ಬರ ಹಿನ್ನೆಲೆ; ವಿಬಿ-ಜಿ ರಾಮ್‌ಜಿ ಯೋಜನೆಯಡಿ 175 ದಿನಗಳ ಕೆಲಸಕ್ಕೆ ಪತ್ರ: ಈಶ್ವರ ಖಂಡ್ರೆ

Date:

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರಗಾಲ ಆವರಿಸಿದ್ದು, “ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)” ವಿಬಿ-ಜಿ ರಾಮ್‌ಜಿ ಯೋಜನೆಯಡಿ ನಿರಂತರ ಕೆಲಸ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದರು.

- Advertisement -

ಗದಗ ತಾಲೂಕು ಪಂಚಾಯತಿ ವ್ಯಾಪ್ತಿಯ ಅಡವಿಸೋಮಾಪುರ ಗ್ರಾಮ ಪಂಚಾಯತಿಯ ತಾಂಡಾ ರಸ್ತೆಯಲ್ಲಿರುವ ಚೆಕ್ ಡ್ಯಾಂ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕೂಲಿಕಾರರೊಂದಿಗೆ ಅವರು ಚರ್ಚೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

18 ವರ್ಷಗಳಲ್ಲೇ ಗರಿಷ್ಠ ಏರಿಕೆ ಕಂಡ ಸಾಂಬಾರ್ ಈರುಳ್ಳಿ;‌...

ಕರ್ನಾಟಕದ ಮಾರುಕಟ್ಟೆಗಳಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಇದೀಗ ಅಡುಗೆ ಮನೆಯ ಪ್ರಮುಖ ಪದಾರ್ಥವಾದ ಸಾಂಬಾರ್ ಈರುಳ್ಳಿ (ಸಣ್ಣ ಈರುಳ್ಳಿ) ಬೆಲೆ ಗ್ರಾಹಕರಿಗೆ ದೊಡ್ಡ ಆಘಾತ ನೀಡಿದೆ. ಚಿಲ್ಲರೆ...

“ಬರಗಾಲದ ಕಾರಣ ಗ್ರಾಮೀಣ ಜನರು ಕೆಲಸ ಅರಸಿ ವಲಸೆ ಹೋಗುವುದನ್ನು ತಡೆಯಲು ವಿಬಿಜಿ ರಾಮ್‌ಜಿ ಯೋಜನೆಯಡಿ ನಿರಂತರ ನೀಡಬೇಕಾಗಿದೆ. ಗ್ರಾಮೀಣ ಭಾಗದ ಪ್ರತಿ ಜಾಬ್‌ಕಾರ್ಡ್‌ಗೆ ಕೇಂದ್ರ ಸರಕಾರ ವರ್ಷಕ್ಕೆ125 ದಿನ ಕೆಲಸ ನಿಗದಿ ಪಡಿಸಿದೆ. ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರ ಹಿತದೃಷ್ಟಿಯಿಂದ ಇನ್ನೂ 50 ದಿನ ಸೇರಿಸಿ ಪ್ರತಿ ಜಾಬ್‌ಕಾರ್ಡ್‌ಗೆ 175 ದಿನ ಕೆಲಸ ನೀಡಲು ಕೋರಿ ಪತ್ರ ಬರೆಯಲಾಗಿದೆ” ಎಂದು ಕೂಲಿಕಾರರಿಗೆ ತಿಳಿಸಿದರು.

ಕಂದಕ ಬದು ಕೆಲಸ ನೀಡಿ: ರೈತರು ಹಾಗೂ ಕೂಲಿಕಾರರಿಗೆ ಅವಶ್ಯವಾಗಿರುವ ಕಂದಕ ಬದು ಮಾಡಿಕೊಳ್ಳಲು ಅವಕಾಶ ನೀಡುವಂತೆ ರೈತರು ಮನವಿ ಮಾಡಿಕೊಂಡರು. ಇದಕ್ಕೆ ಸಚಿವರು ಸಕಾರಾತ್ಮಕ ಸ್ಪಂದಿಸಿದರು. ನಂತರ ಗ್ರಾಪಂ ವ್ಯಾಪ್ತಿಯಲ್ಲಿ ಇತ್ತೀಚೆಗೆ ಪೂರ್ಣಗೊಂಡ ಕೃಷಿ ಹೊಂಡ ಕಾಮಗಾರಿಯ ಛಾಯಾಚಿತ್ರ ನೋಡಿ ಮೆಚ್ಚುಗೆ ವ್ಯಕ್ತಪಡಿಸಿ, ಇನ್ನಷ್ಟು ಕೃಷಿ ಹೊಂಡ ಕಾಮಗಾರಿಗೆ ಅವಕಾಶ ನೀಡುವಂತೆ ತಿಳಿಸಿದರು. ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (ಪಿಎಂಎಸ್ ಬಿವೈ), ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (ಪಿಎಂಜೆಜೆಬಿವೈ) ಮತ್ತು ಅಟಲ್ ಪಿಂಚಣಿ ಯೋಜನೆ (ಎಪಿವೈ) ಮಾಡಿಸಿಕೊಳ್ಳುವಂತೆ ಕೂಲಿಕಾರರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅವರಾದ ಮುಕುಲ್ ಜೈನ್, ಜಿಪಂ ಉಪ ಕಾರ್ಯದರ್ಶಿ ಅವರಾದ ಸಿ.ಆರ್. ಮುಂಡರಗಿ, ತಾಪಂ ಕಾರ್ಯನಿರ್ವಾಹ ಅಧಿಕಾರಿಯವರಾದ ಡಾ. ಎಚ್.ಎಸ್. ಜಿನಗಿ, ಸಹಾಯಕ ನಿರ್ದೇಶಕರಾದ ಕುಮಾರ ಪೂಜಾರ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಸುರೇಶ ಲಮಾಣಿ ಇತರರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧ್ಯಪ್ರಾಚ್ಯ ಸಂಘರ್ಷ: ಅಕ್ಟೋಬರ್‌ನಲ್ಲಿ ಭಾರತದ ತೈಲ, ಅನಿಲ ಆಮದು ವೆಚ್ಚ 60% ಹೆಚ್ಚಳ; LPG ಬಳಕೆಯಲ್ಲಿ ಭಾರೀ ಇಳಿಕೆ

ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಇಂಧನ ಪೂರೈಕೆಯಲ್ಲಿ...

ಯಲ್ಲಾಪುರ | ಪ್ರಜಾಸೇವಾ ಆಂದೋಲನಕ್ಕೆ ಜನರಿಂದ ಉತ್ತಮ ಸ್ಪಂದನೆ: ಲಕ್ಷ್ಮಣ ಸವದಿ

ಪ್ರಜಾಸೇವಾ ಆಂದೋಲನ ಸಭೆಗಳ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ದೊರೆಯುತ್ತಿದ್ದು,...

ಲಡಾಖ್ ಚುನಾವಣೆ: ಗ್ರಾಮೀಣ ಭಾಗದಲ್ಲಿ ಶೇ. 70ರಷ್ಟು, ಪಟ್ಟಣಗಳಲ್ಲಿ ಬರೀ ಶೇ.52.4 ಮತದಾನ; ಯಾಕಿಷ್ಟು ಕುಸಿತ?

2019ರಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ಬೇರ್ಪಟ್ಟು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಿ (UT)...

18 ವರ್ಷಗಳಲ್ಲೇ ಗರಿಷ್ಠ ಏರಿಕೆ ಕಂಡ ಸಾಂಬಾರ್ ಈರುಳ್ಳಿ;‌ ರೈತನಿಗಿಲ್ಲ ಲಾಭ!

ಕರ್ನಾಟಕದ ಮಾರುಕಟ್ಟೆಗಳಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ...