ಗದಗ | ಉತ್ತಮ ಭಾರತದ ಭವಿಷ್ಯಕ್ಕಾಗಿ ಮತ ಚಲಾಯಿಸಿ: ಕುಮಾರ ಪೂಜಾರ

Date:

ಉತ್ತಮ ಭಾರತದ ಭವಿಷ್ಯಕ್ಕಾಗಿ ಮತ ಚಲಾಯಿಸುವ ಮೂಲಕ ನಾವು ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತು ನಮ್ಮ ಹಿಂದಿನ ತಲೆಮಾರುಗಳ ಹಿರಿಯರನ್ನು ಗೌರವಿಸಬಹುದು ಎಂದು ಸಹಾಯಕ ನಿರ್ದೇಶಕ (ಗ್ರಾ.ಉ) ಕುಮಾರ ಪೂಜಾರ ಹೇಳಿದರು.

ಗದಗ ಜಿಲ್ಲೆಯ ಗದಗ ತಾಲೂಕಿನ ಲಕ್ಕುಂಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ಆರಂಭಗೊಂಡ ಸಮುದಾಯ ಕಂದಕ ಬದು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಸಹಾಯಕ ನಿರ್ದೇಶಕ (ಗ್ರಾ.ಉ) ಕುಮಾರ ಪೂಜಾರ ಭೇಟಿ ನೀಡಿ,  ಹಾಜರಿದ್ದ ಕೂಲಿಕಾರರಿಗೆ ನರೇಗಾ ಯೋಜನೆಯ ಮಹತ್ವ, ಉದ್ದೇಶ, ಎನ್‌ಎಂಎಂಎಸ್‌ ಹಾಜರಾತಿ, ಅಳತೆ ಪ್ರಮಾಣ, ಜಾಬ್ ಕಾರ್ಡ ಅಪ್ಡೇಟ, ಮಹಿಳಾ ಭಾಗವಹಿಸುವಿಕೆ, ವಿಶೇಷ ವರ್ಗದವರ ಭಾಗವಹಿಸುವಿಕೆ ಕುರಿತಂತೆ ಮಾಹಿತಿ ಪಡೆದು, ನಂತರ ಹಾಜರಿದ್ದ ಕೂಲಿಕಾರರೊಂದಿಗೆ ಅವರು ಮಾತನಾಡಿದರು

ಮತದಾನ ಮಾಡುವುದು ನಮ್ಮ ನಾಗರಿಕ ಜವಾಬ್ದಾರಿ. ಇದು ನಮ್ಮ ರಾಷ್ಟ್ರದ ಮೂಲಭೂತ ಹಕ್ಕುಗಳಲ್ಲಿ ಒಂದಾಗಿದೆ. ಭಾರತೀಯರು ನಮ್ಮ ಸ್ವಾತಂತ್ರ್ಯವನ್ನು ಗೆಲ್ಲಲು ಹೋರಾಡಿದರು ಮತ್ತು ಅದರ  ಕಾರಣದಿಂದಾಗಿ ನಾವು ಮತದಾನದ ಹಕ್ಕನ್ನು ಹೊಂದಿದ್ದೇವೆ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚುನಾವಣೆಯಲ್ಲಿ ಮತ ಹಾಕುವ ಸ್ವಾತಂತ್ರ್ಯ ನಿಮಗಿದೆ. ಮತ ಹಾಕಲು ಯಾರೂ ಯಾವುದೇ  ಆಮಿಷಕ್ಕೆ ಒಳಗಾಗಬೇಡಿ ಉತ್ತಮ ನಾಳೆಗಳು ನಮಗೆ ಬೇಕಾದರೆ ಮತದಾನ ಮಾಡುವ ಮೂಲಕ ಆ ಒಳ್ಳೆಯ ನಾಳೆಗಳನ್ನು ಪಡೆಯೋಣ. ಎಲ್ಲಾ ಅರ್ಹ ನಾಗರಿಕರು ಮತದಾನದ ಹಕ್ಕು ಚಲಾಯಿಸಬೇಕು. ಮತದಾರ ದೇಶದ ಉತ್ತಮ ಭವಿಷ್ಯಕ್ಕೆ ಬುನಾದಿ. ಮತದಾನ ಮಾಡುವ ಮೂಲಕ ಆ ಬುನಾದಿಯನ್ನು ಸದೃಢಗೊಳಿಸಿ ಎಂದರು.

ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಜಕುಮಾರ ಭಜಂತ್ರಿ, ತಾಲೂಕ ಐಇಸಿ ಸಂಯೋಜಕ, ತಾಂತ್ರಿಕ ಸಹಾಯಕ, ಡಿಇಒ, ಬಿ.ಎಫ್.ಟಿ, ಗ್ರಾ.ಕಾ.ಮೀ ಹಾಗೂ ನರೇಗಾ ಕೂಲಿಕಾರರು ಹಾಜರಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...

ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ...

ರಾಯಚೂರು | ಎಸ್‌ಯುಸಿಐ ಅಭ್ಯರ್ಥಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಕೆ

ರಾಯಚೂರು-ಯಾದಗಿರಿ ಒಳಗೊಂಡ ರಾಯಚೂರು ಲೋಕಸಭಾ (ಪ.ಪಂ) ಕ್ಷೇತ್ರದ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ...

ಗದಗ | ತಾಲೂಕು ಆಡಳಿತದಿಂದ ‘ಮೇವು ಬ್ಯಾಂಕ್’ ಆರಂಭ; ಕೆ.ಜಿಗೆ 2 ರೂ. ದರ ನಿಗದಿ

ಕೊಣ್ಣೂರು : ಜಾನುವಾರುಗಳಿಗೆ ಮೇವು ಕೊರತೆ ನೀಗಿಸಲು ತಾಲೂಕು ಆಡಳಿತದಿಂದ ಮೇವು...