ಜಿಲ್ಲೆಯ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ 2026-27 ನೇ ಸಾಲಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಜಿಲ್ಲೆಯ ರೈತ ಮತ್ತು ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಗಸ್ಟ್ 29ಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಆಸಕ್ತ ರೈತರು ಅರ್ಜಿಗಳನ್ನು ತಮ್ಮ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಪಡೆದು ಸಂಪೂರ್ಣ ಮಾಹಿತಿಯನ್ನು ದಾಖಲಾತಿಗಳೊಂದಿಗೆ ಸಂಬಂಧಿಸಿದ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು.
“ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಂಪರ್ಕಿಸಬಹುದು” ಎಂದು ಗದಗ ಜಂಟಿ ಕೃಷಿ ನಿರ್ದೇಶಕರು ಹಾಗೂ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




