ಗದಗ | ವಿಬಿ ಜಿ ರಾಮ್ ಜಿ ಯೋಜನೆಯಡಿ 125 ದಿನಗಳ ಕೆಲಸ: ಇಒ ಚಂದ್ರಶೇಖರ ಬಿ ಕಂದಕೂರ

Date:

ಗ್ರಾಮೀಣ ಪ್ರದೇಶದ ಕೂಲಿಕಾರರ ಗುಳೆ ತಪ್ಪಿಸಿ ಸ್ಥಳೀಯವಾಗಿ ಉದ್ಯೋಗ ಕಲ್ಪಿಸಲು ವಿಬಿ ಜಿ ರಾಮ್ ಜಿ ಯೋಜನೆಯಡಿ 125 ದಿನಗಳ ಕೆಲಸ ದೊರೆಯಲಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ ಬಿ ಕಂದಕೂರ ಹೇಳಿದರು.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಿಡಗುಂದಿ ಗ್ರಾಮದ ಹೊಸ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಗುರುವಾರ ವಿಬಿ ಜಿ ರಾಮ್ ಜಿ ಯೋಜನೆಯಡಿ ಐಇಸಿ ಚಟುವಟಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ರಾಯಚೂರು | ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

“ಯಾರು ಗುಳೆ ಹೋಗದೆ ತಮ್ಮ ಊರಿನಲ್ಲಿ ಸರ್ಕಾರ ನಿಗದಿ ಪಡಿಸಿದ ದಿನಗಳ ವರೆಗೆ ಕೆಲಸ ಮಾಡಬೇಖು. ವೈಯಕ್ತಿಕ ಕಾಮಗಾರಿಗಳ ಲಾಭ ಪಡೆದುಕೊಳ್ಳಬೇಕು” ಎಂದರು.

“ವಿಬಿ ಜಿ ರಾಮ್ ಜಿ ಯೋಜನೆಯಡಿ 125 ದಿನಗಳ ಕೆಲಸ ಪಡೆಯಬೇಕಾದರೆ ಕೂಲಿಕಾರರು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ನಿಮಗೆ ನಿರಂತರ ಕೆಲಸ ನೀಡುತ್ತೇವೆ. ಅಂದಾಗ 125 ದಿನಗಳ ಕಾಲ ಕೆಲಸ ಪಡೆದುಕೊಳ್ಳಬಹುದು. ಆ ನಿಟ್ಟಿನಲ್ಲಿ ನಿಡಗುಂದಿ ಗ್ರಾಮ ಎಲ್ಲಾ ಕೂಲಿಕಾರರು ಕೆಲಸ ಮಾಡಬೇಕು” ಎಂದು ಹೇಳಿದರು.

ಹೊಸ ಕರೆ ಮಾದರಿಯಾಗಲಿ: ನಿಡಗುಂದಿ ಗ್ರಾಮದ ಹೊಸ ಕೆರೆಯು ಕೆರೆಯಂತೆ ಕಾಣುತ್ತಿಲ್ಲ. ಇದರಲ್ಲಿ ಮುಳ್ಳುಕಂಠಿ, ಗಿಡ, ಜಾಲಿಮರ ಬೆಳೆದು, ಹೂಳು ತುಂಬಿ ಕರೆಯೂ ತನ್ನ ಆಕಾರವನ್ನು ಕಳೆದುಕೊಂಡು ನೀರು ನಿಲ್ಲದಂತ್ತಾಗಿದೆ. ಕೆರೆ ಪುನಶ್ಚೇತನಕ್ಕಾಗಿ ವಿಬಿ ಜಿ ರಾಮ್ ಜಿ ಯೋಜನೆಯಲ್ಲಿ ಅಂದಾಜು 90 ಲಕ್ಷ ರೂ. ಕಾಮಗಾರಿಗಳನ್ನು ಇಟ್ಟುಕೊಳ್ಳಲಾಗಿದೆ. ಅದರಲ್ಲಿ ಕೂಲಿಕಾರರು ಸರಿಯಾಗಿ ಕೆಲಸ ಮಾಡಿ ಕೆರೆ ಅಭಿವೃದ್ಧಿ ಮಾಡಿದರೆ ತಾಲೂಕಿಗೆ ಮಾದರಿ ಕೆರೆಯಾಗಬೇಕು” ಎಂದು ಹೇಳಿದರು.

ವಿಭಿನ್ನ ಐಇಸಿ ಚಟುವಟಿಕೆ: ನಿಡಗುಂದಿ ಗ್ರಾಮದ ಹೊಸ ಕೆರೆಯಲ್ಲಿ ಕೂಲಿಕಾರರಿಗೆ “ವಿಬಿ ಜಿ ರಾಮ್ ಜಿ” ಎಂದು ಅಕ್ಷರ ಬರೆದು ಆಕರ್ಷಣೆ ಮಾಡಿ ಕೂಲಿಕಾರರ ಗಮನ ಸೆಳೆಯುವಂತೆ ಮಾಡಲಾಯಿತು. ಜೊತೆಗೆ ಅಕ್ಷರದಲ್ಲಿ ಕೂಲಿಕಾರರ ಮಹಿಳೆಯನ್ನು ಕುಳಿಸಿ ಸುತ್ತಲೂ ಜನರನ್ನು ನಿಲ್ಲಿಸಿ ಯೋಜನೆಯ ಬಗ್ಗೆ ಅರಿವು ಮೂಡಿಸಲಾಯಿತು.

ಜಾಬ್ ಕಾರ್ಡ್ ಮೇಳ ಅಭಿಯಾನ: “ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್ ಗದಗ ನಿರ್ದೇಶನದಂತೆ ತಾಲೂಕಿನಾದ್ಯಂತ ಜಾಬ್ ಕಾರ್ಡ್ ಮೇಳ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಲ್ಲಿ ಹೊಸ ಜಾಬ್ ಕಾರ್ಡ್ ಮಾಡಿಸುವುದು, ತಿದ್ದುಪಡಿ, ಇಕೆವೈಸಿ ನವೀಕರಣ ಮಾಡಲಾಗುತ್ತದೆ” ಎಂದು ತಿಳಿಸಿದರು.

ಈ ವೇಳೆ ಮತದಾರರ ಪಟ್ಟಿ ಪರಿಷ್ಕರಣೆಯ ಕುರಿತು ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿ ತಿದ್ದುಪಡಿ, ಹೊಸ ಸೇರ್ಪಡೆ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. 18 ವರ್ಷ ಮೇಲ್ಪಟ್ಟ ಯುವಕ/ಯುವತಿಯರು ಮತದಾರರ ಪಟ್ಟಿ ಹೆಸರನ್ನು ಸೇರಿಸಲು ಅವಕಾಶ ನೀಡಲಾಗಿದೆ. ಈಗಾಗಲೇ ಮತದಾರರ ಪಟ್ಟಿಯಲ್ಲಿ ಇದ್ದು, ಅದರಲ್ಲಿ ತಿದ್ದುಪಡಿ ಇದ್ದರೆ ನಿಮ್ಮ ಗ್ರಾಮ ಬಿಎಲ್ಒ ಭೇಟಿ ಮಾಡಿ ತಿದ್ದುಪಡಿ ಮಾಡಿಸಬೇಕು. ಮತದಾರರ ಪಟ್ಟಿಯಿಂದ ಕೈಬಿಟ್ಟಿರುವವರು ಇದ್ದರೆ ಸೇರ್ಪಡೆಗೆ ಅವಕಾಶ ನೀಡಲಾಗಿದೆ ಸೇರ್ಪಡೆ ಮಾಡಿಸಿಕೊಳ್ಳಬೇಕು ಎಂದು ತಾ.ಪಂ. ಇಒ ಚಂದ್ರಶೇಖರ ಬಿ ಕಂದಕೂರ ಹೇಳಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಅಮರೇಶ ಮೂಲಿಮನಿ, ಜಿಲ್ಲಾ ಐಇಸಿ ಸಂಯೋಜಕರಾದ ವಿ.ಎಸ್. ಸಜ್ಜನ್, ತಾಂತ್ರಿಕ ಸಹಾಯಕ ಅಜಯ್ ಹೂಗಾರ, ಬಿಲ್ ಕಲೆಕ್ಟರ್ ಮತ್ತಪ್ಪ, ಜಿಕೆಎಂ ಅನಿತಾ ಸಂಗನಾಳ, ಪಂಚಾಯತ್ ಸಿಬ್ಬಂದಿಗಳ, ಕಾಯಕ ಬಂಧುಗಳು, ಕೂಲಿಕಾರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದಡಿ ಹಾವೇರಿ ವಿವಿಗೆ ನೋಟಿಸ್

ಪದವೀಧರರ ಪಶ್ಚಿಮ ಮತಕ್ಷೇತ್ರದ ಚುನಾವಣೆಯ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವ...

ಸೌರವ್ ದಾಸ್, ಆಶುತೋಷ್ ರಾಂಕಾ ಬಿಡುಗಡೆಯಲ್ಲಿ ವಿಳಂಬ; 4 ಶ್ಯೂರಿಟಿ ಬಾಂಡ್ ತಿರಸ್ಕಾರ: ಸಿಜೆಪಿ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಮುಖ ನಾಯಕರಾದ ಸೌರವ್ ದಾಸ್ ಮತ್ತು...

ಶಿವಮೊಗ್ಗ | ಡಿವಿಎಸ್ ಕಾಲೇಜಿನ ಆಂತರಿಕ ಚುನಾವಣೆಯಲ್ಲಿ NSUI ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಶಿವಮೊಗ್ಗ, ಡಿವಿಎಸ್ ಕಾಲೇಜಿನ ಆಂತರಿಕ ಚುನಾವಣೆಯಲ್ಲಿ NSUI ಬೆಂಬಲಿತ ಅಭ್ಯರ್ಥಿಗಳು ಜಯಶಾಲಿಯಾಗಿದ್ದು,...

ಯಾದಗಿರಿ | ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನಕ್ಕಾಗಿ ಸಮತಾ ಸೈನಿಕ ದಳ ಆಗ್ರಹ

ಶಹಾಪುರ ತಾಲೂಕಿನ ವಿವಿಧ ಗ್ರಾಮಗಳ ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನ...