ಗದಗ | ಬಜೆಟ್‌ನಲ್ಲಿ ಜಿಲ್ಲೆಗೆ ಸಿಕ್ಕಿದ್ದೇನು?

Date:

Advertisements

2025-26ನೇ ಸಾಲಿನ ಬಜೆಟ್ ಮಂಡನೆಯಲ್ಲಿ ಉತ್ತರ ಕರ್ನಾಟಕಕ್ಕೆ ಹೊಸ ಹೊಸ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಅದರಂತೆ ಗದಗ ಜಿಲ್ಲೆಗೆ ಕೆಲವು ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ.

ಜಿಲ್ಲೆಯ ಮೆಡಿಕಲ್ ಕಾಲೇಜಿನಲ್ಲಿ ಸುಮಾರು 10 ಕೋಟಿ ವೆಚ್ಚದಲ್ಲಿ ಕ್ಯಾಥ್ ಲ್ಯಾಬ್ ಸೌಲಭ್ಯದೊಂದಿಗೆ ಸೂಪರ್ ಸ್ಪೆಷಾಲಿಟಿ ಕಾರ್ಡಿಯಾಕ್ ಪ್ರಾರಂಭಿಸಲು ಅನುದಾನ ನಿಗದಿ ಮಾಡಲಾಗಿದೆ. ಕೆ-ಶಿಫ್ 4 ಯೋಜನೆಯಡಿಯಲ್ಲಿ 5736 ಕೋಟಿ ರೂ ವೆಚ್ಚದಲ್ಲಿ ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನೊಂದಿಗೆ 875 ಕಿಮೀ ಉದ್ದದ 11 ರಸ್ತೆ, ಗಿಣಿಗೇರ-ಮುಂಡರಗಿ 41 ಮೀಟರ್ ರಸ್ತೆ ಅಭಿವೃದ್ಧಿಪಡಿಸಲು ಮುಂದಾಗಿರುವುದು ಮೂಲ ಸೌಕರ್ಯಕ್ಕೆ ಒತ್ತು ನೀಡಿದಂತಾಗಿದೆ.

ಜಿಲ್ಲೆಯ ಲಕ್ಕುಂಡಿಯಲ್ಲಿನ ಐತಿಹಾಸಿಕ ದೇವಾಲಯಗಳನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲು ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಹಾಗೂ ಪ್ರಚ್ಯಾವಶೇಷಗಳ ಸಂರಕ್ಷಣೆಗಾಗಿ ಬಯಲು ವಸ್ತುಸಂಗ್ರಹಾಲಯವನ್ನು ಪ್ರಾರಂಭಿಸುವುದು ಜಿಲ್ಲೆಗೆ ನೀಡಿರುವ ಮತ್ತೊಂದು ಪ್ರಮುಖ ಯೋಜನೆಯಾಗಿದೆ. ಇದರಿಂದ ಜಿಲ್ಲೆಯ ಪ್ರವಾಸೋದ್ಯಮ ಕೂಡ ಸುಧಾರಿಸುತ್ತದೆ ಎನ್ನುವುದು ಜನತೆಯ ಮಾತು.

Advertisements

ಹೊಸದಾಗಿ ರಚನೆಯಾದ 63 ತಾಲೂಕುಗಳ ಪೈಕಿ 2024-25ರಲ್ಲಿ ಗಜೇಂದ್ರಗಡದ ಪ್ರಜಾಸೌಧಕ್ಕೆ ಅನುಮೋದನೆ ನೀಡಲಾಗಿತ್ತು. 2025-26ನೇ ಸಾಲಿನ ಬಜೆಟ್‌ನಲ್ಲಿ ಲಕ್ಷ್ಮೇಶ್ವರ ಪ್ರಜಾಸೌಧ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ.

ರಾಜ್ಯ ವಿಪತ್ತು ಉಪಶಮನ ನಿಧಿ ಹಾಗೂ ರಾಷ್ಟ್ರೀಯ 20 ಉಪಶಮನ ನಿಧಿ ಅನುದಾನದ ಅಡಿಯಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ಕೋಟುಮಚಗಿ ಗ್ರಾಮದಿಂದ ವೀರಪುರ ಗ್ರಾಮದವರೆಗೆ ಹಿರೇಹಳ್ಳ ಹೂಳೆತ್ತುವ ಮೂಲಕ 60 ಕೋಟಿ ರೂ ವೆಚ್ಚದಲ್ಲಿ ಪ್ರವಾಹ ನಿಯಂತ್ರಣ ಕಾರ್ಯಕ್ರಮ ಅನುಷ್ಠಾನ ಮಾಡಲಾಗಿದೆ. ಇದು ಜಿಲ್ಲೆಯ ಜನತೆ ಕಾಂಗ್ರೆಸ್‌ ಸರ್ಕಾರದ ಮೇಲಿಟ್ಟಿರುವ ಭರವಸೆಗೆ ಪೂರಕವಾಗಿದೆ.

ಜಿಲ್ಲೆಯಲ್ಲಿ ವರ್ಷಗಳಿಂದ ಬರಿದಾಗಿದ್ದ ಶಿರಹಟ್ಟಿ ಕೆರೆಯನ್ನು ತುಂಬಿಸುವ ಕಾರ್ಯಕ್ಕೆ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ. ಕೆರೆ ತುಂಬಿಸುವ ಕಾರ್ಯ ಶೀಘ್ರ ನಡೆದರೆ ಈ ಬೇಸಿಗೆ ಹೊತ್ತಲ್ಲಿ ಜನರಿಗೆ ಹಾಗೂ ಜಾನುವಾರುಗಳಿಗೆ ನೀರಿನ ಸಮಸ್ಯೆ ಇರುವುದಿಲ್ಲ. ಜತೆಗೆ ಅಂತರ್ಜಲ ಮಟ್ಟ ಸುಧಾರಿಸುತ್ತದೆ. ಕೆರೆಯ ಸುತ್ತ ಮುತ್ತಲಿನ ಬೇಸಿಗೆ ಬೆಳೆಗೆ ಸಮರ್ಪಕ ನೀರು ಪೂರೈಕೆಯಾಗುತ್ತದೆ.

ರೈಲ್ವೆಯೊಂದಿಗೆ 50:50 ಅನುಪಾತದಲ್ಲಿ ಒಂಬತ್ತು ಯೋಜನೆಗಳನ್ನು ಕೈಗೆತ್ತುಕೊಂಡಿದೆ. ಏಳು ಯೋಜನೆಗಳ ಭೂಸ್ವಾಧೀನದ ಪೂರ್ಣ ವೆಚ್ಚವನ್ನು ರಾಜ್ಯ ಸರಕಾರವೇ ಭರಿಸುತ್ತದೆ. ಒಂಬತ್ತು ಯೋಜನೆಗಳಲ್ಲಿ ಗದಗ-ವಾಡಿಯು ಒಂದಾಗಿದೆ.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ, ಕೃಷಿ ಅಭಿವೃದ್ಧಿ, ಶಿಕ್ಷಣಾಭಿವೃದ್ಧಿ, ಪ್ರವಾಸೋದ್ಯಮಕ್ಕೆ ಒತ್ತು, ಕೈಗಾರಿಕೆ, ಉದ್ಯೋಗ ಸೃಷ್ಟಿ ಸೇರಿದಂತೆ ಮತ್ತೂ ನಿರೀಕ್ಷೆಗಳನ್ನು ಗದಗ ಜನತೆ ಇಟ್ಟುಕೊಂಡಿತ್ತ. ಆದರೆ ಈ ಬಜೆಟ್‌, ಬೆರಳೆಣಿಕೆಯಷ್ಟು ಬೇಡಿಕೆಗಳನ್ನು ಹೊರತುಪಡಿಸಿ ಬಹುತೇಕ ನಿರೀಕ್ಷೆಗಳನ್ನು ಹುಸಿಗೊಳಿಸಿದೆ ಎಂದು ಜಿಲ್ಲೆಯ ಜನತೆ ಬೇಸರ ವ್ಯಕ್ತಪಡಿಸಿದ್ದಾರೆ.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X