗೂ ಆ ಪುಸ್ತಕ ತಲುಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲು” ವಿನಂತಿಸಿದರು.

ಇದನ್ನೂ ಓದಿ: ಗದಗ | ಅಂತ್ಯಸಂಸ್ಕಾರ ಸಿದ್ಧತೆ ನಡೆಸುವಾಗ ಎಚ್ಚರವಾದ ವ್ಯಕ್ತಿ

“ಉಲ್ಲೇಖದನ್ವಯ ದಿನಾಂಕ 09-10-2024 ರಂದು ಈ ಕುರಿತು ಮಾನ್ಯ ಪೊಲೀಸ್ ಉಪ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಗದಗ ಜಿಲ್ಲೆ ಗದಗ ಇವರಿಗೆ ಮನವಿ ನೀಡಲಾಗಿತ್ತು, ಆದರೆ ನಗರಸಭೆಯ ಅಧಿಕಾರಿಗಳು ಇವರ ಆದೇಶಕ್ಕೂ ಯಾವುದೇ ಕ್ರಮವನ್ನು ತೆಗೆದುಕೊಳ್ಳದೇ ಬೇಕಾಬಿಟ್ಟಿಯಾಗಿ ವರ್ತಿಸುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಕುರಿತು ಈದಿನ.ಕಾಮ್ ಗದಗ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಅವರಿಗೆ ಕರೆ ಮಾಡಿದಾಗ “ಕಾಮತ್ ಟ್ರಾವೆಲ್ ನಲ್ಲಿ ಇರುವ ಸಂವಿಧಾನ ಓದು ಪುಸ್ತಕಗಳು ಇರುವುದು ನಮ್ಮ ಗಮನಕ್ಕೆ ಬಂದಿರುವುದಿಲ್ಲ. ನಗರಸಭೆಯಿಂದ ಮಾಹಿತಿ ಪಡೆದುಕೊಳ್ಳುವೆ” ಎಂದು ಪ್ರತಿಕ್ರಿಯೆ ನೀಡಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...