ಗದಗ ಜಿಲ್ಲೆಯ ಎಲ್ಲಾ ಕಲಾವಿದರುಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೈಜ ಕಲಾವಿದರುಗಳ ಪಟ್ಟಿಯನ್ನು ತಯಾರಿಸಲು ಹಾಗೂ ಗುರುತಿನ ಚೀಟಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಎಲ್ಲಾ ಕಲಾವಿದರುಗಳು ತಮ್ಮ ಹಾಗೂ ತಮ್ಮ ತಂಡದ ಎಲ್ಲಾ ಸಹ ಕಲಾವಿದರುಗಳ (ಈಗಾಗಲೇ ಗುರುತೀನ ಚೀಟಿ ಪಡೆದ ಕಲಾವಿದರನ್ನು ಹೊರತುಪಡಿಸಿ) ದಾಖಲೆಗಳ ಸಮೇತ ಮಾಹಿತಿಯನ್ನು ನಿಗದಿತ ಅರ್ಜಿ ನಮೂನೆಯಲ್ಲಿ ಸೆಪ್ಟೆಂಬರ್ 30 ರೊಳಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಕಚೇರಿಗೆ ಕಡ್ಡಾಯವಾಗಿ ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳಲು ತಿಳಿಸಿದೆ.
ನಿಗದಿತ ಅರ್ಜಿ ನಮೂನೆಯ ಮಾದರಿಯು ಇಲಾಖೆಯಲ್ಲಿ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:08372-221864 ಗೆ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಸವರಾಜ .ವ್ಹಿ. ಬಳ್ಳಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





