ಗದಗ | ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರ ಪತ್ರಕ್ಕೆ ನಿಮ್ಮ ಪ್ರತಿಕ್ರಿಯೆ ಏನು? ಸಿಎಂಗೆ ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನೆ

Date:

“ಅಕ್ರಮ ಗಣಿಗಾರಿಕೆ ಕುರಿತು ಸರ್ಕಾರದ ಕ್ರಮದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿರುವ ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರ ಪತ್ರಕ್ಕೆ ನಿಮ್ಮ ಪ್ರತಿಕ್ರಿಯೆ ಏನು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಸದ ಬಸವರಾಜ ಬೊಮ್ಮಾಯಿಯವರು ಭಾನುವಾರ ಪ್ರಶ್ನಿಸಿದ್ದಾರೆ.

- Advertisement -

ಗದಗ ಪಟ್ಟಣದಲ್ಲಿ ಭಾನುವಾರ ಎಚ್‌ಎಸ್‌ಎಲ್ ಟೈಲ್ಸ್ ಮತ್ತು ಗ್ರಾನೈಟ್ಸ್ ಶೋ ರೂಂ ಉದ್ಘಾಟಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಕಾಲೇಜು ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳೇ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?

‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ತಾಯಿ ಸೋನಾಲಿ ವಾಕೋಡೆ ಕೇಳಿದ ಪ್ರಶ್ನೆ. ಈ ಪ್ರಶ್ನೆ ಕೇವಲ ಮಗನನ್ನು ಕಳೆದುಕೊಂಡ ತಾಯಿಯ...

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಹೆಚ್.ಕೆ.ಪಾಟೀಲ್ ಅವರು, ಗಣಿಗಾರಿಕೆಯಲ್ಲಿ ದಾಖಲಾಗಿರುವ ಸುಮಾರು ಶೇಕಡ 90 ರಷ್ಟು ಪ್ರಕರಣಗಳು ಇನ್ನೂ ಇತ್ಯರ್ಥವಾಗಿಲ್ಲ ಎಂದು ಹೇಳಿದ್ದಾರೆ.

“ಪ್ರಸ್ತುತ ಇರುವುದು ಅವರದೇ ಕಾಂಗ್ರೆಸ್ ಸರ್ಕಾರ. ಪಾಟೀಲ್ ಕೂಡ ಸರ್ಕಾರದ ಸಂಪುಟದ ಸದಸ್ಯರು. ಈಗ, ಅವರದೇ ಸಚಿವರೊಬ್ಬರು ಎತ್ತಿರುವ ಪ್ರಕರಣಕ್ಕೆ ಸಿಎಂ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡಲು ರಾಜ್ಯದ ಜನರು ಕುತೂಹಲದಿಂದ ಕಾಯುತ್ತಿದ್ದಾರೆ” ಎಂದು ಹೇಳಿದರು.

“ವಿಶೇಷ ನ್ಯಾಯಾಲಯ ಮಾಡಬೇಕು, ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಎಚ್‌.ಕೆ.ಪಾಟೀಲ ಹೇಳಿದ್ದಾರೆ. ಈಗಾಗಲೇ ಹಲವಾರು ಪ್ರಕರಣಗಳು ನೋಂದಣಿಯಾಗಿ ಎಸ್‌ಐಟಿ ರಚನೆ ಆಗಿದೆ. ಸಿಬಿಐ ತನಿಖೆ ನಡೆಯುತ್ತಿದೆ. ಎಸ್‌ಐಟಿ ಮುಖ್ಯಸ್ಥರ ಮೇಲೆ ಹಲವಾರು ಆರೋಪಗಳು ಕೇಳಿ ಬಂದಿವೆ. ಈಗ ಯಾವ ರೀತಿ ತನಿಖೆ ಮಾಡುತ್ತಾರೆ ನೋಡೋಣ” ಎಂದು ತಿಳಿಸಿದರು.

“ಸಚಿವ ಎಚ್‌.ಕೆ.ಪಾಟೀಲ 2017-18ರ ಪೂರ್ವದ ಪ್ರಕರಣಗಳ ಬಗ್ಗೆ ಮಾತ್ರ ಚರ್ಚೆ ಮಾಡಿದ್ದಾರೆ. ಸಿದ್ದರಾಮಯ್ಯ ಸಿಎಂ ಇದ್ದಾಗ ಇಡೀ ದೇಶದಲ್ಲಿ ಗಣಿಗಾರಿಕೆಯನ್ನು ಇ ಹರಾಜು ಮಾಡಬೇಕು ಅಂತ ಹೇಳಿ ಕೇಂದ್ರ ಸರ್ಕಾರ ಕಾನೂನು ಬದಲಾವಣೆ ಮಾಡಿತು. ಆದರೆ, ಕೇಂದ್ರ ಸರ್ಕಾರ ಕಾನೂನು ಜಾರಿ ಮಾಡುವ ಹಿಂದಿನ ದಿವಸದಲ್ಲಿ ರಾಜ್ಯ ಸರ್ಕಾರ ತಮಗೆ ಬೇಕಾದವರಿಗೆ ಗಣಿ ಗುತ್ತಿಗೆ ನವೀಕರಣ ಮಾಡಿತ್ತು. ಅವುಗಳ ಬಗ್ಗೆಯೂ ತನಿಖೆ ಮಾಡಲು ಎಚ್‌.ಕೆ.ಪಾಟೀಲ ಒಪ್ಪುತ್ತಾರೆಯೇ?” ಎಂದು ಸವಾಲು ಹಾಕಿದರು.

“ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ ಮನೆ ಹಂಚಿಕೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಕುರಿತಾಗಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿ.ಆರ್.ಪಾಟೀಲ ಹಲವಾರು ವಿಚಾರ ಎತ್ತುತ್ತಾರೆ. ಆದರೆ, ಅವರ ಮಾತಿಗೆ ಕಾಂಗ್ರೆಸ್‌ನವರು ಮರ್ಯಾದೆ ಕೊಡುತ್ತಿಲ್ಲ. ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ ಎನ್ನುವುದು ಸ್ಪಷ್ಟವಾಗಿದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದಲಿತರ ಸರಣಿ ಮೂರು ಕೊಲೆಗಳ ಸಿಐಡಿ ತನಿಖೆಗೆ ಆಗ್ರಹ: ಗೃಹ ಸಚಿವರಿಗೆ ಮನವಿ

ಜಿಲ್ಲೆಯಲ್ಲಿ ನಡೆದ ದಲಿತರ ಸರಣಿ ಮೂರು ಕೊಲೆ ಪ್ರಕರಣಗಳನ್ನು ಸಿಐಡಿ ತನಿಖೆಗೆ...

ರಾಯಚೂರು | ಬಸವರಾಜ ಆತ್ಮಹತ್ಯೆ ಪ್ರಕರಣ: 15 ಮಂದಿ ವಿರುದ್ಧ ಕೇಸ್, ಮೂವರ ಬಂಧನ

ಮಸ್ಕಿ ತಾಲ್ಲೂಕಿನ ಮೆದಕಿನಾಳ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ಕಾರ್ಯದರ್ಶಿ...

ಉಡುಪಿ | ಆದಿದ್ರಾವಿಡ ಸಹಕಾರ ಸಂಘದಿಂದ ಶೇ.15 ಡಿವಿಡೆಂಡ್ ಘೋಷಣೆ

ತೆಂಕುಬಿರ್ತಿ, ಬ್ರಹ್ಮಾವರದ ಆದಿದ್ರಾವಿಡ ಸಹಕಾರ ಸಂಘ ನಿಯಮಿತದ 9ನೇ ವಾರ್ಷಿಕ ಮಹಾಸಭೆ...