ಗದಗ ಜಿಲ್ಲೆಯಲ್ಲಿರುವ ಆಸ್ತಿಗಳ ಉತಾರದಲ್ಲಿ 2019ರ ನಂತರ ಯಾವುದೇ ಆಸ್ತಿಗಳಲ್ಲಿ ವಕ್ಫ್ ಎಂದು ನಮೂದಾಗಿರುವುದಿಲ್ಲ. ಮಾಧ್ಯಮಗಳಲ್ಲಿ ಬಿತ್ತರಿಸಲಾಗಿರುವ ವರದಿ ಸುಳ್ಳು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಜಿಲ್ಲೆಯ ಕೋಟುಮುಚಗಿ ಗ್ರಾಮದ ಸೋಮೇಶ್ವರ ದೇವಸ್ಥಾನದ ಆಸ್ತಿಯ ಆರ್.ಟಿ.ಸಿಯಲ್ಲಿ ವಕ್ಫ್ ಎಂದು ನಮೂದಾಗಿರುವುದಾಗಿ ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಸ್ಪಷ್ಟನೆ ನೀಡಿದ್ದಾರೆ.

ಗದಗ ಜಿಲ್ಲೆಯಲ್ಲಿನ ಆರ್.ಟಿ.ಸಿಗಳಲ್ಲಿ ವಕ್ಫ್ ಎಂದು ನಮೂದು ಕುರಿತಂತೆ ಸ್ಪಷ್ಟನೆ ನೀಡಿರುವ ಅವರು, 1974ರ ಸರ್ಕಾರದ ಗೆಜೆಟ್ ಪ್ರಕಾರ ಜಿಲ್ಲೆಯ ಕೆಲವು ಆರ್.ಟಿ.ಸಿ. ಗಳಲ್ಲಿ 2019ರಲ್ಲಿ ವಕ್ಫ್ ಎಂದು ನೋಂದಣಿಯಾಗಿವೆ. ವಕ್ಫ್ ಎಂದು ನೊಂದಣಿಯಾದ ಹಲವು ಆಸ್ತಿಗಳ ಮಾಲೀಕರು ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯದ ಆದೇಶ ಮೇರೆಗೆ ಆರ್.ಟಿ.ಸಿ ಯಲ್ಲಿ ನಮೂದಾಗಿದ್ದ, ವಕ್ಫ್ ಎಂಬ ಪದವನ್ನು ಸರಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನು ಓದಿದ್ದೀರಾ? ಆಳಂದ | ಈ ದಿನ ಫಲಶೃತಿ: ಸರ್ಕಾರಿ ಶಾಲೆಯ ಕೊಠಡಿ ನಿರ್ಮಾಣಕ್ಕೆ ₹1.80 ಕೋಟಿ ಅನುದಾನ ಬಿಡುಗಡೆ
ಕೋಟುಮುಚಗಿ ಗ್ರಾಮದ ಸೋಮೇಶ್ವರ ದೇವಸ್ಥಾನ ಆಸ್ತಿಯ ಆರ್.ಟಿ.ಸಿ ಯಲ್ಲಿ ವಕ್ಫ್ ಎಂದು ನಮೂದಾಗಿರುವುದಿಲ್ಲ. ಈ ಕುರಿತು ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸ್ಪಷ್ಟಪಡಿಸಿದ್ದಾರೆ.
