ಗದಗ | ನೀರಿಗಾಗಿ ಆಗ್ರಹಿಸಿ ಖಾಲಿ ಕೊಡ ಪ್ರತಿಭಟನೆ; ಗ್ರಾಮ ಪಂಚಾಯ್ತಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Date:

ಗದಗ ಜಿಲ್ಲೆಯ ರೋಣ ತಾಲೂಕಿನ ಸಮೀಪದ ಜಕ್ಕಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 5ನೇ ವಾರ್ಡಿನ ಜನತಾ ಪ್ಲಾಟ್ ನಿವಾಸಿಗಳು ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಖಾಲಿ ಕೊಡ ಹಿಡಿದು ಗ್ರಾಮ ಪಂಚಾಯ್ತಿಗೆ ಮಂಗಳವಾರ (ಏ.16) ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನಾ ನಿರತ ಮಹಿಳೆಯರು ಸ್ಥಳೀಯ ಪಿಡಿಒ ಎಸ್.ಎಸ್ ರಿತ್ತಿ ಹಾಗೂ ಸಿಬ್ಬಂದಿ ಮತ್ತು ಚುನಾಯಿತ ಸದಸ್ಯರ ವಿರುದ್ಧ ಧಿಕ್ಕಾರ ಕೂಗಿದರು. ಪಂಚಾಯತಿಯವರುವ ಪೈಪ್ ಲೈನ್‌ ತಗ್ಗು ಅಗೆದು ಪೈಪ್‌ ಒಡೆದಿದ್ದಾರೆ, ಎರಡು ತಿಂಗಳು ಕಳೆದರೂ ದುರಸ್ತಿ ಮಾಡಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸ್ಥಳೀಯ ನಿವಾಸಿ ಕುಬೇರಪ್ಪ ಕೊಡಗಾನೂರ ಮಾತನಾಡಿ, 5ನೇ ವಾರ್ಡಿನಲ್ಲಿ ಆರು ತಿಂಗಳಿಂದ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದೇವೆ. ಅನೇಕ ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ. ಆರೋಗ್ಯಕ್ಕೂ ಸಮಸ್ಯೆ ಆಗುತ್ತಿದೆ. ತಕ್ಷಣವೇ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

5ನೇ ವಾರ್ಡಿನಲ್ಲಿ ದುರ್ವಾಸನೆಯಿಂದ ಕೂಡಿರುವ ಚರಂಡಿ, ಅದರಲ್ಲಿನ ಹೂಳು ಹಾಗೂ ಸೊಳ್ಳೆಗಳ ಕಾಟ ಮಿತಿಮೀರಿದೆ ಎಂದು ಫಾತಿಮಾ ಬಾಲೇಸಾಬನವರ ಹೇಳಿದರು.

5ನೇ ವಾರ್ಡ್‌ನಲ್ಲಿ ಪರಿಶೀಲನೆ ನಡೆಸಿದ ಪಿಡಿಒ, ಒಂದೇ ದಿನದಲ್ಲಿ ದುರಸ್ತಿಗೊಳಿಸಿ ಪೈಪ್‌ ಲೈನ್‌ ಸರಿಪಡಿಸಿ ನೀರು ಪೂರೈಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಬಸವ್ವ ಕೊಡಗಾನೂರ, ಸಜನಾ ಜಕ್ಕಲಿ, ಯಲ್ಲಮ್ಮ ಡಂಬಳ, ಮಮ್ಮಸಾಬ ಬಾಲೇಸಾಬನವರ, ಮಾಬಮ್ಮ ಕಳಕಾಪೂರ, ಮಮತಮ್ಮ ಬಾಲೇಸಾಬನವರ, ಖಾಶಿಂಬಿ ಜಾಲಿಹಾಳ, ದಾವಲಮ್ಮ ಗಡಾದ, ಮಮ್ಮಸಲೀಂ ಜಕ್ಕಲಿ, ಉಮೇಶ ಕೊಡಗಾನೂರ, ಇಸ್ಮಾಯಿಲ್ ಗಡಾದ, ಹನುಮಂತ ಕೊಡಗಾನೂರ, ಮೌಲುಸಾಬ ನದಾಫ್, ಆನಂದ ಬಾರಕೇರ, ಯಲ್ಲಪ್ಪ ಮುಕ್ಕಣ್ಣವರ, ಯಮನೂರ ಮಾದರ, ಯಲ್ಲಪ್ಪ ಬಾರಕೇರ ಪ್ರತಿಭಟನೆಯಲ್ಲಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...