ಕಿತ್ತೂರು ಚನ್ನಮ್ಮ ಅವರು ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಅವಿರತವಾಗಿ ಹೋರಾಟ ನಡೆಸಿದರು. ಅದಕ್ಕಾಗಿಯೇ ಅವರನ್ನು ವೀರರಾಣಿ ಸ್ವಾತಂತ್ರ್ಯದ ಬೆಳ್ಳಿ ಚುಕ್ಕಿ ಕಿತ್ತೂರು ಚನ್ನಮ್ಮ ಎಂದು ಕರೆಯುತ್ತಾರೆ. ಅವರ ಹೋರಾಟ ತ್ಯಾಗ ಬಲಿದಾನವನ್ನು ಯಾರೂ ಮರೆಯಬಾರದು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಕೆ ಪಾಟಿಲ್ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.
“ಪ್ರತಿ ವರ್ಷದಂತೆ ಈ ವರ್ಷವೂ ಸರ್ಕಾರದಿಂದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಿಸಲಾಗುತ್ತದೆ. ಈ ವರ್ಷ ಭೀಕರ ಬರಗಾಲದ ಹಿನ್ನೆಲೆಯಲ್ಲಿ ರೈತ ಸಮುದಾಯ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದೆ. ಕಿತ್ತೂರು ಚನ್ನಮ್ಮ ಜಯಂತಿಗೆ ನೀಡುವ ಅನುದಾನವನ್ನು ರೈತರಿಗೆ ಸಹಾಯವಾಗಲೆಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವ ಬಗ್ಗೆ ಕಿತ್ತೂರಾಣಿ ಚನ್ನಮ್ಮ ಅಭಿಮಾನಿಗಳು ಹಾಗೂ ಸಮುದಾಯಗಳು ನಿರ್ಣಯ ಕೈಗೊಂಡಿರುವುದು ಉತ್ತಮ ನಿರ್ಧಾರ” ಎಂದು ಶ್ಲಾಘಿಸಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಆನೆ ಲದ್ದಿ ತುಳಿದು ಮೌಢ್ಯ ಮೆರೆದ ಮೈಸೂರಿಗರು
ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಎಸ್ ವಿ ಸಂಕನೂರ್, ಮಾಜಿ ಶಾಸಕ ಟಿ ಡಿ ಆರ್ ಪಾಟೀಲ್, ನಗರಸಭೆ ಅಧ್ಯಕ್ಷ ಉಷಾ ಮಹೇಶ್ ದಾಸರ್, ಜಿಲ್ಲಾಧಿಕಾರಿ ವೈಶಾಲಿ ಎಂಎಲ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಉಪ ವಿಭಾಗಾಧಿಕಾರಿ ವೆಂಕಟೇಶ್ ನಾಯಕ್, ಗಣ್ಯರುಗಳಾದ ಸಿದ್ದು ಪಲ್ಲೇದ, ಎಮ್ ಎಸ್ ಕರಿಗೌಡ ಸೇರಿದಂತೆ ಸಮುದಾಯದ ಹಿರಿಯರು ಹಾಜರಿದ್ದರು.