ಗದಗ | ವಿಬಿ ಜಿರಾಮ್‌ಜಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಫೆ. 12ರಂದು ಮುಷ್ಕರ

Date:

ವಿಬಿ.ಜಿರಾಮ್‌ಜಿ ಕಾಯ್ದೆಯನ್ನು ಹಿಂಪಡೆದು ಮನರೇಗಾ ಕಾಯ್ದೆ ಯೋಜನೆ ಮುಂದುವರೆಸಿ ರೈತ, ಕೂಲಿ ಕಾರ್ಮಿಕರ, ಮಹಿಳೆಯರ ಪರ ಕಾನೂನುಗಳ ಜಾರಿಗಾಗಿ ಒತ್ತಾಯಿಸಿ ರೋಣ ತಾಲೂಕ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU) ಸಮಿತಿ ವತಿಯಿಂದ ಫೆಬ್ರವರಿ 12ರಂದು ಮುಷ್ಕರ ಹಮ್ಮಿಕೊಂಡಿದ್ದಾರೆ.

- Advertisement -

ಈ ಕುರಿತು ತಾಲೂಕಿನ ಬೆಳವಣಿಕಿ ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜ ಮಂತೂರ ಮಾತನಾಡಿ, ಗ್ರಾಮೀಣ ದುಡಿಯುವ ಜನರ ಮರಣ ಶಾಸನವಾದ ವಿಜಿ. ಜಿರಾಮ್‌ಜಿ ಯೋಜನೆ ರದ್ದು ಪಡಸಿ ಮೂಲ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಿನದ ಕೂಲಿ ರೂ.600ಕ್ಕೆ ಹೆಚ್ಚಿಸಿ ಮತ್ತು ದುಡಿತದ ದಿನಗಳನ್ನು 200ಕ್ಕೆ ಹೆಚ್ಚಿಸಬೇಕು. ರಾಜ್ಯದಲ್ಲಿ ದುಡಿತದ ಅವಧಿಯನ್ನು ದಿನಕ್ಕೆ 12 ಗಂಟೆಗೆ ಹೆಚ್ಚಿಸಿರುವ ಆದೇಶ ಕೂಡಲೇ ಹಿಂಪಡೆಯಬೇಕು. ಜೀವನ ಯೋಗ್ಯ ಸ್ತ್ರೀಂ ನೌಕರರು ಹಾಗೂ ಇತರರಿಗೆ ಕನಿಷ್ಠ ವೇತನ ರೂ 36,000 ನಿಗದಿ ಮಾಡಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಸಾರ್ವತ್ರಿಕ ಪಿಂಚಣಿ ಜಾರಿಗೊಳಿಸಿ ಕನಿಷ್ಠ ರೂ. 8000 ಪಿಂಚಣಿ ನೀಡಬೇಕು. ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಮತ್ತು ನಗದೀಕರಣ ನಿಲ್ಲಿಸಬೇಕು. ಅಂಗನವಾಡಿ, ಬಿಸಿಯೂಟ, ಗ್ರಾಮ ಪಂಚಾಯತಿ, ಆಶಾ ಮುಂತಾದ ಸ್ತ್ರೀಂ ಕಾರ್ಮಿಕರನ್ನು ಕನಿಷ್ಠ ವೇತನ ವ್ಯಾಪ್ತಿಗೆ ಒಳಪಡಿಸಬೇಕು. ಅಸಂಘಟಿತ ವಲಯದ ಕಾರ್ಮಿಕರಿಗೆ ಸಮಗ್ರ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಜಾರಿಗೊಳಿಸಬೇಕು,ಗುತ್ತಿಗೆ ಪದ್ಧತಿ ರದ್ದು ಪಡಿಸಿ ಖಾಯಂಯೇತ್ತರರ ಖಾಯಂಗೆ ಶಾಸನ ರೂಪಿಸಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿಗೊಳಿಸಬೇಕು ಮತ್ತು ಜಿಎಸ್ಟಿ ವ್ಯಾಪ್ತಿಯಿಂದ ಹೊರಗಿಡಬೇಕು. ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ರಾಜ್ಯದಲ್ಲಿ ರೈತ ವಿರೋಧಿ, ಕಾರ್ಮಿಕ ವಿರೋಧಿ ತಿದ್ದುಪಡಿ ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯಬೇಕು ಎಂದು ಒತ್ತಾಯಿಸಿದರು.

ಬಾಲು ರಾಠೋಡ ಮಾತನಾಡಿ, ಕೇಂದ್ರ ಮೋದಿ ಸರ್ಕಾರ ವಿದ್ಯುತ್ ಶಕ್ತಿ ಮಸೂದೆ 2020 ಖಾಸಗೀಕರಣ  ಹಿಂಪಡೆಯಬೇಕು ಹಾಗೂ ಶಿಕ್ಷಣ ಇಲಾಖೆಯ NEP ಶಿಕ್ಷಣ ನೀತಿ ವಾಪಸ್ಸ ಆಗಬೇಕು ಹಾಗೂ ರಾಜ್ಯದಲ್ಲಿ KPS (ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲೆಗಳ ಪರಿಕಲ್ಪನೆಯಿಂದ ಶಾಲೆಗಳು ವಿಲೀನ ಮಾಡುವಲ್ಲಿ ಕೈ ಬಿಡಬೇಕು. ಶಿಕ್ಷಣಕ್ಕೆ ಆಗತ್ಯದಷ್ಟು ಬಜೆಟ್ಅನ್ನು ರಾಜ್ಯ, ಕೇಂದ್ರ ಸರಕಾರಗಳು ನೀಡಬೇಕು. ರಾಜ್ಯ ಸರ್ಕಾರ ದೇವದಾಸಿ ಮಹಿಳೆಯರಿಗೆ ಭೂಮಿ ಮನೆ ನಿದೇಶನ ಹಂಚಿಕೆ ಮಾಡಬೇಕು. ಅವರ ಪಿಂಚಣಿಯನ್ನು 5000 ಕ್ಕೆ ಹೆಚ್ಚಿಸಬೇಕು. ದೇವದಾಸಿ ಮಹಿಳೆಯರ ಪುನರ್ ಗಣತಿಮಾಡಿ ಸಂಪೂರ್ಣ ಪರ್ಯಯಾ ವ್ಯವಸ್ಥೆ ಮಾಡಬೇಕು ಎಂದರು.

2026ರ ಫೆಬ್ರುವರಿ 12ರಂದು ಉತ್ಪಾದನೆ ಸೇವೆ ಸ್ಥಗಿತಗೊಳಿಸಿ ರೈತರು, ಕಾರ್ಮಿಕರು, ಕೃಷಿ ಕೂಲಿಕಾರರು, ಮಹಿಳಾ ವಿದ್ಯಾರ್ಥಿ- ಯುವಜನರು, ದಲಿತ ಸಂಘಟನೆಗಳು ಜೊತೆಯಾಗಿ ಅಖಿಲ ಭಾರತ ಮುಷ್ಕರವನ್ನು ಯಶಸ್ವಿಗೊಳಿಸಲು ಕರೆ ನೀಡಿದರು. ಅದರ ಭಾಗವಾಗಿ ಅಂಗನವಾಡಿ , ಬಿಸಿಯೂಟ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಮುಷ್ಕರದ ಕರಪತ್ರವನ್ನು ಹಂಚಿ ಹೋರಾಟದ ಪ್ರಚಾರವನ್ನು ಮಾಡಿದರು.

ಇದನ್ನೂ ಓದಿ ಗದಗ | ಭೀಕರ ಅಪಘಾತ; ಮೂವರ ಸಾವು, 14 ಮಂದಿ ಗಾಯ

ಈ ಸಂದರ್ಭದಲ್ಲಿ ಸಿಐಟಿಯು ಗುರಪ್ಪ ಕಣ್ಣೂರ್, ಹನುಮಂ ತಾಳಿ, ಕೃಷ್ಣಪ್ಪ ಮಾಡೊಳಿ, ನಿಂಗಪ್ಪ ಅರುಣಸಿ, ಪ್ರಭು ಪೂಜಾರ, ಈಶ್ವರ್ ಜಕ್ಕಲ್ಲಿ, ಸುರೇಶ್ ಮಹಾರಾಜನವರ, ಸುರೇಶ್ ಚಲವಾದಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...

ಕೋಲಾರ | ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಎನ್. ಸಂಪಂಗಿ

ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು...

ಉತ್ತರ ಕರ್ನಾಟಕದ ರೈಲ್ವೇ ಅಭಿವೃದ್ಧಿಗೆ ವೇಗ ನೀಡಿ: ಉಮಾಶ್ರೀಗೆ ಕುತುಬುದ್ದೀನ್ ಕಾಜಿ ಮನವಿ

ಉತ್ತರ ಕರ್ನಾಟಕದ ರೈಲ್ವೇ ಅಭಿವೃದ್ಧಿಗೆ ವೇಗ ನೀಡುವುದು, ಬಾಕಿ ಉಳಿದಿರುವ ಕಾಮಗಾರಿಗಳನ್ನು...