ಗದಗ | ತಂಬಾಕು ನಿಯಂತ್ರಣ ತನಿಖಾ ದಳ ದಾಳಿ; ಕೋಟ್ಪಾ ಕಾಯ್ದೆ ಉಲ್ಲಂಘನೆ ವಿರುದ್ಧ ಕ್ರಮ

Date:

Advertisements

ಗದಗ ನಗರದ ವಿವಿಧೆಡೆ ತಂಬಾಕು ನಿಯಂತ್ರಣ ಕೋಟ್ಟಾ ಕಾಯ್ದೆ ಉಲ್ಲಂಘನೆ ಹಿನ್ನೆಲೆ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳ ಹಾಗೂ ತಾಲೂಕಾ ತಂಬಾಕು ನಿಯಂತ್ರಣ ತನಿಖಾ ದಳ ದಾಳಿ ನಡೆಸಿದೆ.

ಗದಗ  ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಥೋಡ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳ ಹಾಗೂ ತಾಲೂಕಾ ತಂಬಾಕು ನಿಯಂತ್ರಣ ತನಿಖಾ ದಳ ಗದಗ, ಮುಂಡರಗಿ, ರೋಣ, ವತಿಯಿಂದ ಗದಗ ನಗರದ ಮುಳಗುಂದ ನಾಕಾ, ಜಿಲ್ಲಾ ಆಸ್ಪತ್ರೆ ಆವರಣ, ಅಂಜುಮನ್ ಕಾಲೇಜು ಎದುರು, ಹಾತಲಗೇರಿ ನಾಕಾ, ಅಡವಿಸೊಮಪುರ, ಲಕ್ಕುಂಡಿ, ಮುಂಡರಗಿ, ಗಜೇಂದ್ರಗಡ, ಮುಂಡರಗಿ ಕೊರ್ಲಳ್ಳಿ ಕ್ರಾಸ್, ಡಂಬಳ, ಇತರೆ ಸ್ಥಳಗಳಲ್ಲಿ ಕೋಟ್ಪಾ ದಾಳಿ ನಡೆಸಲಾಗಿದೆ.

ಈ ವೇಳೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಹಾಗೂ ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ-2003ರ ಕುರಿತು ಸಾರ್ವಜನಿಕರಲ್ಲಿ ಹಾಗೂ ಅಂಗಡಿಕಾರರಲ್ಲಿ ಜಾಗೃತಿ ಮೂಡಿಸಲಾಯಿತು,  ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳಿಂದ ದೂರವಿರುವಂತೆ, ಚಟಕ್ಕೆ ಬಲಿಯಾಗದಂತೆ ಮಾಡುವ ಉದ್ದೇಶದಿಂದ ಶಾಲಾ ಕಾಲೇಜು ಆವರಣದಿಂದ 100 ಗಜದ ವರೆಗೆ ತಂಬಾಕು ಮಾರಾಟ ನಿಷೇಧ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧದ ಕುರಿತು ಪ್ರತಿಯೊಂದು ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕ ಬಿತ್ತರಿಸುವದು ಅ ಸ್ಥಳದ ಮಾಲೀಕರ ಜಾವಾಬ್ದಾರಿಯಾಗಿರುತ್ತದೆ ಹಾಗೂ ಕೆಲವು ಅಂಗಡಿಗಳ ಹಿಂದೆ ಧೂಮಪಾನ ಅಡ್ಡಾಗಳನ್ನು ಮಾಡಿಕೊಂಡಿರುವವರ ವಿರುದ್ಧ ಕೂಡಾ ಕ್ರಮ ವಹಿಸಲಾಯಿತು.

Advertisements

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದರಿಂದ ಅಮಾಯಕರ ಆರೋಗ್ಯದ ಮೇಲೆ ಪರಿಣಾಮಬೀರುತ್ತಿರುವದು ಕಂಡು ಬಂದಿದೆ, ತಂಬಾಕು ಕುರಿತ ಜಾಹೀರಾತು ನಿಷೇದಿಸುವದು, 18 ವರ್ಷದೋಳಗಿನವರಿಗೆ ತಂಬಾಕು ನಿಷೇಧಿಸುವದು, ತಂಬಾಕು ಉತ್ಪನ್ನಗಳ ಪ್ಯಾಕ್ ಮೇಲೆ ಶೇ.85ರಷ್ಟು ಆರೋಗ್ಯ ಎಚ್ಚರಿಕೆ ಚಿನ್ಹೆ ಕಡ್ಡಾಯ. ಈ ಕುರಿತು ಮಾಹಿತಿ ಹಾಗೂ ಜಾಗೃತಿ ಮೂಡಿಸಿ ಉಲ್ಲಂಘನೆ ಮಾಡಿದವರ ವಿರುದ್ಧ ಎಚ್ಚರಿಕೆ ನೀಡಿ ಒಟ್ಟು 83 ಪ್ರಕರಣ ದಾಖಲಿಸಿದ್ದು, ರೂ. 16,350 ದಂಡ ಸಂಗ್ರಹಿಸಿದ್ದಾರೆ.

ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಅದರ ಉಪಯೋಗ ಕೋಟ್ಪಾ ಕಾಯ್ದೆ ಅಡಿಯಲ್ಲಿ ಅವಕಾಶವಿದ್ದು ಅದನ್ನು ಉಲ್ಲಂಘಿಸಿದಲ್ಲಿ ಕಾನೂನು ರೀತಿಕ್ರಮ ವಹಿಸಲಾಗುವದು ಎಂದು ಎಚ್ಚರಿಕೆ ನೀಡಿದ್ದಾರೆ.

ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಗೋಪಾಲ ಸುರಪುರ, ಪೊಲೀಸ್ ಇಲಾಖೆಯ ಬಿ.ಎನ್. ಚಳಗೆರಾ, ಎಂ.ಆಯ್. ಮುಲ್ಲಾ, ಎ.ಎಸ್.ಐ, ಕುಮಾರಸ್ವಾಮಿ, ಸಚಿನ್, ರೆಷ್ಮಾ ಬೆಗಂ ನಧಾಫ್, ವೈ.ಎನ್. ಕಡೆಮನಿ ಹಾಗೂ ಮುಂಡರಗಿ ತಾಲೂಕಾ ಆರೊಗ್ಯ ಶಿಕ್ಷಣಾಧಿಕಾರಿ ಮಂಜುಳಾ ಸಜ್ಜನ್, ಎಂ.ಎಂ. ದೊಡ್ಡಮನಿ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X