ಗದಗ | ಮತದಾನ ನಮ್ಮ ಹಕ್ಕು; ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು: ಶ್ರೀಶೈಲ ತಳವಾರ

Date:

ಮೇ 8ರ ಮತದಾನದ ದಿನದಂದು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಗದಗ ಜಿಲ್ಲಾ ನರಗುಂದ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣೆ ಅಧಿಕಾರಿಗಳು ಹಾಗೂ ನರಗುಂದ ತಹಸೀಲ್ದಾರ ಶ್ರೀಶೈಲ್ ತಳವಾರ ಹೇಳಿದರು.

ನರಗುಂದ ನಗರದಲ್ಲಿ ಗದಗ ಜಿಲ್ಲಾ ಮತ್ತು ನರಗುಂದ ತಾಲೂಕು ಚುನಾವಣೆ ಸ್ವೀಪ್ ಸಮಿತಿ, ವಿವಿದ್ಧೋದೇಶ ಪುನರ್ ವಸತಿ ಮತ್ತು ಗ್ರಾಮೀಣ ಪುನರ್ ವಸತಿ ಹಾಗೂ ತಾಲೂಕು ಪಂಚಾಯತ ನರಗುಂದ ವತಿಯಿಂದ ಹಮ್ಮಿಕೊಂಡಿದ್ದ ಸಾರ್ವಜನಿಕರಿಗೆ ಮತದಾನ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಲೋಕಸಭೆ ಚುನಾವಣೆಯಲ್ಲಿ ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾನ ನಮ್ಮ ಹಕ್ಕು ನಮ್ಮ ಇಷ್ಟದ ಅಭ್ಯರ್ಥಿಗೆ ಮತ ಚಲಾಯಿಸುವ ಕೆಲಸ ನಮ್ಮದಾಗಬೇಕು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶೇ.100ರಷ್ಟು ಮತದಾನ ಮಾಡಿದ್ರೆ ಮಾತ್ರ ಪ್ರಜಾಪ್ರಭುತ್ವದ ಪ್ರಾಮುಖ್ಯತೆಗೆ ಅರ್ಥ ಬರುತ್ತದೆ. ಹೆದರಿಕೆ ಬೆದರಿಕೆ ಅಂಜದೇ ಧೈರ್ಯವಾಗಿ ಮತವನ್ನು ಚಲಾಯಿಸಿ ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಚಲಾಯಿಸಿ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಲೂಕು ಪಂಚಾಯತ ನರಗುಂದದ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದರ ಅವರು,  ಸಾರ್ವಜನಿಕರು ಮತದಾನದಿಂದ ತಪ್ಪಿಸಿಕೊಳ್ಳದೇ ತಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಕಡ್ಡಾಯವಾಗಿ ಮತ ಚಲಾಯಿಸಿಬೇಕೆಂದು ತಿಳಿಸಿದರು.

ಕಡ್ಡಾಯ ಮತದಾನ ಜಾಗೃತಿ ಜಾಥಾದಲ್ಲಿ ಭಾಗವಹಿಸಿದ ಆಶಾಕಾರ್ಯಕರ್ತೆಯರು ಹಾಗೂ ಅಧಿಕಾರಿ ಸಿಬ್ಬಂದಿ ವರ್ಗದವರಿಗೆ ತಾಲೂಕು ಪಂಚಾಯತ ಮಾಹಿತಿ ಮತ್ತು ಶಿಕ್ಷಣ ಸಂಯೋಜಕರಾದ ಸುರೇಶ ಬಾಳಿಕಾಯಿ ಅವರು ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ನಗರದ ಪುರಸಭೆ ಮುಖ್ಯ ಕಚೇರಿಯಿಂದ ಮತದಾನ ಜಾಗೃತಿ ಜಾಥಾ ಆರಂಭವಾಗಿ ನಗರದ ಟಿ.ಎಂ.ಸಿ ರೋಡ, ಸರ್ವಜ್ಞ ಸರ್ಕಲ್, ಹುಬ್ಬಳ್ಳಿ-ಬಿಜಾಪುರ ಹೆದ್ದಾರಿ ಮೂಲಕ ಸಂಚರಿಸಿ ನಗರದ ಶಿವಾಜಿ ಸರ್ಕಲ್ ನಲ್ಲಿ ಮತದಾನ ಕುರಿತಾದ ವಿಶೇಷ ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರಲ್ಲಿ ಕಡ್ಡಾಯ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು.

ಕಡ್ಡಾಯ ಮತದಾನ ಜಾಗೃತಿ ಜಾಥಾದಲ್ಲಿ ಡಾ.ಹಂಪಣ್ಣ ಸಜ್ಜನ ಚುನಾವಣಾಧಿಕಾರಿಗಳು ನರಗುಂದ ವಿಧಾನಸಭಾ ಕ್ಷೇತ್ರ, ತಾಲೂಕು ಪಂಚಾಯತ ಸಿಬ್ಬಂದಿ ವರ್ಗ, ವಿವಿದ್ಧೋದೇಶ ಪುನರ್ ವಸತಿ (ಒಖW) ಮತ್ತು ಗ್ರಾಮೀಣ ಪುನರ್ ವಸತಿ (ಗಿಖW) ಕಾರ್ಯಕರ್ತರು ಹಾಜರಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...