ಗದಗ | ರಭಸವಾಗಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿಹೋದ ಆರೋಗ್ಯ ಇಲಾಖೆ ಸಿಬ್ಬಂದಿ: ಮೂವರ ಪೈಕಿ ಇಬ್ಬರ ರಕ್ಷಣೆ

Date:

ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟುವ ಸಮಯದಲ್ಲಿ ಮೂವರು ಆರೋಗ್ಯ ಇಲಾಖೆ ಸಿಬ್ಬಂದಿ ಕೊಚ್ಚಿಹೋದ ಘಟನೆ ಮಂಗಳವಾರ ಗದಗ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಯಾ.ಸ.ಹಡಗಲಿ ಗ್ರಾಮ ಕೌಜಗೇರಿ ಗ್ರಾಮದ ನಡುವೆ ಇರುವ ಹಳ್ಳ ದಾಟುವ ವೇಳೆ ಆರೋಗ್ಯ ಇಲಾಖೆಯ ಮೂವರು ಸಿಬ್ಬಂದಿಗಳು ಕೊಚ್ಚಿ ಹೋಗಿದ್ದಾರೆ. ಮೂವರಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು, ಒಬ್ಬರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಬೆಳವಣಕಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಸಮುದಾಯ ಆರೋಗ್ಯ ಅಧಿಕಾರಿ ಬಸವರಾಜ ಕಡಪಟ್ಟಿ (34), ಹಿರಿಯ ಆರೋಗ್ಯ ಅಧಿಕಾರಿ ವೀರಸಂಗಯ್ಯ ಹಿರೇಮಠ (49) ಮತ್ತು ಕಿರಿಯ ಆರೋಗ್ಯ ಸಹಾಯಕಿ ಬಸಮ್ಮ ಗುರಿಕಾರ (32) ಅವರು ಯಾ.ಸ.ಹಡಗಲಿ ಗ್ರಾಮದಲ್ಲಿನ ಆರೋಗ್ಯ ಮೇಳ ಕಾರ್ಯಕ್ರಮ ಮುಗಿಸಿಕೊಂಡು ಬರುವಾಗ ಈ ಘಟನೆ ನಡೆದಿದೆ.

ಆರೋಗ್ಯ ಇಲಾಖೆಯ ಮೂವರು ಸಿಬ್ಬಂದಿ ಒಂದೇ ಬೈಕ್‌ನಲ್ಲಿ ಬರುತ್ತಿದ್ದರು. ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟುವ ವೇಳೆ ನೀರಿಗೆ ಬಿದ್ದಿದ್ದಾರೆ. ಈ ವೇಳೆ ಬಸವರಾಜ ಕಡಪಟ್ಟಿ , ವೀರಸಂಗಯ್ಯ ಹಿರೇಮಠ ಅವರನ್ನು ರಕ್ಷಿಸಲಾಗಿದೆ. ಬಸಮ್ಮ ಗುರಿಕಾರ ಅವರು ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವೃಕ್ಷಥಾನ್ ಹೆರಿಟೇಜ್ ರನ್ 2026: ತೆರೆಮರೆಯ ಸಾಧಕರಿಗೆ ಗೌರವ

ಕ್ರೀಡೆ, ಪಾರಂಪರಿಕ ಕ್ಷೇತ್ರ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಗಮನಾರ್ಹ ಸೇವೆ...

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...