ಗದಗ | ವೈದ್ಯರ ಅನಧಿಕೃತ ಗೈರು: ಶಿರೋಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಓ ದಿಢೀರ್ ಭೇಟಿ

Date:

“ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ನರಗುಂದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಅವರು ಗದಗ ಜಿಲ್ಲೆಯ ನರಗುಂದ ತಾಲೂಕಿನ ಶಿರೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರೋಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಿವಾರವಾದ ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ಪರಿಶೀಲನೆ ವೇಳೆ ಕರ್ತವ್ಯದಲ್ಲಿರಬೇಕಿದ್ದ ಇಬ್ಬರು ವೈದ್ಯಾಧಿಕಾರಿಗಳು ಮೇಲಾಧಿಕಾರಿಗಳ ಅನುಮತಿ ಪಡೆಯದೆ ಅನಧಿಕೃತವಾಗಿ ಗೈರಾಗಿರುವುದು ಬೆಳಕಿಗೆ ಬಂತು. ಆಸ್ಪತ್ರೆಯ ಸಿಬ್ಬಂದಿ ಹಾಜರಾತಿ ಪುಸ್ತಕ ಪರಿಶೀಲಿಸಿದ ಇಓ ಅವರು, ತಾಲೂಕು ಆರೋಗ್ಯಾಧಿಕಾರಿ (ಟಿಎಚ್‌ಒ) ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾಹಿತಿ ಪಡೆದಾಗ ವೈದ್ಯರು ಯಾವುದೇ ಅನುಮತಿ ಪಡೆಯದೆ ಗೈರಾಗಿರುವುದು ದೃಢಪಟ್ಟಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ವೈದ್ಯರ ಅನುಪಸ್ಥಿತಿಯಿಂದ ಆಸ್ಪತ್ರೆಗೆ ಆಗಮಿಸಿದ್ದ ರೋಗಿಗಳಿಗೆ ಸ್ಟಾಫ್ ನರ್ಸ್‌ಗಳೇ ಚಿಕಿತ್ಸೆ ನೀಡುತ್ತಿರುವುದು ಕಂಡುಬಂದಿತು. ಈ ಹಿನ್ನೆಲೆಯಲ್ಲಿ ಗೈರು ಹಾಜರಾದ ವೈದ್ಯರಿಗೆ ನೋಟಿಸ್ ಜಾರಿಗೊಳಿಸಿ ವರದಿ ಸಲ್ಲಿಸುವಂತೆ ಟಿಎಚ್‌ಒ ಅವರಿಗೆ ಇಓ ಸೂಚನೆ ನೀಡಿದರು. ಜೊತೆಗೆ ತಾಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ದೊರೆಯುವಂತೆ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು.

“ಬಳಿಕ ಆಸ್ಪತ್ರೆಯ ಹೊರರೋಗಿಗಳ ವಿಭಾಗ, ಔಷಧ ದಾಸ್ತಾನು ಕೊಠಡಿ, ಪ್ರಥಮ ಚಿಕಿತ್ಸಾ ಕೊಠಡಿ, ಒಳರೋಗಿಗಳ ವಾರ್ಡ್ ಹಾಗೂ ಶೌಚಾಲಯ ಸೇರಿದಂತೆ ವಿವಿಧ ವಿಭಾಗಗಳನ್ನು ಪರಿಶೀಲಿಸಿದರು. ಆಸ್ಪತ್ರೆ ಸಿಬ್ಬಂದಿಯೊಂದಿಗೆ ಸಮಾಲೋಚನೆ ನಡೆಸಿದ ಅವರು, ಆಸ್ಪತ್ರೆಗೆ ಬರುವ ಪ್ರತಿಯೊಬ್ಬ ರೋಗಿಗೆ ಕಾಳಜಿಯಿಂದ ಹಾಗೂ ಜವಾಬ್ದಾರಿಯಿಂದ ಚಿಕಿತ್ಸೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ವೈದ್ಯರಿಲ್ಲದೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವ ಬಗ್ಗೆ ಸ್ಥಳೀಯರು ದೂರವಾಣಿ ಮೂಲಕ ದೂರು ನೀಡಿದ್ದ ಹಿನ್ನೆಲೆಯಲ್ಲಿ ಈ ದಿಢೀರ್ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಶಿರೋಳ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...