ಗದಗ | ಯುವಜನತೆ ಆರೋಗ್ಯಯುತ ಜೀವನ ನಡೆಸಲು ನಾವೆಲ್ಲರೂ ಶ್ರಮಿಸಬೇಕು: ಸಚಿವ ಎಚ್.ಕೆ ಪಾಟೀಲ್

Date:

Advertisements

ಇಂದಿನ ಯುವಜನತೆಯಲ್ಲಿನ ಮಾದಕ ವ್ಯಸನ ಮುಕ್ತ ಗೊಳಿಸುವ ಮೂಲಕ ಆರೋಗ್ಯಯುತ ಜೀವನ ನಡೆಸಲು ನಾವೆಲ್ಲರೂ ಶ್ರಮಿಸೋಣ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ.ಪಾಟೀಲ ಅವರು ಹೇಳಿದರು.

ಗದಗ ನಗರದ ಜಿಲ್ಲಾ ಪೊಲೀಸ್ ಇಲಾಖೆ ಆಯೋಜಿಸಿದ್ದ ‘ಥರ್ಡ್‌ ಐ ಹಾಗೂ ಮಾದಕ ವ್ಯಸನ ಮುಕ್ತ ಗದಗ ಜಿಲ್ಲೆ ಜಾಗೃತಿ ಅಭಿಯಾನ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ನಾವೆಲ್ಲರೂ ಇಂದು ನಗರದ ಗಾಂಧೀ ವೃತ್ತದಿಂದ ಕಾಲ್ನಡಿಗೆ ಮೂಲಕ ಹುಮ್ಮಸ್ಸಿನಿಂದ ನಡೆದು ಬಂದದ್ದೇ ಮಾದಕ ವ್ಯಸನ ಮುಕ್ತ ಜಿಲ್ಲೆಯಾಗಿಸಲು ಸ್ಪೂರ್ತಿ ನೀಡಿದೆ. ಬಿರುಬಿಸಿಲಲ್ಲದೇ ಶಾಲಾ ಮಕ್ಕಳು ವಿವಿಧ ಸಂಘಟನೆಗಳು ಸ್ವಯಂ ಪ್ರೇರಿತರಾಗಿ ಜಾಥಾದಲ್ಲಿ ಪಾಲ್ಗೊಳ್ಳುವ ಮೂಲಕ ವ್ಯಸನ ಮುಕ್ತ ಗದಗ ಜಿಲ್ಲೆಗೆ ಮುಂದಾಗಿರುವುದು ಸಂತೋಷ ತಂದಿದೆ” ಎಂದರು.

Advertisements

“ಯುವಜನತೆ ಮಾದಕ ವ್ಯಸನಕ್ಕೆ ಅಂಟಿಕೊಳ್ಳದೇ ದೈನಂದಿನ ಜೀವನದಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ದೈಹಿಕ ಸದೃಢತೆಗೆ ಮುಂದಾಗಬೇಕು. ಆ ಮೂಲಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಶಪಥ ಮಾಡಬೇಕು. ಆರೋಗ್ಯಯುತ ಜೀವನ ನಮ್ಮದಾಗಬೇಕಾದರೆ ಮಾದಕ ದ್ರವ್ಯಗಳಿಂದ ಅಂತರ ಕಾಯ್ದುಕೊಳ್ಳಬೇಕು. ಸದಾ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸದೃಢ ಜೀವನ ನಮ್ಮದಾಗಿಸಿಕೊಳ್ಳಬೇಕು” ಎಂದರು.

“ಕಾನೂನು ಸುವ್ಯವಸ್ಥೆ ಹಾಗೂ ಅಪರಾಧಗಳ ನಿಯಂತ್ರಣಕ್ಕಾಗಿ , ಸಂಚಾರಿ ನಿಯಮಗಳ ಪಾಲನೆ ಸರಿಯಾದ ನಿಟ್ಟಿನಲ್ಲಿ ಸಾಗಬೇಕೆಂಬ ಮಹತ್ವಾಕಾಂಕ್ಷಿಯೊಂದಿಗೆ ಗದಗ ನಗರದಲ್ಲಿ ಥರ್ಡ ಐ ಕಮಾಂಡ ಸೆಂಟರ್ ನ್ನು ಪೊಲೀಸ ವರಿಷ್ಟಾಧಿಕಾರಿಗಳ ಕಚೇರಿಯಲ್ಲಿ ಆರಂಭಿಸಲಾಗಿದೆ. ಗದಗ ನಗರಕ್ಕೆ ಪ್ರವೇಶಿಸುವ ಪ್ರತಿ ಮಾರ್ಗದಲ್ಲೂ ಅತ್ಯಾಧುನಿಕ ತಂತ್ರಜ್ಞಾನದ ಸಿ.ಸಿ.ಟಿ.ವಿ. ಅಳವಡಿಸಿದೆ. ಅಲ್ಲದೇ ನಗರದ ಪ್ರಮುಖ ವೃತ್ತಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಿ.ಸಿ.ಟಿ.ವಿ. ಅಳವಡಿಸುವ ಮೂಲಕ ಸಂಚಾರಿ ನಿಯಮಗಳ ಪಾಲನೆಗೆ ಒತ್ತು ನೀಡಲಾಗಿದೆ. ಇದರಿಂದಾಗಿ ಸಂಚಾರಿ ನಿಯಮಗಳ ಪಾಲನೆಗೆಳ ಜೊತೆ ಜೊತೆಗೆ ಅಪರಾಧ, ಕಳುವು, ಅನೈತಿಕ ಚಟುವಟಿಕೆಗಳ ನಿಯಂತ್ರಣ ಸಾಧ್ಯವಾಗಲಿದೆ. ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಸಾರ್ವಜನಿಕರು ಸಂಚಾರಿ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಆ ಮೂಲಕ ಆಗುವ ರಸ್ತೆ ಅಪಘಾತಗಳಿಂದ ಜೀವ ಹಾನಿ ತಡೆಗಟ್ಟಬೇಕು” ಎಂದು ತಿಳಿಸಿದರು.

ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್ ನೇಮಗೌಡ ಮಾತನಾಡಿ, “ಥರ್ಡ್‌ ಐ ಕಮಾಂಡ್ ಸೆಂಟರ್ ಪರಿಕಲ್ಪನೆಯನ್ನು ಸಚಿವ ಎಚ್.ಕೆ ಪಾಟೀಲ್ ಅವರ ಮಾರ್ಗದರ್ಶನದಂತೆ ಅನುಷ್ಟಾನಗೊಳಿಸಲಾಗುತ್ತದೆ. ಜೊತೆಗೆ ಗೃಹ ಸಚಿವರು ಗದಗ ಜಿಲ್ಲೆಗೆ ಭೇಟಿ ನೀಡಿದಾಗ ಗದಗ ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತ ಜಿಲ್ಲೆಯಾಗಿಸಲು ಒಪ್ಪಿಗೆ ನೀಡಿದ್ದು, ಅದರಂತೆ ಸಾರ್ವಜನಿಕರೆಲ್ಲರೂ ಗದಗ ಜಿಲ್ಲೆ ಮಾದಕ ವ್ಯಸನ ಮುಕ್ತ ಜಿಲ್ಲೆಯಾಗಿಸಲು ಪೊಲೀಸ ಇಲಾಖೆಯೊಂದಿಗೆ ಕೈ ಜೋಡಿಸಬೇಕು” ಎಂದು ಕೋರಿದರು.

ವೇದಿಕೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಗಣ್ಯರಾದ ಸಿದ್ದು ಪಾಟೀಲ, ಪ್ರಭು ಬುರಬುರೆ, ಲಡ್ಡು ಮುತ್ಯಾ, ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಬಸವಲಿಂಗಪ್ಪ ಮುಂಡರಗಿ, ದಸರಾ ಕ್ರೀಡಾಕೂಟದಲ್ಲಿ ಪದಕ ಪಡೆದ ಕ್ರೀಡಾ ಪಟು ಸಮನ್ವಿತಾ ಮಠದಾಪುರ ಉಪಸ್ಥಿತರಿದ್ದರು.

ಡಿ.ಎಸ್.ಪಿ. ಪ್ರಭುಗೌಡ ಸರ್ವರನ್ನು ಸ್ವಾಗತಿಸಿದರು. ಬಾಹುಬಲಿ ಜೈನರ ಕಾರ್ಯಕ್ರಮ ನಿರ್ವಹಿಸಿದರು. ಇದೇ ಸಂದರ್ಬದಲ್ಲಿ ಮೈಸೂರಿನಲ್ಲಿ ನಡೆದ ದಸರಾ ಕ್ರೀಡಾ ಕೂಟದಲ್ಲಿ ಸಾಧನೆಗೈದ ಕ್ರೀಡಾಪಟುಗಳನ್ನು ಸಚಿವರು ಗೌರವಿಸಿದರು. ನಟರಂಗ ಕಲಾ ಸಂಸ್ಥೆಯಿಂದ ವ್ಯಸನ ಮುಕ್ತ ಸಮಾಜ ನಾಟಕ ಪ್ರಸ್ತುತಪಡಿಸಲಾಯಿತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X