ಮಾರಕಾಸ್ತ್ರದಿಂದ ಹೊಡೆದು ಪತ್ನಿ ಮೇಲೆ ಹಲ್ಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಮುಂಡರಗಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಲ್ಲೆಯ ರಭಸಕ್ಕೆ ಪತ್ನಿಯು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯರು ಒಗ್ಗೂಡಿ ಗದಗ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಪತಿಯಿಂದ ಹಲ್ಲೆಗೊಳಗಾದ ಮಹಿಳೆಯು ಪೋಸ್ಟ್ ಆಫೀಸಸ್‌ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಹಲ್ಲೆ ಮಾಡಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಮುಂಡರಗಿ ನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಆರೋಪಿ ಪತಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆಲಸವಿಲ್ಲದೇ ಸಾಕುವುದಕ್ಕೆ ಕಷ್ಟವೆಂದು ಮಕ್ಕಳನ್ನೇ ಕೊಂದ ತಾಯಿ
ಘಟನೆ ಸಂಬಂಧ ಈ ದಿನ.ಕಾಮ್ ಮುಂಡರಗಿ ಸಿಪಿಐ ಪೊಲೀಸ್ ಅಧಿಕಾರಿಯೊಬ್ಬರನ್ನು ಸಂಪರ್ಕಿಸಿದಾಗ, “ಸಂತ್ರಸ್ತರ ದೂರಿನನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ಬಳಿಕ ಘಟನೆಯ ಕುರಿತು ಹೆಚ್ಚಿನ ಮಾಹಿತಿ ಹೊರಬರಲಿದೆ” ಎಂದು ಪ್ರತಿಕ್ರಿಯಿಸಿದರು.