ಗದಗ | ಬಿಪಿಎಲ್‌ಗೆ ಬದಲಾಯಿಸುವ ಕಾರ್ಯಕ್ಕೆ ಮುಂದಾಗಬೇಕು: ಅಶೋಕ ಮಂದಾಲಿ

Date:

“ಬಿಪಿಎಲ್ ದಿಂದ ಎಪಿಎಲ್ ಆಗಿರುವ ಪಡಿತರ ಚೀಟಿಗಳನ್ನು ಬಿಪಿಎಲ್‌ಗೆ ಬದಲಾಯಿಸುವ ಕಾರ್ಯಕ್ಕೆ ಮುಂದಾಗಬೇಕು. ಅರ್ಹ ಫಲಾನುಭವಿಗಳು ಅನ್ನಭಾಗ್ಯ ಯೋಜನೆಯ ಸೌಲಭ್ಯ ಪಡೆದುಕೊಳ್ಳುವಂತಾಗಬೇಕು” ಎಂದು ಗದಗ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಅವರು ತಿಳಿಸಿದರು.

- Advertisement -

ಗದಗ ನಗರದ ಉಪವಿಭಾಗಾಧಿಕಾರಿಗಳ ಕಾರ್ಯಾಲಯದ ಪಂಚ ಗ್ಯಾರಂಟಿ ಕಚೇರಿಯಲ್ಲಿ ಶನಿವಾರ ಗದಗ ತಾಲೂಕ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಪಡಿತರ ಚೀಟಿ (ರೇಷನ್ ಕಾರ್ಡ) ವಿಶೇಷ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

“ಅನ್ನ ಭಾಗ್ಯ ಯೋಜನೆಯು ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿದ್ದು, ಸಮಾಜದ ಕಟ್ಟಕಡೆಯ ಕುಟುಂಬದ ಹಸಿವು ನೀಗಿಸಲು ಅನ್ನಭಾಗ್ಯ ಯೋಜನೆ ಸಹಕಾರಿಯಾಗಿದೆ. ಈ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ನಿಗದಿತ ಸಮಯದಲ್ಲಿಯೇ ತಲುಪುವಂತಾಗಲು ಸಂಬಂಧಿತ ಅಧಿಕಾರಿಗಳು ಇಚ್ಛಾಶಕ್ತಿಯಿಂದ ಕೆಲಸ ನಿರ್ವಹಿಸಬೇಕು” ಎಂದರು.

“ಗದಗ ತಾಲೂಕು ಪಂಚ ಗ್ಯಾರಂಟಿ ಸಮಿತಿ ನಿರ್ದೇಶನದ ಮೇರೆಗೆ ಬಿಪಿಎಲ್ ಪಡಿತರ ಚೀಟಿಯಿಂದ ವಂಚಿತರಾದವರನ್ನು ಗುರುತಿಸಿ ಪಟ್ಟಿ ಮಾಡಬೇಕು. ಎಎವೈ ( ಅಂತ್ಯೋದಯ ಅನ್ನ ಯೋಜನಾ)/ ಬಿಪಿಎಲ್ ದಿಂದ ಎಪಿಎಲ್‌ಗೆ ಬದಲಾವಣೆಯಾಗಿರುವ ಪಡಿತರ ಚೀಟಿಗಳನ್ನು ಎಎವೈ/ ಬಿಪಿಎಲ್‌ಗೆ ಬದಲಾಯಿಸಬೇಕಾದರೆ ಹೊಸದಾಗಿ ಅರ್ಜಿ ಸಲ್ಲಿಸಬೇಕು” ಎಂದರು.

“ಸಲ್ಲಿಸಬೇಕಾದ ದಾಖಲೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಗ್ರಾಮೀಣ ಭಾಗದಲ್ಲಿ ಪಡಿತರ ಚೀಟಿಗಳ ಮಾಹಿತಿಗಾಗಿ ತಹಶೀಲ್ದಾರ ಕಚೇರಿಯಲ್ಲಿ  ಆಹಾರ ವಿಭಾಗವಿದೆ. ಗದಗ ಬೆಟಗೇರಿ ಶಹರದಲ್ಲಿ ಬರುವ ಪಡಿತರ ಚೀಟಿಗಳ ಮಾಹಿತಿಗಾಗಿ ಗದಗ ಬೆಟಗೇರಿ ನಗರದ ನಗರಾಭಿವೃದ್ಧಿ ಕಾರ್ಯಾಲಯದ ಹತ್ತಿರವಿರುವ ಸಹಾಯಕ ನಿರ್ದೇಶಕ ಕಾರ್ಯಾಲಯ ಸಂಪರ್ಕಿಸಬಹುದಾಗಿದೆ. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯ ಎಲ್ಲ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಆದಷ್ಟು ಶೀಘ್ರ ಬಿಪಿಎಲ್ ಪಡಿತರದಾರರಿಗೆ ಎದುರಾಗುವ ಸಮಸ್ಯೆಗಳನ್ನು ಇತ್ಯರ್ಥಗೊಳಿಸಬೇಕು” ಎಂದು ಅಶೋಕ ಮಂದಾಲಿ ತಿಳಿಸಿದರು.

ಆಹಾರ ಇಲಾಖೆಯ ಅಧಿಕಾರಿಗಳು ಮಾತನಾಡಿ, “ಎನ್.ಎಫ್.ಎಸ್.ಎ (ರಾಷ್ಟೀಯ ಆಹಾರ ಭದ್ರತಾ ಕಾಯಿದೆ )ದಡಿ ಗದಗ ತಾಲೂಕಿನಲ್ಲಿ 1-6-2025 ರವರೆಗೆ (ಎಎವೈ, ಪಿಎಚ್‌ಎಚ್) 2,76,147 ಪಡಿತರ ಚೀಟಿದಾರರಿದ್ದಾರೆ. 1-6-2025 ರಲ್ಲಿ 7441 ಅರ್ಜಿಗಳು ಸ್ವೀಕೃತವಾಗಿದ್ದು ಆ ಪೈಕಿ ,3,787 ಅರ್ಜಿಗಳು ಮಂಜೂರಾಗಿವೆ. 695 ಅರ್ಜಿಗಳು ತಿರಸ್ಕೃತಗೊಂಡಿವೆ. 2,959 ಅರ್ಜಿಗಳು ಬಾಕಿ ಉಳಿದಿವೆ. ಹೊಸದಾಗಿ ಪಡಿತರ ಚೀಟಿ ಹೊಂದಿದೆ. ಜಿಲ್ಲೆಯಲ್ಲಿ 22,284 ಅರ್ಜಿಗಳು ಸ್ವೀಕೃತವಾಗಿದ್ದು ಆ ಪೈಕಿ 12,373 ಅರ್ಜಿಗಳು ಮಂಜೂರಾಗಿವೆ. 3,311 ಅರ್ಜಿಗಳು ತಿರಸ್ಕೃತಗೊಂಡಿದ್ದು , 6,600 ಅರ್ಜಿಗಳು ಬಾಕಿ ಉಳಿದಿವೆ” ಎಂದು ಸಭೆಗೆ ವಿವರಿಸಿದರು.

ಗದಗ ತಾಲೂಕು ಪಂಚ ಗ್ಯಾರಂಟಿ ಸಮಿತಿಯ ಸದಸ್ಯರಾದ ಕೃಷ್ಣಗೌಡ ಪಾಟೀಲ ಮಾತನಾಡಿ, “ಗದಗ ಮತಕ್ಷೇತ್ರದಲ್ಲಿರುವಂತಹ ಬಡತನದಲ್ಲಿರುವ ಕುಟುಂಬದವರನ್ನು ಗುರುತಿಸಿ ಪಟ್ಟಿ ಮಾಡಿ ಅವರಿಗೆ ಬಿಪಿಎಲ್ ಕಾರ್ಡ ಮಂಜೂರು ಮಾಡಲು ಅಧಿಕಾರಿಗಳಿಗೆ ಸೂಚಿಸಿದರು. ಬಿಪಿಎಲ್ ಕಾರ್ಡ ಮಂಜೂರಾತಿಗಾಗಿ ಬಾಕಿ ಉಳಿದಿರುವ ಅರ್ಜಿಗಳ ಸೂಕ್ತ ಪರಿಶೀಲನೆ ನಡೆಸಿ ನಿಗದಿತ ಅವಧಿಯಲ್ಲಿಯೇ ವಿಲೇವಾರಿ ಮಾಡಿ ಮಂಜೂರಾತಿಗೆ ಕ್ರಮ ವಹಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಸಾವಿತ್ರಿ ಹೂಗಾರ, ಮಲ್ಲು ಬಾರ್ಕೇಕರ, ಸಂಗಮೇಶ ಕರಕಲಮಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಬಸವರಾಜ ಕಡೆಮನಿ, ಆಹಾರ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಜಿಂಕೆ ಬೇಟೆ: ಆರೋಪ ಬಂಧನ 

ಕಡೂರು ತಾಲೂಕು ದೇವದಾನ ಗ್ರಾಮದ ತೋಟದಲ್ಲಿ ಉರುಳು ಹಾಕಿ ಜಿಂಕೆಯನ್ನು ಬೇಟೆಯಾಡಿದ...

ಚಿಕ್ಕಮಗಳೂರು | ₹58 ಲಕ್ಷ ದರೋಡೆ: ಆರೋಪಿಗಳ ಬಂಧನ 

ಹೊರವಲಯದ ಹೆದ್ದಾರಿಯಲ್ಲಿ ಅಡಿಕೆ ವ್ಯಾಪಾರಿಯ ಕಾರು ಅಡ್ಡಗಟ್ಟಿ ಬರೋಬ್ಬರಿ ₹58 ಲಕ್ಷ...

ಧಾರವಾಡ | ಮತದಾರರ ಹಕ್ಕು ಕಸಿಯುವ ಷಡ್ಯಂತ್ರ: ಗ್ಯಾನೇಶ್ ಕುಮಾರ್ ವಜಾಕ್ಕೆ ಕಲ್ಮೇಶ್ ಪಟೇಲ್ ಆಗ್ರಹ

"ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ನೀಡಿರುವ ಮತದಾನದ ಹಕ್ಕನ್ನು ವೋಟ್ ಚೋರಿ ಮೂಲಕ...

ಚಿಕ್ಕಮಗಳೂರು | ಆಕಸ್ಮಿಕ ಅಗ್ನಿ ಅವಘಡ: ಉತ್ಪನ್ನಗಳು ಭಸ್ಮ 

ಕಡೂರು ತಾಲೂಕಿನ ಬೀರೂರು ಪಟ್ಟಣದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಮಂಜುನಾಥ ಕಾಯರ್...