ಕರ್ನಾಟಕಕ್ಕೆ 50ರ ಸಂಭ್ರಮ | 31 ಅಡಿ ಎತ್ತರದ ಸ್ತೂಪ ನಿರ್ಮಾಣ: ಸಚಿವ ಡಾ. ಎಚ್.ಕೆ ಪಾಟೀಲ

Date:

ಐತಿಹಾಸಿಕ ಕಾರ್ಯಕ್ರಮ ನಡೆದಾಗ ವಿಶೇಷ ಗುರುತುಗಳನ್ನು ನಿರ್ಮಿಸಬೇಕು. ಆದ್ದರಿಂದ ಕರ್ನಾಟಕ ಸಂಭ್ರಮ-50ರ ಆಚರಣೆಯನ್ನು ಅಚ್ಚಳಿಯದ ಹಾಗೆ ನೆನಪಿನಲ್ಲಿಟ್ಟುಕೊಳ್ಳಲು ಗದಗ ಜಿಲ್ಲಾಡಳಿತವು 31 ಅಡಿ ಎತ್ತರದ ಸ್ತೂಪ ನಿರ್ಮಿಸಲು ನಿರ್ಣಯ ಕೈಗೊಂಡಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳ ಸಚಿವ ಡಾ. ಎಚ್.ಕೆ ಪಾಟೀಲ ತಿಳಿಸಿದ್ದಾರೆ.

- Advertisement -

ಗದಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಚಿವರು ಮಾತನಾಡಿದರು. “ಸ್ತೂಪ ನಿರ್ಮಾಣ ಮಾಡಬೇಕು ಎನ್ನುವ ಕಲ್ಪನೆ ಹಿಂದಿನ ಕಾಲದಿಂದ ಇದ್ದರೂ, ಅನಾವರಣಗೊಳಿಸಲು ಸಾಧ್ಯವಾಗಿರಲಿಲ್ಲ. ಸ್ತೂಪದಲ್ಲಿ 1973 ಹಾಗೂ 2023ರ ಐತಿಹಾಸಿಕ  ಘಟನೆಗಳನ್ನು ಹಾಗೂ ಇತರೆ ಪ್ರಮುಖ ಮಾಹಿತಿಗಳನ್ನು ದಾಖಲಾಗಿರುತ್ತದೆ. ನವೆಂಬರ 3 ರಂದು ಸಿಎಂ ಸಿದ್ದರಾಮಯ್ಯ ಅವರು ಪಂ.ಪುಟ್ಟರಾಜ ಗವಾಯಿಗಳ ವೃತ್ತದಲ್ಲಿನ ಈ ಸ್ತೂಪವನ್ನು ಅನಾವರಣಗೊಳಿಸಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರು ನಾಮಕರಣ ಮಾಡಬೇಕು ಎಂಬ ದಿಸೆಯಲ್ಲಿ ಗದಗ ಭಾಗದವರು ವಿಶೇಷ ಪ್ರಯತ್ನ ಮಾಡಿದ್ದಾರೆ. ಕುಮಾರವ್ಯಾಸ ಅವರು ತಮ್ಮ ಕಾವ್ಯಕ್ಕೆ ಕರ್ನಾಟಕ ಭಾರತ ಕಥಾಮಂಜರಿ ಹೆಸರು ನೀಡಿದ್ದರೆ, ದುರ್ಗಸಿಂಹ ಹಾಗೂ ಅಲೂರು ವೆಂಕಟರಾಯರು ಕರ್ನಾಟಕ ಹೆಸರನ್ನು ಉಲ್ಲೇಖಿಸಿದ್ದಾರೆ. ಜಿಲ್ಲೆಯ ಅಂದಿನ ಪ್ರಮುಖರಾದ ಅಂದಾನಪ್ಪ ದೊಡ್ಡಮೇಟಿ, ಕೆ.ಎಚ್. ಪಾಟೀಲ, ಎಂ.ಎಂ. ಕಣವಿ, ಸೇರಿ ಹಲವರು ಕೆಲಸ ಕರ್ನಾಟಕ ಹೆಸರು ನಾಮಕರಣವಾಗಲು ಶ್ರಮಿಸಿದ್ದಾರೆ. ಅಲ್ಲದೇ, ಇಂದಿರಾ ಗಾಂಧಿ, ರಾಜೀವ ಗಾಂಧಿ ಹಾಗೂ ಸಾಯಿ ಬಾಬಾ ಅವರು ಸಾಕ್ಷಿಯಾಗಿರುವಂತಹ ಸತ್ವಯುತ ದಿ. ಕಾಟನ್ ಸೇಲ್ ಸೊಸೈಟಿ ಆವರಣದ ನೆಲದಲ್ಲಿ ಐತಿಹಾಸಿಕ ಕಾರ್ಯಕ್ರಮ ನಡೆಯುತ್ತಿದ್ದು, ಸಾರ್ವಜನಿಕರ ಸಹಭಾಗಿತ್ವ ಪ್ರಾಮುಖ್ಯತೆ ಪಡೆದಿದೆ” ಎಂದರು.

“ರಾಜ್ಯದ ಒಂದು ಕೊಟಿಗೂ ಅಧಿಕ ಬಡ ಕುಟುಂಬಗಳನ್ನು ಬಡತನ ರೇಖೆಗಿಂತ ಮೇಲೆತ್ತುವ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದ ನಂತರ ಪ್ರಥಮವಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಜರುಗುತ್ತಿರುವ ಕನ್ನಡ ಜಾತ್ರೆಗೆ ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು, ಸಾಹಿತಿಗಳು, ಸಾರ್ವಜನಿಕರು ಭಾಗವಹಿಸುವದರ ಮೂಲಕ ಕನ್ನಡ ಜಾತ್ರೆಯನ್ನು ಯಶಸ್ವಿಗೊಳಸಬೇಕು” ಎಂದು ಸಚಿವ ಎಚ್.ಕೆ.ಪಾಟೀಲ ಮನವಿ ಮಾಡಿದರು.

“ನಾಡಿನ ಸಂಸ್ಕೃತಿ ಇತಿಹಾಸ ಸಾರುವ 25 ಸಾವಿರ ಸ್ಮಾರಕಗಳಿವೆ. 500 ಕ್ಕೂ ಹೆಚ್ಚು ಸ್ಮಾರಕಗಳನ್ನು ಸರ್ಕಾರ ಘೋಷಿಸಿದ್ದು. 300 ಸ್ಮಾರಕಗಳ ರಕ್ಷಣೆಗೆ ನಿಗಾ ಇರಿಸಲಾಗಿದೆ. 200 ಕ್ಕೂ ಹೆಚ್ಚು ಸ್ಮಾರಕಗಳ ರಕ್ಷಣೆ ಆಗಬೇಕಾಗಿದೆ. ಇಂತಹ ಇತಿಹಾಸವನ್ನು ಸಾರುವ ಸ್ಮಾರಕಗಳ ರಕ್ಷಣೆಗೆ ನವೆಂಬರನಲ್ಲಿ ಘೋಷಣೆ ಮಾಡಲಿದ್ದೇವೆ ಎಂದರು. ಈಗಾಗಲೇ ಸ್ಮಾರಕ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದು ರಾಜ್ಯದಲ್ಲಿನ ಸ್ಮಾರಕಗಳ ದತ್ತು ಸ್ವೀಕಾರ ಕುರಿತು ಅನಿವಾಸಿ ಭಾರತೀಯರೊಂದಿಗೆ ಸಭೆ ಜರುಗಿಸಿ ಸ್ಮಾರಕಗಳ ದತ್ತು ಸ್ವೀಕಾರ ಕುರಿತು ಮನವಿ ಮಾಡಿರುತ್ತೇನೆ” ಎಂದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಜಿ.ಎಸ್. ಪಾಟೀಲ, ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ಮಾಜಿ ಸಂಸದ ಐ.ಜಿ.ಸನದಿ, ಸೇರಿದಂತೆ ಗಣ್ಯರಯ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇಯಲು ಬಿಟ್ಟ ದನ ಟೆಂಪೋದಲ್ಲಿ ಪತ್ತೆ; 24 ಗಂಟೆಯೊಳಗೆ ನಾಲ್ವರು ಪೊಲೀಸ್ ಬಲೆಗೆ!

ಮೇಯಲು ಬಿಟ್ಟಿದ್ದ ದನವನ್ನು ಅಕ್ರಮವಾಗಿ ಟೆಂಪೋದಲ್ಲಿ ಸಾಗಿಸುತ್ತಿದ್ದರೆಂದು ಆರೋಪಿಸಿ ದಾಖಲಾಗಿದ್ದ ಪ್ರಕರಣಕ್ಕೆ...

ಕಸ್ತೂರಿರಂಗನ್ ವರದಿ ವಿರುದ್ಧ ಆಕ್ರೋಶ: ಶೃಂಗೇರಿ ಬಂದ್‌ಗೆ ರೈತ ಸಂಘಟನೆಗಳ ಬೆಂಬಲ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಕಸ್ತೂರಿರಂಗನ್ ವರದಿಯ ಅನುಷ್ಠಾನವನ್ನು ವಿರೋಧಿಸಿ ಇಂದು...

ಚಿಕ್ಕಮಗಳೂರು | ಕುಕ್ಕೂಡಿಗೆ ರವೀಂದ್ರ: ಇಒ ಅಧಿಕಾರಿಗೆ ಹಲ್ಲೆ, ಜೀವ ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರ್ ವ್ಯಾಪ್ತಿಯ ಹೇರೂರು ಬಳಿ ದಿ.19 ರಂದು ಮಾನ್ಯ...

ಕಾಂಗ್ರೆಸ್‌ಗೆ ಸವನಳ್ಳಿ, ಗೊಣಸಗಿ ಗ್ರಾಮದ ಮುಖಂಡರ ಸೇರ್ಪಡೆ; ಗ್ರಾಮಗಳ ಅಭಿವೃದ್ಧಿಗೆ ಎಂ.ಬಿ ಪಾಟೀಲ ಕರೆ

ಹೊಸ ಹಾಗೂ ಹಿರಿಯ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು...