ಗದಗ | ಉದ್ಯಾನಗಳಲ್ಲಿ ಉದಯರಾಗ, ಸಂಧ್ಯಾರಾಗ ಕಾರ್ಯಕ್ರಮ ಪುನರಾರಂಭ

Date:

ಗದಗ-ಬೆಟಗೇರಿ ಅವಳಿ ನಗರದಲ್ಲಿರುವ ಬಹುತೇಕ ಉದ್ಯಾನಗಳನ್ನು ಐತಿಹಾಸಿಕವಾಗಿ, ಸಾಂಸ್ಕೃತಿಕವಾಗಿ ಹಾಗೂ ಸಾಹಿತ್ಯಿಕವಾಗಿ ಅಭಿವೃದ್ಧಿಪಡಿಸಲಾಗಿದೆ. ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಕೆ ಪಾಟೀಲ್ ಅವರ ಅಪೇಕ್ಷೆಯ ಮೇರೆಗೆ ಈ ಉದ್ಯಾನಗಳಲ್ಲಿ‌ ಜೂನ್ 18 ರಿಂದ ಉದಯರಾಗ, ಸಂಧ್ಯಾರಾಗ ಕಾರ್ಯಕ್ರಮ ಪುನರಾರಂಭಿಸಲಾಗಿದೆ.

- Advertisement -

ಉದ್ಯಾನವನಗಳಲ್ಲಿ ಪ್ರತಿ ಭಾನುವಾರ ಮುಂಜಾನೆ ಉದಯರಾಗ ಹಾಗೂ ಸಾಯಂಕಾಲ ಸಂಧ್ಯಾರಾಗ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ಹಿಂದೆ ಕಾರಣಾಂತರಗಳಿಂದ ಸ್ಥಗಿತವಾದಂತಹ ಈ ಕಾರ್ಯಕ್ರಮಗಳನ್ನು ಮತ್ತೆ ಪ್ರಾರಂಭಗೊಳಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪ್ರತಿ ಭಾನುವಾರ ಮುಂಜಾನೆ 6.30 ರಿಂದ 7.30ರ ವರೆಗೆ ಉದಯರಾಗ ಹಾಗೂ ಸಾಯಂಕಾಲ 5.30 ರಿಂದ 6.30ರ ವರೆಗೆ ಸಂಧ್ಯಾರಾಗ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅವಳಿ ನಗರದ ಉದ್ಯಾನವನಗಳಲ್ಲಿ ನಿರಂತರವಾಗಿ ಆಯೋಜನೆ ಮಾಡಲಾಗುವುದು.

ಕಾನೂನು, ನ್ಯಾಯ ಹಾಗೂ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಕೆ ಪಾಟೀಲ್ ಅವರು ಐತಿಹಾಸಿಕ ಭೀಷ್ಮಕೆರೆ ಉದ್ಯಾನವನದಲ್ಲಿ ಭಾನುವಾರ ಸಾಯಂಕಾಲ 5.30ಕ್ಕೆ ಉದಯರಾಗ ಹಾಗೂ ಸಂಧ್ಯಾರಾಗ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಈ ವೇಳೆ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತಿ ವಹಿಸುವರು.

ಭಾನುವಾರ ಸಾಯಂಕಾಲ 5.30ಕ್ಕೆ ಐತಿಹಾಸಿಕ ಭೀಷ್ಮಕೆರೆ ಉದ್ಯಾನದಲ್ಲಿ ಪೊಲೀಸ್ ಬ್ಯಾಂಡ್‍ನೊಂದಿಗೆ ನಾಡಗೀತೆ ಮೂಲಕ ಕಾರ್ಯಕ್ರಮ ಆರಂಭಿಸಿ, ಭಾವಗೀತೆ ಭಕ್ತಿಗೀತೆಗಳೊಂದಿಗೆ ಕಾರ್ಯಕ್ರಮ ನಡೆಯಲಿದ್ದು, ಕೊನೆಯಲ್ಲಿ ರಾಷ್ಟ್ರಗೀತೆಯೊಂದಿಗೆ ಮುಕ್ತಾಯವಾಗಲಿದೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ವಿದ್ಯಾರ್ಥಿಗಳಿಂದ ಮನೆ ಕೆಲಸ ಮಾಡಿಸಿಕೊಳ್ಳುತ್ತಿದ್ದ ಶಿಕ್ಷಕ ಅಮಾನತು

ಈ ಕಾರ್ಯಕ್ರಮಕ್ಕೆ ನಗರದ ಗಣ್ಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಹಾಗೂ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರುಗಳು ಮನವಿ ಮಾಡಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕಂತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...